ಕರ್ನಾಟಕ ಹವಾಮಾನ ಏಪ್ರಿಲ್ 19; ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಏಪ್ರಿಲ್ 19: ಕರ್ನಾಟಕದಲ್ಲಿ ಉದ್ದಗಲಕ್ಕೂ ಒಣಹವೆ, ತಾಪಮಾನ ಹೆಚ್ಚಳ ಇದ್ದರೂ ಇಂದು (ಏಪ್ರಿಲ್ 19) ಕೆಲವು ಜಿಲ್ಲೆಗಳಲ್ಲಿ ವಾತಾವರಣ ಕೊಂಚ ತಂಪಾಗುವ ಸಾಧ್ಯತೆ ಇದೆ. ಕರಾವಳಿಯ ಮೂರು ಜಿಲ್ಲೆಗಳಲ್ಲಿ, ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.
ಬೆಂಗಳೂರು: ಕರ್ನಾಟಕದ ಕರಾವಳಿಯ ಮೂರು ಜಿಲ್ಲೆಗಳು, ದಕ್ಷಿಣ ಒಳನಾಡಿನ ಬೆಂಗಳೂರು ಸೇರಿ 16 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ಇದೆ. ಈ ಪೈಕಿ 4 ಜಿಲ್ಲೆಗಳಲ್ಲಿ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಹೇಳಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಕೆಲವು ಕಡೆ ಮಳೆಬಿದ್ದರೂ ಉಳಿದೆಡೆ ಒಣಹವೆ, ತಾಪಮಾನ ಹೆಚ್ಚಳ, ಆರ್ದ್ರತೆ ಇರಲಿದೆ. ದಕ್ಷಿಣ ಒಳನಾಡಿನ 17 ಜಿಲ್ಲೆಗಳಲ್ಲಿ ಕೂಡ ಇದೇ ರೀತಿ ಒಣಹವೆ, ತಾಪಮಾನ ಹೆಚ್ಚಳ ಮುಂದುವರಿಯಲಿದೆ ಎಂದು ವರದಿ ಹೇಳಿದೆ.
ಬೆಂಗಳೂರು ಹವಾಮಾನ ಕೇಂದ್ರದ ವರದಿ ಪ್ರಕಾರ, ಇಂದು (ಏಪ್ರಿಲ್ 19) ಬೆಳಗ್ಗೆ 8.30ರ ತನಕ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡಗಳಲ್ಲಿ ಒಣಹವೆ, ತಾಪಮಾನ ಹೆಚ್ಚಳ, ಆರ್ದ್ರತೆ ಇರಲಿದೆ. ಆ ಬಳಿಕ ನಾಳೆ ಬೆಳಗ್ಗೆ 8.30ರ ತನಕ ದಕ್ಷಿಣ ಕನ್ನಡದ ಕೆಲವು ಕಡೆ ಹಗುರ ಚದುರಿದ ಮಳೆ ಬೀಳಬಹುದು. ಇಷ್ಟಾದರೂ ತಾಪಮಾನ ಹೆಚ್ಚಳದ ಬಿಸಿ, ಆರ್ದ್ರತೆ ಮುಂದುವರಿಯಲಿದೆ. ಮುಂದಿನ 5 ದಿನಗಳ ಕಾಲ ತಾಪಮಾನ ಇನ್ನಷ್ಟು ಅಂದರೆ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಬಹುದು ಎಂದು ವರದಿ ಹೇಳಿದೆ.
ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಗಳಲ್ಲಿ ಒಣಹವೆಯೊಂದಿಗೆ ಒಂದೆರಡು ಕಡೆ ಚದುರಿದ ಹಗುರ ಮಳೆಯಾಬಹುದು. ಉಳಿದಂತೆ ಬಾಗಲಕೋಟೆ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರಗಳಲ್ಲಿ ಒಣಹವೆ ಮುಂದುವರಿಯಲಿದೆ. ಒಂದೆರಡು ಕಡೆ ಗುಡುಗು ಮಿಂಚು, ಬಿರುಗಾಳಿ ಕಾಣಬಹುದು. ಉತ್ತರ ಒಳನಾಡಿನ ಬಹುತೇಕ ಕಡೆಗಳಲ್ಲಿ ಗರಿಷ್ಠ ತಾಪಮಾನ 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಏರಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ದಕ್ಷಿಣ ಒಳನಾಡಿನ ಬಳ್ಳಾರಿಯಲ್ಲಿ ಒಣಹವೆ ಮುಂದುವರಿಯಲಿದೆ. ಇಲ್ಲಿ ಮಳೆಯ ಲಕ್ಷಣವೇ ಇಲ್ಲ. ಇದು ಬಿಟ್ಟು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರಗಳಲ್ಲಿ ಇಂದು ಒಂದೆರಡು ಕಡೆ ಚದುರಿದ ಹಗುರ ಮಳೆಯಾಗಬಹುದು. ಈ ಪೈಕಿ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆ ಗುಡುಗು ಮಿಂಚು ಮತ್ತು ಬಿರುಗಾಳಿ ಕಂಡುಬರಬಹುದು ಎಂದು ವರದಿ ಹೇಳಿದೆ.
ಬೆಂಗಳೂರು ಹವಾಮಾನ ಇಂದು (ಏಪ್ರಿಲ್ 19), ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಇಂದು (ಏಪ್ರಿಲ್ 19) ಗರಿಷ್ಠ ತಾಪಮಾನವು 37 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಏಪ್ರಿಲ್ 18) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 35.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 37 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಏಪ್ರಿಲ್ 18) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 36.7 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 24.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಏಪ್ರಿಲ್ 19) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 31 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 46)
ಮಂಗಳೂರು – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 80)
ಚಿತ್ರದುರ್ಗ – 27.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 81)
ಗದಗ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 81)
ಹೊನ್ನಾವರ – 23.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)
ಕಲಬುರಗಿ – 34.3 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 33)
ಬೆಳಗಾವಿ – 33.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 44)
ಕಾರವಾರ – 34.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 68 )
----------------------
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)