ರಾಮನಗರ, ಚಾಮರಾಜನಗರಗಳಲ್ಲಿ ಇಂದು ವ್ಯಾಪಕ ಮಳೆ, ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಹನಿಮಳೆ, ಕರ್ನಾಟಕ ಹವಾಮಾನ-weather today august 12 karnataka rains widespread rain in ramanagara chamarajanagar bengaluru weather uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ರಾಮನಗರ, ಚಾಮರಾಜನಗರಗಳಲ್ಲಿ ಇಂದು ವ್ಯಾಪಕ ಮಳೆ, ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಹನಿಮಳೆ, ಕರ್ನಾಟಕ ಹವಾಮಾನ

ರಾಮನಗರ, ಚಾಮರಾಜನಗರಗಳಲ್ಲಿ ಇಂದು ವ್ಯಾಪಕ ಮಳೆ, ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಹನಿಮಳೆ, ಕರ್ನಾಟಕ ಹವಾಮಾನ

Karnataka Rains Today; ಕರ್ನಾಟಕದಲ್ಲಿ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ. ರಾಮನಗರ, ಚಾಮರಾಜನಗರಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್‌ ಘೋ‍ಷಣೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಚದುರಿದ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ರಾಮನಗರ, ಚಾಮರಾಜನಗರಗಳಲ್ಲಿ ಇಂದು ವ್ಯಾಪಕ ಮಳೆ, ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಹನಿಮಳೆಯಾಗಲಿದೆ ಎಂದು ಕರ್ನಾಟಕ ಹವಾಮಾನ ವರದಿ ತಿಳಿಸಿದೆ.
ರಾಮನಗರ, ಚಾಮರಾಜನಗರಗಳಲ್ಲಿ ಇಂದು ವ್ಯಾಪಕ ಮಳೆ, ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಹನಿಮಳೆಯಾಗಲಿದೆ ಎಂದು ಕರ್ನಾಟಕ ಹವಾಮಾನ ವರದಿ ತಿಳಿಸಿದೆ.

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಸದ್ಯ ಕಡಿಮೆಯಾಗಿದ್ದು, ಇಂದು (ಆಗಸ್ಟ್ 12) ರಾಮನಗರ, ಚಾಮರಾಜನಗರಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇಲ್ಲಿ ತುಸು ಹೆಚ್ಚು ಮಳೆಯಾಗಲಿರುವ ಕಾರಣ ಹವಾಮಾನ ಇಲಾಖೆ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನುಳಿಂದತೆ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ವ್ಯಾಪಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಕೂಡ ಹಲಡೆವೆ ವ್ಯಾಪಕ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಆಗಸ್ಟ್ 13ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಅಂದರೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ವ್ಯಾಪಕ ಮಳೆಯಾಗಲಿದೆ. ಆದರೆ ಧಾರಾಕಾರ ಮಳೆಯಲ್ಲ. ಬಿಟ್ಟು ಬಿಟ್ಟು ಸುರಿಯುವಂತಹ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಇನ್ನುಳಿದಂತೆ, ಕರ್ನಾಟಕದ ಉತ್ತರ ಒಳನಾಡಿನ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ. ಇದೇ ರೀತಿ, ದಕ್ಷಿಣ ಒಳನಾಡಿನ ಹಾಸನ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ,ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಯೆಲ್ಲೋ ಅಲರ್ಟ್‌ ಇರುವ ಜಿಲ್ಲೆ

ರಾಮನಗರ, ಚಾಮರಾಜನಗರ

ಇದನ್ನೂ ಓದಿ| 👉🏻 ಆಹಾರ, ಆರೋಗ್ಯ, ಆನಂದ ವೈವಿಧ್ಯ ಬರಹಗಳಿಗಾಗಿ https://kannada.hindustantimes.com/lifestyle ಗಮನಿಸಬಹುದು.

ಬೆಂಗಳೂರು ಹವಾಮಾನ ಇಂದು (ಆಗಸ್ಟ್ 12); ನಗರ, ಗ್ರಾಮಾಂತರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆ

ಬೆಂಗಳೂರು ನಗರದಲ್ಲಿ ಇಂದು (ಆಗಸ್ಟ್ 12) ಹಲವೆಡೆ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಆಗಸ್ಟ್ 11) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 28.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಆಗಸ್ಟ್‌ 12) ಗರಿಷ್ಠ ತಾಪಮಾನ 28.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಆಗಸ್ಟ್ 12 ) ಬೆಳಗ್ಗೆ 8 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 21 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 86)

ಮಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಚಿತ್ರದುರ್ಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಗದಗ – 22 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)

ಹೊನ್ನಾವರ – 24.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)

ಕಲಬುರಗಿ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88)

ಬೆಳಗಾವಿ – 22 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 31.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)