ಬೆಂಗಳೂರು, ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರಗಳಲ್ಲಿ ವ್ಯಾಪಕ ಮಳೆ, ಮಂಗಳವಾರ ಕರ್ನಾಟಕದ ಹವಾಮಾನ ಹೀಗಿರಲಿದೆ
Karnataka Rains Today; ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಇಂದು ಮಳೆಯಾಗಲಿದ್ದು, ಬೆಂಗಳೂರು, ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಹವಾಮಾನ ಮುನ್ಸೂಚನೆ ವರದಿಯಲ್ಲಿ ಹೇಳಿದೆ
ಬೆಂಗಳೂರು: ಕರ್ನಾಟಕದ ಉದ್ದಗಲಕ್ಕೂ ಮಳೆಯಾಗುತ್ತಿದ್ದು, ಮುಂಗಾರು ಮಳೆಯ ತೀವ್ರತೆಯಲ್ಲಿ ಏರಿಳಿತವೂ ಕಾಣುತ್ತಿದೆ. ಇಂದು (ಆಗಸ್ಟ್ 13) ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಉಳಿದಂತೆ ಎಲ್ಲ ಜಿಲ್ಲೆಗಳಲ್ಲೂ ವಾಡಿಕೆಯಂತೆ ಸಾಧಾರಣ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.
ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಆಗಸ್ಟ್ 14ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಜಿಲ್ಲೆಗಳ ಪೈಕಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚು ವರ್ಷಧಾರೆಯಾಗಬಹುದು. ಹೀಗಾಗಿ ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಇನ್ನುಳಿದಂತೆ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ವಿಜಯನಗರ, ಮೈಸೂರು, ಮಂಡ್ಯ, ತುಮಕೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ವರದಿ ಹೇಳಿದೆ.
ಅದೇ ರೀತಿ, ಕರ್ನಾಟಕದ ಉತ್ತರ ಒಳನಾಡಿನಲ್ಲಿ ಕೆಲವೇ ಜಿಲ್ಲೆಗಳಲ್ಲಿ ಇಂದು ಮಳೆ ಸುರಿಯಲಿದೆ. ಗದಗ, ಹಾವೇರಿ, ಕೊಪ್ಪಳ, ರಾಯಚೂರು ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ. ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಕಲಬುರಗಿ, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಈ ದಿನ ಮಳೆ ಇರಲ್ಲ.
ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಸುರಿಯುವಂತಹ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.
ಯೆಲ್ಲೋ ಅಲರ್ಟ್ ಇರುವ ಜಿಲ್ಲೆ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಚಾಮರಾಜನಗರ
ಬೆಂಗಳೂರು ಹವಾಮಾನ ಇಂದು (ಆಗಸ್ಟ್ 13); ನಗರ, ಗ್ರಾಮಾಂತರ ಜಿಲ್ಲೆಗಳ ಹಲವೆಡೆ ವ್ಯಾಪಕ ಮಳೆ, ಯೆಲ್ಲೋ ಅಲರ್ಟ್
ಬೆಂಗಳೂರು ನಗರದಲ್ಲಿ ಇಂದು (ಆಗಸ್ಟ್ 13) ಹಲವೆಡೆ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ಇಂದು ವ್ಯಾಪಕ ಮಳೆಯಾಗಲಿದೆ. ನಿನ್ನೆ (ಆಗಸ್ಟ್ 12) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 30.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 19.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ನಗರ ಜಿಲ್ಲೆಯಲ್ಲಿ 74 ಮಿಮೀ ಮಳೆ ಬಿದ್ದಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಆಗಸ್ಟ್ 12) ಗರಿಷ್ಠ ತಾಪಮಾನ 29.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20.1 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. 9.8 ಮಿಮೀ ಮಳೆಯಾಗಿತ್ತು.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಆಗಸ್ಟ್ 13 ) ಬೆಳಗ್ಗೆ 7 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 23.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 85)
ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಚಿತ್ರದುರ್ಗ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)
ಗದಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)
ಹೊನ್ನಾವರ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 87)
ಕಲಬುರಗಿ – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)
ಬೆಳಗಾವಿ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)
ಕಾರವಾರ – 30.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74 )
----------------------
(This copy first appeared in Hindustan Times Kannada website. To read more like this please logon to kannada.hindustantimes.com)