ಕರ್ನಾಟಕ ಹವಾಮಾನ; ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು, ಉಳಿದ ಜಿಲ್ಲೆಗಳ ಹಲವೆಡೆ ವರ್ಷಧಾರೆ-weather today august 8 karnataka rains widespread rain in coastal karnataka bengaluru weather karnataka rains uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ; ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು, ಉಳಿದ ಜಿಲ್ಲೆಗಳ ಹಲವೆಡೆ ವರ್ಷಧಾರೆ

ಕರ್ನಾಟಕ ಹವಾಮಾನ; ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು, ಉಳಿದ ಜಿಲ್ಲೆಗಳ ಹಲವೆಡೆ ವರ್ಷಧಾರೆ

Karnataka Weather Today; ಕರ್ನಾಟಕದಲ್ಲಿ ಎಲ್ಲ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು ಮಳೆಯಾದರೆ, ಉಳಿದ ಜಿಲ್ಲೆಗಳ ಹಲವೆಡೆ ವರ್ಷಧಾರೆಯಾಗಲಿದೆ.

ಕರ್ನಾಟಕ ಹವಾಮಾನ; ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು, ಉಳಿದ ಜಿಲ್ಲೆಗಳ ಹಲವೆಡೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ; ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು, ಉಳಿದ ಜಿಲ್ಲೆಗಳ ಹಲವೆಡೆ ವರ್ಷಧಾರೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆಯ ತೀವ್ರತೆ ಸದ್ಯ ಕಡಿಮೆಯಾಗಿದ್ದು, ಇನ್ನು ಕೆಲವು ದಿನ ಸಾಧಾರಣ ಮಳೆಯಾಗುವ ಲಕ್ಷಣಗಳು ಗೋಚರಿಸಿವೆ. ಇಂದು (ಆಗಸ್ಟ್ 8) ವಿಶೇಷವಾಗಿ ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಬಹುದು. ಇನ್ನುಳಿದಂತೆ ಉಳಿದ ಎಲ್ಲ ಜಿಲ್ಲೆಗಳಲ್ಲಿ ಹಲವೆಡೆ ವರ್ಷಧಾರೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಆಗಸ್ಟ್ 9ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಈ ಪೈಕಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಲಿದ್ದು, ಮುನ್ನೆಚ್ಚರಿಕೆಯ ಕ್ರಮವಾಗಿ ಈ ಜಿಲ್ಲೆಯಲ್ಲಿ ಇಂದು ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ಇನ್ನುಳಿದಂತೆ, ಕರ್ನಾಟಕದ ಉತ್ತರ ಒಳನಾಡಿನ, ಬಾಗಲಕೋಟೆ, ಬೀದರ್, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ. ಇದೇ ರೀತಿ, ದಕ್ಷಿಣ ಒಳನಾಡಿನ ಹಾಸನ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು,ರಾಮನಗರ, ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಯೆಲ್ಲೋ ಅಲರ್ಟ್‌ ಇರುವ ಜಿಲ್ಲೆ -ಉತ್ತರ ಕನ್ನಡ

ಬೆಂಗಳೂರು ಹವಾಮಾನ ಇಂದು (ಆಗಸ್ಟ್ 8); ನಗರ, ಗ್ರಾಮಾಂತರ ಜಿಲ್ಲೆಗಳ ಹಲವೆಡೆ ಸಾಧಾರಣ ಮಳೆ

ಬೆಂಗಳೂರು ನಗರದಲ್ಲಿ ಇಂದು (ಆಗಸ್ಟ್ 8) ಹಲವೆಡೆ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಶಿಯಸ್ ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಆಗಸ್ಟ್ 8) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 29.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಆಗಸ್ಟ್‌ 8) ಗರಿಷ್ಠ ತಾಪಮಾನ 29.9 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಆಗಸ್ಟ್ 8 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 21.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 86)

ಮಂಗಳೂರು – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಚಿತ್ರದುರ್ಗ – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಗದಗ – 22 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)

ಹೊನ್ನಾವರ – 24.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)

ಕಲಬುರಗಿ – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಬೆಳಗಾವಿ – 22 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 26.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94 )