ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜುಲೈ1 : ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಎಲ್ಲ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಜುಲೈ1 : ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಎಲ್ಲ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಜುಲೈ 1 ; ರಾಜ್ಯದಲ್ಲಿ ಮುಂಗಾರು ಮಳೆ ವ್ಯಾಪಿಸತೊಡಗಿದ್ದು, ಇಂದು ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಮಳೆ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗಲಿದೆ. ಉಳಿದಂತೆ ಎಲ್ಲ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

ಕರ್ನಾಟಕ ಹವಾಮಾನ ಜುಲೈ1 : ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಎಲ್ಲ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆ ಮುನ್ಸೂಚನೆ (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಜುಲೈ1 : ಉಡುಪಿ ಸೇರಿ 6 ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್, ಎಲ್ಲ ಜಿಲ್ಲೆಗಳಲ್ಲೂ ಸಾಧಾರಣದಿಂದ ಭಾರಿ ಮಳೆ ಮುನ್ಸೂಚನೆ (ಸಾಂಕೇತಿಕ ಚಿತ್ರ) (Canva)

ಬೆಂಗಳೂರು: ಕರ್ನಾಟಕದ ಉದ್ದಗಲಕ್ಕೂ ಮುಂಗಾರು ಮಳೆ ವ್ಯಾಪಿಸಿದ್ದು, ಇಂದು (ಜುಲೈ 1) ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವ ಮಳೆ ಮುನ್ಸೂಚನೆಯನ್ನು ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ. ಉತ್ತರ ಒಳನಾಡಿನ ಕೆಲವೆಡೆ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಬಹುದು. ಒಟ್ಟಾರೆ ಎಲ್ಲ ಜಿಲ್ಲೆಗಳಲ್ಲೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 2ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಉಳಿದಂತೆ, ವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇಲ್ಲಿ ವ್ಯಾಪಕವಾಗಿ ಗಾಳಿ ಇರಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಲಿದೆ ಎಂದು ವರದಿ ಹೇಳಿದೆ.

ಉತ್ತರ ಒಳನಾಡಿನಲ್ಲಿ ಯಾವುದೇ ಮುನ್ನೆಚ್ಚರಿಕೆಗಳಿಲ್ಲ. ಬಾಗಲ ಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಯೆಲ್ಲೋ ಅಲರ್ಟ್ ಇರುವ ಜಿಲ್ಲೆಗಳಿವು

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು

ಬೆಂಗಳೂರು ಹವಾಮಾನ ಇಂದು (ಜುಲೈ 1); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಬೆಂಗಳೂರು ನಗರದಲ್ಲಿ ಇಂದು (ಜುಲೈ 1) ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜೂನ್ 30) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 29.7 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜೂನ್ 30) ಗರಿಷ್ಠ ತಾಪಮಾನ 30.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22.1 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 1 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)

ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಚಿತ್ರದುರ್ಗ – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಗದಗ – 23.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)

ಹೊನ್ನಾವರ – 26.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)

ಕಲಬುರಗಿ – 24.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)

ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)