ಕರ್ನಾಟಕ ಹವಾಮಾನ ಜುಲೈ 2; ಕರಾವಳಿ ಕರ್ನಾಟಕದಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್, ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಮಳೆ
ಕರ್ನಾಟಕ ಹವಾಮಾನ ಜುಲೈ 2; ರಾಜ್ಯದ ಕರಾವಳಿ ಭಾಗದ ಮೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಇಂದು ಕೂಡ ಮುಂದುವರಿಯಲಿದೆ ಕರಾವಳಿ ಕರ್ನಾಟಕದಲ್ಲಿ ಧಾರಾಕಾರ ಮಳೆ ಇರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ, ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆ ಬೀಳಲಿದೆ ಎಂದು ಮಳೆ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ.

ಬೆಂಗಳೂರು: ಕರಾವಳಿ ಕರ್ನಾಟಕದಲ್ಲಿ ಧಾರಾಕಾರ ಮಳೆ ಮುಂದುವರಿದಿದ್ದು, ಇಂದು ಕೂಡ ಭಾರಿ ಮಳೆಯಾಗಲಿದೆ. ಆದ್ದರಿಂದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆ ಘೋಷಿಸಿದೆ. ಉಳಿದ ಜಿಲ್ಲೆಗಳಲ್ಲೂ ಹಲವೆಡೆ ಮಳೆಯಾಗಲಿದೆ.
ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 3 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಇನ್ನುಳಿದಂತೆ, ಉತ್ತರ ಒಳನಾಡಿನಲ್ಲಿ ಯಾವುದೇ ಮುನ್ನೆಚ್ಚರಿಕೆಗಳಿಲ್ಲ. ಬಾಗಲ ಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ವರದಿ ಹೇಳಿದೆ.
ದಕ್ಷಿಣ ಒಳನಾಡಿನಲ್ಲಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗವಿಜಯನಗರ, ತುಮಕೂರು,ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಇಲ್ಲಿ ವ್ಯಾಪಕವಾಗಿ ಗಾಳಿ ಇರಲಿದ್ದು, ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಬೀಸಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಯೆಲ್ಲೋ ಅಲರ್ಟ್ ಇರುವ ಜಿಲ್ಲೆಗಳಿವು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ,
ಬೆಂಗಳೂರು ಹವಾಮಾನ ಇಂದು (ಜುಲೈ 2); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಬೆಂಗಳೂರು ನಗರದಲ್ಲಿ ಇಂದು (ಜುಲೈ 2) ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜುಲೈ 1) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 27.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜುಲೈ 2) ಗರಿಷ್ಠ ತಾಪಮಾನ 28.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 2 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 22 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)
ಮಂಗಳೂರು – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)
ಚಿತ್ರದುರ್ಗ – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಗದಗ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಹೊನ್ನಾವರ – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)
ಕಲಬುರಗಿ – 24.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 87)
ಬೆಳಗಾವಿ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಕಾರವಾರ – 28.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94 )
----------------------
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.