ಕರ್ನಾಟಕ ಹವಾಮಾನ ಜುಲೈ 12; ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ದಕ್ಷಿಣ ಕನ್ನಡ, ಬೆಳಗಾವಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಭಾರಿಮಳೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜುಲೈ 12; ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ದಕ್ಷಿಣ ಕನ್ನಡ, ಬೆಳಗಾವಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಭಾರಿಮಳೆ

ಕರ್ನಾಟಕ ಹವಾಮಾನ ಜುಲೈ 12; ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ದಕ್ಷಿಣ ಕನ್ನಡ, ಬೆಳಗಾವಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಭಾರಿಮಳೆ

ಕರ್ನಾಟಕ ಹವಾಮಾನ ಜುಲೈ 12; ರಾಜ್ಯದೆಲ್ಲೆಡೆ ಮಳೆಯಾಗಲಿದ್ದು, ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ದಕ್ಷಿಣ ಕನ್ನಡ, ಬೆಳಗಾವಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗಬಹುದು. ಕೆಲವು ಕಡೆ ಗುಡುಗು ಮಿಂಚು, ಬಿರುಗಾಳಿ ಕೂಡ ಇರಲಿದೆ ಎಂದು ಹಮಾವಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ತಿಳಿಸಿದೆ.

ಕರ್ನಾಟಕ ಹವಾಮಾನ ಜುಲೈ 12; ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ದಕ್ಷಿಣ ಕನ್ನಡ, ಬೆಳಗಾವಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಕರ್ನಾಟಕ ಹವಾಮಾನ ಜುಲೈ 12; ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್‌, ದಕ್ಷಿಣ ಕನ್ನಡ, ಬೆಳಗಾವಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ವ್ಯಾಪಕವಾಗಿ ಬೀಳತೊಡಗಿದ್ದು, ಇಂದು (ಜುಲೈ 12) ಉತ್ತರ ಕನ್ನಡದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಬೆಳಗಾವಿ ಸೇರಿ 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 13 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆಯಾಗಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಮಳೆ ಸಂಬಂಧಿ ಅನಾಹುತಗಳು ಉಂಟಾಗಬಹುದು ಎಂದು ಆರೆಂಜ್ ಅಲರ್ಟ್‌ ಘೋಷಿಸಿದೆ. ಇದೇ ವೇಳೆ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋ‍ಷಿಸಲಾಗಿದೆ. ಇನ್ನುಳಿದಂತೆ, ಉತ್ತರ ಒಳನಾಡಿನಲ್ಲಿ ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ದಕ್ಷಿಣ ಒಳನಾಡಿನಲ್ಲಿ ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು,ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಯೆಲ್ಲೋ ಅಲರ್ಟ್ ಇರುವ ಜಿಲ್ಲೆಗಳಿವು

ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ

ಬೆಂಗಳೂರು ಹವಾಮಾನ ಇಂದು (ಜುಲೈ 12); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಬೆಂಗಳೂರು ನಗರದಲ್ಲಿ ಇಂದು (ಜುಲೈ 12) ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜುಲೈ 11) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 30.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜುಲೈ 11) ಗರಿಷ್ಠ ತಾಪಮಾನ 31.5 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 12 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 22 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)

ಮಂಗಳೂರು – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಚಿತ್ರದುರ್ಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಗದಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಹೊನ್ನಾವರ – 25.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಕಲಬುರಗಿ – 25.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 96)

ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 87 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

Whats_app_banner