ಕರ್ನಾಟಕ ಹವಾಮಾನ ಜುಲೈ 26; ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, ಮತ್ತೆ ತೀವ್ರಗೊಂಡ ಮುಂಗಾರು ಮಳೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜುಲೈ 26; ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, ಮತ್ತೆ ತೀವ್ರಗೊಂಡ ಮುಂಗಾರು ಮಳೆ

ಕರ್ನಾಟಕ ಹವಾಮಾನ ಜುಲೈ 26; ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, ಮತ್ತೆ ತೀವ್ರಗೊಂಡ ಮುಂಗಾರು ಮಳೆ

ಕರ್ನಾಟಕ ಹವಾಮಾನ ಜುಲೈ 26; ರಾಜ್ಯದಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋಷಣೆಯಾಗಿದೆ. 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿರುವ ಹವಾಮಾನ ಇಲಾಖೆ, ಮುಂಗಾರು ಮಳೆ ಮತ್ತೆ ತೀವ್ರಗೊಳ್ಳುತ್ತಿರುವ ಮುನ್ಸೂಚನೆ ನೀಡಿದೆ.

ಕರ್ನಾಟಕ ಹವಾಮಾನ ಜುಲೈ 26; ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋ‍ಷಣೆಯಾಗಿದೆ. ರಾಜ್ಯದಲ್ಲಿ ಮತ್ತೆ ತೀವ್ರಗೊಂಡ ಮುಂಗಾರು ಮಳೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಜುಲೈ 26; ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌ ಘೋ‍ಷಣೆಯಾಗಿದೆ. ರಾಜ್ಯದಲ್ಲಿ ಮತ್ತೆ ತೀವ್ರಗೊಂಡ ಮುಂಗಾರು ಮಳೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕದ ಕರಾವಳಿ ಸೇರಿ 7 ಜಿಲ್ಲೆಗಳಲ್ಲಿ ಮಳೆಯ ತೀವ್ರತೆ ಹೆಚ್ಚಾಗಿದ್ದು, ಅಲ್ಲಿ ಇಂದು (ಜುಲೈ 26) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮತ್ತೆ ತೀವ್ರಗೊಂಡ ಮುಂಗಾರು ಮಳೆಯ ಸುಳಿವು ನೀಡಿರುವ ಹವಾಮಾನ ಇಲಾಖೆಯು, 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋ‍ಷಿಸಿದೆ. ಉಳಿದಂತೆ ರಾಜ್ಯದೆಲ್ಲೆಡೆ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ತಿಳಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 27 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬೆಳಗಾವಿ, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಭಾಗದಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.

ಇನ್ನುಳಿದಂತೆ, ಉತ್ತರ ಒಳನಾಡಿನ ಬೀದರ್, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅಂತೆಯೇ, ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ತುಮಕೂರು,ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಆರೆಂಜ್ ಅಲರ್ಟ್ ಇರುವ ಜಿಲ್ಲೆ

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಬೆಳಗಾವಿ,

ಯೆಲ್ಲೋ ಅಲರ್ಟ್ ಇರುವ ಜಿಲ್ಲೆ

ಕಲುಬರಗಿ, ವಿಜಯಪುರ, ಯಾದಗಿರಿ, ಬೀದರ್, ಹಾಸನ,

ಬೆಂಗಳೂರು ಹವಾಮಾನ ಇಂದು (ಜುಲೈ 26); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ

ಬೆಂಗಳೂರು ನಗರದಲ್ಲಿ ಇಂದು (ಜುಲೈ 26) ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜುಲೈ 24) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜುಲೈ 24) ಗರಿಷ್ಠ ತಾಪಮಾನ 28.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 26 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 82)

ಮಂಗಳೂರು – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಚಿತ್ರದುರ್ಗ – 22.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)

ಗದಗ – 22.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)

ಹೊನ್ನಾವರ – 26.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 97)

ಕಲಬುರಗಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಬೆಳಗಾವಿ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಕಾರವಾರ – 27.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94 )

----------------------

(ಕನ್ನಡದಲ್ಲಿ ಸ್ಪಷ್ಟ ಸುದ್ದಿ, ನಿಖರ ವಿಶ್ಲೇಷಣೆ, ಸಮಗ್ರ ಮಾಹಿತಿಗೆ ಎಚ್‌ಟಿ ಕನ್ನಡ ಬೆಸ್ಟ್‌. ಕರ್ನಾಟಕದ ತಾಜಾ ವಿದ್ಯಮಾನ, ಅದೇ ರೀತಿ ರಾಜಕೀಯ ವಿಶ್ಲೇಷಣೆ, ದೇಶ ಮತ್ತು ಜಗತ್ತಿನ ವಿದ್ಯಮಾನಗಳ ವರದಿಗಳನ್ನು ಓದಲು kannada.hindustantimes.com/nation-and-world ಕ್ಕೆ ಭೇಟಿ ನೀಡಿ.)

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner