ಕರ್ನಾಟಕ ಹವಾಮಾನ ಜುಲೈ 28; ಉತ್ತರ ಕನ್ನಡದಲ್ಲಿ ಮುಂದುವರಿದ ಧಾರಾಕಾರ ಮಳೆ, ಆರೆಂಜ್ ಅಲರ್ಟ್, 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ಕರ್ನಾಟಕ ಹವಾಮಾನ ಜುಲೈ 28; ಕರ್ನಾಟಕದಲ್ಲಿ ಇಂದು ಮಳೆ ತೀವ್ರತೆ ಕಡಿಮೆಯಾಗುವುದಾದರೂ ಉತ್ತರ ಕನ್ನಡದಲ್ಲಿ ಧಾರಾಕಾರ ಮಳೆ ಮುಂದುವರಿಯಲಿದೆ. ಭಾರಿ ಗಾಳಿ ಮಳೆ ಬೀಳಬಹುದಾದ ಕಾರಣ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ದಿನದ ಮಳೆ ಮುನ್ಸೂಚನೆ ವರದಿಯ ವಿವರ ಹೀಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಜುಲೈ 28) ಮಳೆಯ ತೀವ್ರತೆ ಕಡಿಮೆಯಾಗಿದ್ದರೂ ಉತ್ತರ ಕನ್ನಡದಲ್ಲಿ ಧಾರಕಾರ ಮಳೆ ಮುಂದುವರಿಯಲಿದೆ. ಭಾರಿ ಗಾಳಿ ಮಳೆ ಮುಂದುವರಿಯುವ ಕಾರಣ ಈ ಜಿಲ್ಲೆಯಲ್ಲಿ ಈ ದಿನ ಕೂಡ ಆರೆಂಜ್ ಅಲರ್ಟ್ ಮುಂದುವರಿಯಲಿದೆ. ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಇರಲಿದ್ದು, ಭಾರಿ ಗಾಳಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ವಿವರಿಸಿದೆ.
ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 29 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳ ಪೈಕಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ, ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಗಳಲ್ಲಿಇಂದು ಭಾರಿ ಗಾಳಿ ಮಳೆಯಾಗಬಹುದು. ಈ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ತೀವ್ರ ಮಳೆಯಾಗುತ್ತಿದ್ದು, ಅದು ಇಂದು ಕೂಡ ಮುಂದುವರಿಯಲಿದೆ. ಈ ಪ್ರದೇಶಗಳಲ್ಲಿ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಆದ್ದರಿಂದ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.
ಇನ್ನುಳಿದಂತೆ, ಉತ್ತರ ಒಳನಾಡಿನ ಬಾಗಲಕೋಟೆ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅಂತೆಯೇ, ದಕ್ಷಿಣ ಒಳನಾಡಿನ ಹಾಸನ, ಕೊಡಗು, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ಮೈಸೂರು, ಮಂಡ್ಯ, ಕೋಲಾರ, ತುಮಕೂರು,ರಾಮನಗರ, ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಆರೆಂಜ್ ಅಲರ್ಟ್ ಇರುವ ಜಿಲ್ಲೆ
ಉತ್ತರ ಕನ್ನಡ
ಯೆಲ್ಲೋ ಅಲರ್ಟ್ ಇರುವ ಜಿಲ್ಲೆ
ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು
ಬೆಂಗಳೂರು ಹವಾಮಾನ ಇಂದು (ಜುಲೈ 28); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆ
ಬೆಂಗಳೂರು ನಗರದಲ್ಲಿ ಇಂದು (ಜುಲೈ 28) ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಶಿಯಸ್ ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜುಲೈ 27) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 26.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜುಲೈ 27) ಗರಿಷ್ಠ ತಾಪಮಾನ 26.7 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 28 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 20.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)
ಮಂಗಳೂರು – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)
ಚಿತ್ರದುರ್ಗ – 22.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88)
ಗದಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)
ಹೊನ್ನಾವರ – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)
ಕಲಬುರಗಿ – 24.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)
ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)
ಕಾರವಾರ – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90 )
----------------------
(ಕನ್ನಡದಲ್ಲಿ ಸ್ಪಷ್ಟ ಸುದ್ದಿ, ನಿಖರ ವಿಶ್ಲೇಷಣೆ, ಸಮಗ್ರ ಮಾಹಿತಿಗೆಎಚ್ಟಿ ಕನ್ನಡ ಬೆಸ್ಟ್.ಕರ್ನಾಟಕದ ತಾಜಾ ವಿದ್ಯಮಾನ, ಅದೇ ರೀತಿರಾಜಕೀಯ ವಿಶ್ಲೇಷಣೆ, ದೇಶ ಮತ್ತು ಜಗತ್ತಿನ ವಿದ್ಯಮಾನಗಳ ವರದಿಗಳನ್ನು ಓದಲುkannada.hindustantimes.com/nation-and-world ಕ್ಕೆ ಭೇಟಿ ನೀಡಿ.)
(This copy first appeared in Hindustan Times Kannada website. To read more like this please logon to kannada.hindustantimes.com)