ಕರ್ನಾಟಕ ಹವಾಮಾನ ಜುಲೈ 18; ರಾಜ್ಯದಲ್ಲಿ ಮುಂಗಾರು ಮಳೆ, ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್
ಕರ್ನಾಟಕ ಹವಾಮಾನ ಜುಲೈ 18 (Karnataka Weather Today July 18 2024); ರಾಜ್ಯದೆಲ್ಲೆಡೆ ವ್ಯಾಪಕ ಮಳೆಯಾಗಲಿದ್ದು, ಕರಾವಳಿ, ಶಿವಮೊಗ್ಗ, ಚಿಕ್ಕಮಗಳೂರು ಕೊಡಗು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿರುವುದಾಗಿ ಹಮಾವಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ತಿಳಿಸಿದೆ.
ಬೆಂಗಳೂರು: ಕರ್ನಾಟಕದಲ್ಲಿ ಮುಂಗಾರು ಮಳೆ ವ್ಯಾಪಕವಾಗಿದ್ದು, ಇಂದು (ಜುಲೈ 19) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದೇ ರೀತಿ ಧಾರಾಕಾರ ಮಳೆ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲೂ ಸುರಿಯುತ್ತಿದ್ದು ಆ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ, ಬೆಳಗಾವಿ ಜಿಲ್ಲೆಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಿರುವ ಹವಾಮಾನ ಇಲಾಖೆ, ಉಳಿದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ನೀಡಿದೆ.
ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜುಲೈ 19 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಶಿವಮೊಗ್ಗ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಸತತ ಮಳೆಯಾಗುತ್ತಿರುವ ಕಾರಣ ಕೆಲವು ಕಡೆ ಅನಾಹುತಗಳಾಗಬಹುದು ಎಂದು ರೆಡ್ ಅಲರ್ಟ್ ಘೋಷಿಸಿದೆ. ಇದೇ ವೇಳೆ, ಉತ್ತರ ಒಳನಾಡಿನ ಬೀದರ್, ಕಲಬುರಗಿ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.
ದಕ್ಷಿಣ ಒಳನಾಡಿನಲ್ಲಿ ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ವಿಜಯನಗರ, ತುಮಕೂರು,ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಜಿಲ್ಲೆಗಳಲ್ಲಿ ಹಲವೆಡೆ ವ್ಯಾಪಕ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ರೆಡ್ ಅಲರ್ಟ್ ಇರುವ ಜಿಲ್ಲೆಗಳಿವು
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ
ಯೆಲ್ಲೋ ಅಲರ್ಟ್ ಇರುವ ಜಿಲ್ಲೆ
ಬೆಳಗಾವಿ
ಬೆಂಗಳೂರು ಹವಾಮಾನ ಇಂದು (ಜುಲೈ 18); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ವ್ಯಾಪಕ ಮಳೆ
ಬೆಂಗಳೂರು ನಗರದಲ್ಲಿ ಇಂದು (ಜುಲೈ 18) ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 27 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜುಲೈ 17) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 25.7 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 27 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜುಲೈ 17) ಗರಿಷ್ಠ ತಾಪಮಾನ 24.3 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 20.9 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜುಲೈ 18 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 21.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88)
ಮಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)
ಚಿತ್ರದುರ್ಗ – 22.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)
ಗದಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)
ಹೊನ್ನಾವರ – 24.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)
ಕಲಬುರಗಿ – 25.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 85)
ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)
ಕಾರವಾರ – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95 )
----------------------
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
ವಿಭಾಗ