ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜೂನ್ 5; ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ವ್ಯಾಪಕ ಮಳೆ

ಕರ್ನಾಟಕ ಹವಾಮಾನ ಜೂನ್ 5; ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ವ್ಯಾಪಕ ಮಳೆ

ಕರ್ನಾಟಕ ಹವಾಮಾನ ಜೂನ್ 5; ರಾಜ್ಯದಲ್ಲಿ ಇಂದು (ಜೂನ್ 5) ಮುಂಗಾರು ಮಳೆ ನಿಧಾನವಾಗಿ ರಾಜ್ಯವನ್ನು ವ್ಯಾಪಿಸಲಾರಂಭಿಸಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಜೂನ್ 5; ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ವ್ಯಾಪಕ ಮಳೆ ಆಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಜೂನ್ 5; ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌, ವ್ಯಾಪಕ ಮಳೆ ಆಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕದ ಎಲ್ಲ ಜಿಲ್ಲೆಗಳನ್ನೂ ಮಳೆ ಆವರಿಸತೊಡಗಿದ್ದು, ಇಂದು (ಜೂ 5) ಶಿವಮೊಗ್ಗ, ಹಾಸನ, ಚಿತ್ರದುರ್ಗ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಿರುವ ಭಾರತದ ಹವಾಮಾನ ಇಲಾಖೆ, ರಾಜ್ಯದ ಎಲ್ಲೆಡೆ ವ್ಯಾಪಕವಾಗಿ ಮಳೆಯಾಗಬಹುದು ಎಂದು ಹೇಳಿದೆ. ಕೆಲವು ಕಡೆ ಸಾಧಾರಣ ಮಳೆ ಸುರಿಯಬಹುದು ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಪ್ರಕಟಿಸಿದ ಮಳೆ ಮುನ್ಸೂಚನೆ ವರದಿ ಪ್ರಕಾರ ಜೂನ್ 6 ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಇನ್ನು ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹಲವೆಡೆ ಮಳೆಯಾಗಲಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೊಡಗು,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಕೋಲಾರ, ವಿಜಯನಗರ, ಚಿತ್ರದುರ್ಗ,ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಇದೇ ವೇಳೆ ಕೆಲವು ಕಡೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿಯೂ ಇರಲಿದೆ ಎಂದು ವರದಿ ವಿವರಿಸಿದೆ.

ಯೆಲ್ಲೋ ಅಲರ್ಟ್‌ ಯಾವ ಜಿಲ್ಲೆಗಳಿಗೆ

ದಕ್ಷಿಣ ಕನ್ನಡ

ಉಡುಪಿ

ಉತ್ತರ ಕನ್ನಡ

ಬೆಳಗಾವಿ

ಗದಗ

ಕೊಪ್ಪಳ

ರಾಯಚೂರು

ಬಳ್ಳಾರಿ

ಚಿತ್ರದುರ್ಗ

ದಾವಣಗೆರೆ

ಹಾಸನ

ಶಿವಮೊಗ್ಗ

ಬೆಂಗಳೂರು ಹವಾಮಾನ ಇಂದು (ಜೂನ್ 5); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಇಂದು (ಜೂನ್ 5) ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು.ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಶಿಯಸ್ ಕನಿಷ್ಠ 19 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 19 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜೂನ್ 4) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 29.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.9 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 29.9 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22.5 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 5 ) ಬೆಳಗ್ಗೆ 7 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 23.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಚಿತ್ರದುರ್ಗ – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಗದಗ – 23.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಹೊನ್ನಾವರ – 25.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಕಲಬುರಗಿ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 99)

ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 31.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 63 )

----------------------

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

(This copy first appeared in Hindustan Times Kannada website. To read more like this please logon to kannada.hindustantimes.com)

ಟಿ20 ವರ್ಲ್ಡ್‌ಕಪ್ 2024

ವಿಭಾಗ