ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಜೂನ್ 8: ಉಡುಪಿ ಸೇರಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕರಾವಳಿ ಜಿಲ್ಲೆ, ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆ

ಕರ್ನಾಟಕ ಹವಾಮಾನ ಜೂನ್ 8: ಉಡುಪಿ ಸೇರಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕರಾವಳಿ ಜಿಲ್ಲೆ, ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆ

ಕರ್ನಾಟಕ ಹವಾಮಾನ ಜೂನ್ 8; ರಾಜ್ಯದಲ್ಲಿ ಇಂದು ಬಹುತೇಕ ಎಲ್ಲ ಜಿಲ್ಲೆಗಳಲ್ಲೂ ಮಳೆ ಸುರಿಯಲಿದೆ. ಕರಾವಳಿ ಜಿಲ್ಲೆ ಮತ್ತು ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಬಹುದು. ಉಡುಪಿ ಸೇರಿ 5 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್‌, ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ ಸೇರಿ 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ನೀಡಿದೆ.

ಕರ್ನಾಟಕ ಹವಾಮಾನ ಜೂನ್ 8: ಉಡುಪಿ ಸೇರಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕರಾವಳಿ ಜಿಲ್ಲೆ, ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಕರ್ನಾಟಕ ಹವಾಮಾನ ಜೂನ್ 8: ಉಡುಪಿ ಸೇರಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಕರಾವಳಿ ಜಿಲ್ಲೆ, ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಜೂನ್ 8) ಕರಾವಳಿ ಜಿಲ್ಲೆಗಳು, ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವಡೆ ಮಳೆಯಾಗಲಿದ್ದು, ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ ಸೇರಿ 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆಯಾಗಿದ್ದು, ಕರಾವಳಿ ಜಿಲ್ಲೆ, ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆ ಮುನ್ಸೂಚನೆಯನ್ನು ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಜೂನ್ 9ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಲಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್‌, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಕೆಲವು ಕಡೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಬಹುದು. 30 ರಿಂದ 40 ಕಿ.ಮೀ. ವೇಗದ ಬಿರುಗಾಳಿಯೂ ಇರಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದ್ದು, ಕೆಲವೆಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.

ಆರೆಂಜ್ ಅಲರ್ಟ್‌ ಯಾವ ಜಿಲ್ಲೆಗಳಿಗೆ

ಹಾವೇರಿ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿ

ಯೆಲ್ಲೋ ಅಲರ್ಟ್ ಯಾವ ಜಿಲ್ಲೆಗಳಿಗೆ

ದಕ್ಷಿಣ ಕನ್ನಡ, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ವಿಜಯಪುರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ

ಬೆಂಗಳೂರು ಹವಾಮಾನ ಇಂದು (ಜೂನ್ 8); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಇಂದು (ಜೂನ್ 8) ಬಹುತೇಕ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜೂನ್ 7) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 31.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. 6.1 ಎಂಎಂ ಮಳೆ ಸುರಿದಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜೂನ್ 7) ಗರಿಷ್ಠ ತಾಪಮಾನ 30.8 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 22.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಕೆಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಿದ್ದು, 3.6 ಮಿ.ಮೀ. ಮಳೆ ಬಿದ್ದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 8 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಮಂಗಳೂರು – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)

ಚಿತ್ರದುರ್ಗ – 23.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಗದಗ – 22.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)

ಹೊನ್ನಾವರ – 24.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)

ಕಲಬುರಗಿ – 23.7 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 99)

ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 26.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 97 )

----------------------

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

(This copy first appeared in Hindustan Times Kannada website. To read more like this please logon to kannada.hindustantimes.com)

ಟಿ20 ವರ್ಲ್ಡ್‌ಕಪ್ 2024