ಕರ್ನಾಟಕ ಹವಾಮಾನ ಜೂನ್ 9; ಉಡುಪಿ ಸೇರಿ 4 ಜಿಲ್ಲೆಗಳಿಗೆ ರೆಡ್ ಅಲರ್ಟ್, ಬೆಳಗಾವಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್, ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಜೂನ್ 9; ರಾಜ್ಯದಲ್ಲಿ ಮುಂಗಾರು ಮಳೆ ವ್ಯಾಪಿಸತೊಡಗಿದ್ದು, ಇಂದು ಉಡುಪಿ ಸೇರಿ 4 ಜಿಲ್ಲೆಗಳಿಗೆ ರೆಡ್ ಅಲರ್ಟ್, ಬೆಳಗಾವಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮಳೆ ಮುನ್ಸೂಚನೆ ಸಿಕ್ಕಿದೆ. ಕರಾವಳಿ ಜಿಲ್ಲೆ, ಉತ್ತರ ಒಳನಾಡಿನಲ್ಲಿ ವ್ಯಾಪಕ ಮಳೆಯಾಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಬೆಂಗಳೂರು: ಮುಂಗಾರು ಮಳೆ ಕರ್ನಾಟಕದ ಉದ್ದಗಲಕ್ಕೂ ಮುಂಗಾರು ಮಳೆ ವ್ಯಾಪಿಸುತ್ತಿದ್ದು, ಇಂದು (ಜೂನ್ 9) ಉಡುಪಿ, ಉತ್ತರ ಕನ್ನಡ ಸೇರಿ 3 ಜಿಲ್ಲೆಗಳಲ್ಲಿ ರೆಡ್ ಅಲರ್ಟ್, ಬೆಳಗಾವಿ, ಗದಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಮತ್ತು ಇತರೆ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿರುವ ಮಳೆ ಮುನ್ಸೂಚನೆಯನ್ನು ಭಾರತದ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನೀಡಿದೆ.
ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 10ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರುಉ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಕೆಲವು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಬಿರುಗಾಳಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಬಹುದು.
ದಕ್ಷಿಣ ಒಳನಾಡಿನಲ್ಲಿ ಮಳೆಯ ತೀವ್ರತೆ ಕಡಿಮೆ ಇರಲಿದ್ದು, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವು ಕಡೆಗಳಲ್ಲಿ ಮಳೆಯಾಗಲಿದೆ. ಆದಾಗ್ಯೂ ಕೆಲವು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಬಿರುಗಾಳಿ ಗುಡುಗು ಸಿಡಿಲು ಸಹಿತ ಧಾರಾಕಾರ ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ರೆಡ್ ಅಲರ್ಟ್ ಇರುವ ಜಿಲ್ಲೆಗಳಿವು
ಉಡುಪಿ, ಉತ್ತರ ಕನ್ನಡ, ಹಾವೇರಿ
ಆರೆಂಜ್ ಅಲರ್ಟ್ ಇರುವ ಜಿಲ್ಲೆಗಳಿವು
ಬೆಳಗಾವಿ, ಗದಗ,
ಯೆಲ್ಲೋ ಅಲರ್ಟ್ ಇರುವ ಜಿಲ್ಲೆಗಳಿವು
ಶಿವಮೊಗ್ಗ, ಕೊಪ್ಪಳ, ಬಾಗಲಕೋಟೆ, ದಕ್ಷಿಣ ಕನ್ನಡ
ಬೆಂಗಳೂರು ಹವಾಮಾನ ಇಂದು (ಜೂನ್ 9); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ
ಬೆಂಗಳೂರು ನಗರದಲ್ಲಿ ಇಂದು (ಜೂನ್ 9) ಕೆಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಮಳೆ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಜೂನ್ 8) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. 14.5 ಎಂಎಂ ಮಳೆ ಸುರಿದಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಜೂನ್ 8) ಗರಿಷ್ಠ ತಾಪಮಾನ 30.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 21.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಕೆಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಿದ್ದು, 12.2 ಮಿ.ಮೀ. ಮಳೆ ಬಿದ್ದಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಜೂನ್ 9 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 21.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಮಂಗಳೂರು – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100)
ಚಿತ್ರದುರ್ಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)
ಗದಗ – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)
ಹೊನ್ನಾವರ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 96)
ಕಲಬುರಗಿ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 99)
ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)
ಕಾರವಾರ – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 100 )
----------------------
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)