ಕರ್ನಾಟಕ ಹವಾಮಾನ ಮಾರ್ಚ್ 19; ಬೆಂಗಳೂರಲ್ಲಿ ಭಾಗಶಃ ಮೋಡ, ಮೈಸೂರು, ಕೊಡಗು, ಬೀದರ್‌ನಲ್ಲಿ ಒಂದೆರಡು ಮಳೆ ನಿರೀಕ್ಷೆ
ಕರ್ನಾಟಕ ಹವಾಮಾನ ಮಾರ್ಚ್ 19: ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ಆಕಾಶ ಇರಲಿದೆ. ಅದೇ ರೀತಿ ತಾಪಮಾನ ಗರಿಷ್ಠ 35 ಇರಲಿದೆ. ನಾಡಿದ್ದು ಮಳೆ ನಿರೀಕ್ಷಿಸಬಹುದು. ಮೈಸೂರು, ಕೊಡಗು, ಬೀದರ್‌ನಲ್ಲಿ ಮಳೆ ನಿರೀಕ್ಷೆಇದೆ. ಒಳನಾಡಿನ ಹಲವೆಡೆ ತಾಪಮಾನ ಕಡಿಮೆಯಾಗಲಿದೆ ಎಂದು ಭಾರತದ ಹವಾಮಾನ ಇಲಾಖೆ ಮುನ್ಸೂಚನಾ ವರದಿ ಹೇಳಿದೆ.
ಬೆಂಗಳೂರು: ಕಳೆದ ಕೆಲವು ದಿನಗಳಿಂದ ಉಷ್ಣಾಂಶ ತೀವ್ರವಾಗಿ ಏರಿಕೆಯಾಗಿದ್ದ ಕರ್ನಾಟಕದಲ್ಲಿ ಇನ್ನು ತಾಪಮಾನ ಇಳಿಕೆಯ ನಿರೀಕ್ಷೆ. ನಿನ್ನೆಯಿಂದ ಕೆಲವೆಡೆ ಮಳೆ ಬೀಳತೊಡಗಿದ್ದು, ಮುಂದಿನ ಒಂದೆರಡು ದಿನ ವಿವಿಧೆಡೆ ಸಾಧಾರಣ ಮಳೆ ನಿರೀಕ್ಷಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ. ನಾಡಿದ್ದು ಮಳೆ ನಿರೀಕ್ಷಿಸಲಾಗುತ್ತಿದೆ. ಮೈಸೂರು, ಕೊಡಗು, ಬೀದರ್‌ನಲ್ಲಿ ಒಂದೆರಡು ಕಡೆ ಮಳೆ ನಿರೀಕ್ಷಿಸಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಬೆಂಗಳೂರಲ್ಲಿ ಇಂದು(ಮಾರ್ಚ್ 19) ಭಾಗಶಃ ಮೋಡ ಕವಿದ ವಾತಾವರಣ ಇದ್ದರೂ ಗರಿಷ್ಠ ತಾಪಮಾನ 35 ಡಿಗ್ರಿ ಆಸುಪಾಸಿನಲ್ಲೇ ಇರಲಿದೆ. ಇನ್ನು ಉಳಿದಂತೆ ಕರ್ನಾಟಕದ ಒಳನಾಡುಗಳಲ್ಲಿ ಹಲವೆಡೆ ತಾಪಮಾನ 40 ಡಿಗ್ರಿ ಸೆಲ್ಶಿಯಸ್ ದಾಟಿದ್ದು ಈಗ ನಿಧಾನವಾಗಿ ಇಳಿಕೆಯಾಗತೊಡಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ನಿನ್ನೆ (ಮಾರ್ಚ್ 18) ರಾಯಚೂರು ಜಿಲ್ಲೆಯ ಹಡಗನಹಾಳ್ ಹೋಬಳಿಯಲ್ಲಿ ಅತ್ಯಧಿಕ 42.9 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ರಾಯಚೂರು, ಬೀದರ್, ಬಳ್ಳಾರಿ ಮತ್ತು ಕಲಬುರಗಿ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ನಿನ್ನೆ 40 ಡಿಗ್ರಿ ಸೆಲ್ಶಿಯಸ್‌ನಿಂದ 42.9 ಡಿಗ್ರಿ ಸೆಲ್ಶಿಯಸ್ ನಡುವೆ ಗರಿಷ್ಠ ತಾಪಮಾನ ದಾಖಲಾಗಿದೆ.ನಿನ್ನೆ ರಾಜ್ಯದ ಉಳಿದ ಭಾಗಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯವಾಗಿದೆ.
ಮುಂದಿನ 48 ಗಂಟೆಗಳ ತಾಪಮಾನದ ಮುನ್ಸೂಚನೆ ಪ್ರಕಾರ,. ಕರ್ನಾಟಕದ ಒಳನಾಡಿನ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಗರಿಷ್ಠ ತಾಪಮಾನವು ವಾಡಿಕೆಗಿಂತಾ 2 ರಿಂದ 3°C ವರೆಗೆ ಹೆಚ್ಚು ಇರುವ ಸಾಧ್ಯತೆಯಿದೆ ಎಂದು ವರದಿ ಹೇಳಿದೆ.
ಬೆಂಗಳೂರು ಹವಾಮಾನ ಇಂದು (ಮಾ.19) ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಭಾಗಶಃ ಮೋಡಕವಿದ ಆಕಾಶ ಇದೆ., ರಾಜಧಾನಿಯ ಸುತ್ತಮುತ್ತ ನಾಡಿದ್ದು ಮಳೆ ನಿರೀಕ್ಷಿಸಬಹುದು. ಮುಂದಿನ ಎರಡು ದಿನಗಳಲ್ಲಿ ಮಳೆ ಬೀಳುವ ನಿರೀಕ್ಷೆ ಇದ್ದು, ನಾಳೆಯಿಂದಲೇ ತಾಪಮಾನ ಕಡಿಮೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.
ಇದೇ ರೀತಿ, ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು (ಮಾರ್ಚ್ 19) ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.18)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34.4 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 18) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 34..6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್ 19 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 31.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 29)
ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66)
ಚಿತ್ರದುರ್ಗ – 35 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 22)
ಗದಗ – 35 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 21)
ಹೊನ್ನಾವರ – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 59)
ಕಲಬುರಗಿ – 36.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 28)
ಬೆಳಗಾವಿ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 38)
ಕಾರವಾರ – 31 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 75 )
----------------------
(This copy first appeared in Hindustan Times Kannada website. To read more like this please logon to kannada.hindustantimes.com)
ವಿಭಾಗ