ಕನ್ನಡ ಸುದ್ದಿ  /  Karnataka  /  Weather Today March 20 Rain Expected In Koppal Raichur Yadgiri Kodagu Mandya Karnataka Weather Bengaluru Weather Uks

ಕರ್ನಾಟಕ ಹವಾಮಾನ ಮಾರ್ಚ್ 20; ಕೊಪ್ಪಳ, ರಾಯಚೂರು, ಯಾದಗಿರಿ, ಕೊಡಗು, ಮಂಡ್ಯದ ಮಳೆ ನಿರೀಕ್ಷೆ, ಬೆಂಗಳೂರಲ್ಲಿ ಭಾಗಶಃ ಮೋಡ

ಕರ್ನಾಟಕ ಹವಾಮಾನ ಮಾರ್ಚ್ 20; ಕೊಪ್ಪಳ, ರಾಯಚೂರು, ಯಾದಗಿರಿ, ಕೊಡಗು, ಮಂಡ್ಯದ ಒಂದೆರಡು ಕಡೆಗಳಲ್ಲಿ ಮಳೆ ನಿರೀಕ್ಷೆ ಮಾಡಬಹುದು. ಬೆಂಗಳೂರಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಉತ್ತರ ಒಳನಾಡು, ದಕ್ಷಿಣ ಒಳನಾಡಿನ ಒಂದರಡು ಕಡೆಗಳಲ್ಲಿ ಉಷ್ಣಾಂಶದಲ್ಲಿ ಏರಿಕೆ ಕಂಡುಬರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 20ರ ಮುನ್ಸೂಚನೆ ಪ್ರಕಾರ, ಕೊಪ್ಪಳ, ರಾಯಚೂರು, ಯಾದಗಿರಿ, ಕೊಡಗು, ಮಂಡ್ಯದ ಮಳೆ ನಿರೀಕ್ಷೆ ಮಾಡಬಹುದು.
ಕರ್ನಾಟಕ ಹವಾಮಾನ ಮಾರ್ಚ್ 20ರ ಮುನ್ಸೂಚನೆ ಪ್ರಕಾರ, ಕೊಪ್ಪಳ, ರಾಯಚೂರು, ಯಾದಗಿರಿ, ಕೊಡಗು, ಮಂಡ್ಯದ ಮಳೆ ನಿರೀಕ್ಷೆ ಮಾಡಬಹುದು. (IMD)

ಬೆಂಗಳೂರು: ಕರ್ನಾಟಕದಲ್ಲಿ ವಿಶೇಷವಾಗಿ ಕೊಪ್ಪಳ, ರಾಯಚೂರು, ಯಾದಗಿರಿ, ಕೊಡಗು, ಮಂಡ್ಯ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು (ಮಾರ್ಚ್‌ 20) ಮಳೆ ಬೀಳುವ ನಿರೀಕ್ಷೆ ಇದೆ. ಸಾಧಾರಣ ಮಳೆ ಇರಲಿದ್ದು, ಗುಡುಗು, ಮಿಂಚಿನ ಮುನ್ನೆಚ್ಚರಿಕೆ ಇಲ್ಲ. ಇನ್ನು ರಾಜ್ಯದ ಕೆಲವು ಕಡೆ ಉಷ್ಣಾಂಶ ಹೆಚ್ಚಳವಾದರೆ, ಇನ್ನು ಕೆಲವು ಕಡೆ ತಾಪಮಾನ ಇಳಿಕೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನಾ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರದ ಮಾಹಿತಿ ಪ್ರಕಾರ, ಮಾರ್ಚ್ 21ರ ಬೆಳಗ್ಗೆ ತನಕದ ರಾಜ್ಯದ ಮಳೆ ಮುನ್ಸೂಚನೆ ಹೀಗಿದೆ. ಮುಂದಿನ 24 ಗಂಟೆ ಅವಧಿಯಲ್ಲಿ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮೆಳಯಾಗುವ ಬಹಳಷ್ಟು ಸಾಧ್ಯತೆ ಇದೆ. ಕರಾವಳಿಯಲ್ಲಿ ಒಣಹವೆ ಮುಂದುವರಿಯಲಿದೆ. ಇನ್ನು ತಾಪಮಾನ ಮುನ್ಸೂಚನೆ ಗಮನಿಸುವುದಾದರೆ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಅಂದರೆ ಬಾಗಲಕೋಟೆ, ಕೊಪ್ಪಳ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಶಿಯಸ್‌ ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಅಂದರೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ನಿನ್ನೆ (ಮಾರ್ಚ್‌ 19)ರಾಯಚೂರು ಜಿಲ್ಲೆಯ ಹಡಗನ್‌ಹಾಳ್ ಹೋಬಳಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ ದಾಖಲಾಗಿದೆ. ಇಲ್ಲಿ 42.1 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿತ್ತು. ಇದೇ ಅವಧಿಯಲ್ಲಿ ರಾಯಚೂರು ಜಿಲ್ಲೆಯ ಹಡಗನಾಳ್‌, ಗಿಳಸುಗೂರು, ಹಾಲಾಪುರ,ಕಲ್ಲೂರು, ವಲಕಂದಿನ್ನಿ ಹೋಬಳಿಗಳಲ್ಲಿ ಮತ್ತು ಬಳ್ಳಾರಿ ಜಿಲ್ಲೆಯ ಕೋಲೂರು ಹೋಬಳಿ, ಮರಿಯಮ್ಮನಹಳ್ಳಿ, ಕೊಪ್ಪಳದ ಹಿಟ್ನಾಳ್‌ಗಳಲ್ಲಿ 40 ಡಿಗ್ರಿ ಸೆಲ್ಶಿಯಸ್ ಮೇಲ್ಪಟ್ಟ ಉಷ್ಣಾಂಶ ದಾಖಲಾಗಿದೆ. ಮುಂದಿನ 48 ಗಂಟೆ ಅವಧಿಯಲ್ಲಿ ಒಳನಾಡಿನ ಹಲವು ಜಿಲ್ಲೆಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚಾಗುವ ಸಾಧ್ಯತೆ ಇದೆ.

ಬೆಂಗಳೂರು ಹವಾಮಾನ ಇಂದು (ಮಾ.20) ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಭಾಗಶಃ ಮೋಡ ಕವಿದ ಆಗಸ ಇದ್ದು, ರಾಜಧಾನಿಯ ಸುತ್ತಮುತ್ತ ಮಾರ್ಚ್ 21ಕ್ಕೆ ಮಳೆ ನಿರೀಕ್ಷಿಸಬಹುದು. ಮುಂದಿನ ಎರಡು ದಿನಗಳಲ್ಲಿ ಮಳೆ ಬೀಳುವ ನಿರೀಕ್ಷೆ ಇದ್ದು, ನಾಳೆಯಿಂದಲೇ ತಾಪಮಾನ ಕಡಿಮೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಇದೇ ರೀತಿ, ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು (ಮಾರ್ಚ್‌ 20) ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.19)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34.1 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 19) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 20 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 22.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 75)

ಮಂಗಳೂರು – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಚಿತ್ರದುರ್ಗ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 85)

ಗದಗ – 24.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 51)

ಹೊನ್ನಾವರ – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 65)

ಕಲಬುರಗಿ – 26.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 46)

ಬೆಳಗಾವಿ – 30 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 46)

ಕಾರವಾರ – 31.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point