ಕರ್ನಾಟಕ ಹವಾಮಾನ ಮಾರ್ಚ್ 22; ಬಳ್ಳಾರಿ, ಚಿತ್ರದುರ್ಗ ಸೇರಿ 10 ಜಿಲ್ಲೆಗಳ ಒಂದೆರಡು ಕಡೆ ಮಳೆ ನಿರೀಕ್ಷೆ, ಬೆಂಗಳೂರಲ್ಲಿ ಬಿರುಬಿಸಿಲು
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 22; ಬಳ್ಳಾರಿ, ಚಿತ್ರದುರ್ಗ ಸೇರಿ 10 ಜಿಲ್ಲೆಗಳ ಒಂದೆರಡು ಕಡೆ ಮಳೆ ನಿರೀಕ್ಷೆ, ಬೆಂಗಳೂರಲ್ಲಿ ಬಿರುಬಿಸಿಲು

ಕರ್ನಾಟಕ ಹವಾಮಾನ ಮಾರ್ಚ್ 22; ಬಳ್ಳಾರಿ, ಚಿತ್ರದುರ್ಗ ಸೇರಿ 10 ಜಿಲ್ಲೆಗಳ ಒಂದೆರಡು ಕಡೆ ಮಳೆ ನಿರೀಕ್ಷೆ, ಬೆಂಗಳೂರಲ್ಲಿ ಬಿರುಬಿಸಿಲು

ಕರ್ನಾಟಕ ಹವಾಮಾನ ಮಾರ್ಚ್ 22: ಬಳ್ಳಾರಿ, ಚಿತ್ರದುರ್ಗ ಸೇರಿ 10 ಜಿಲ್ಲೆಗಳ ಒಂದೆರಡು ಕಡೆ ಮಳೆ ನಿರೀಕ್ಷೆ ಮಾಡಬಹುದು. ಬೆಂಗಳೂರಲ್ಲಿ ಬಿರುಬಿಸಿಲು ಇರಲಿದೆ. ರಾಜ್ಯದ ಹಲವೆಡೆ ಉಷ್ಣಾಂಶದಲ್ಲಿ ಹೆಚ್ಚಳವಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 22
ಕರ್ನಾಟಕ ಹವಾಮಾನ ಮಾರ್ಚ್ 22

ಬೆಂಗಳೂರು: ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆ ಇಂದು (ಮಾರ್ಚ್ 22) ಸಾಧಾರಣ ಮಳೆ ನಿರೀಕ್ಷಿತ. ಬೆಂಗಳೂರು ಸುತ್ತಮುತ್ತ ಸ್ವಚ್ಛ ಆಕಾಶವಿದ್ದು, ಉಷ್ಣಾಂಶ 35 ಡಿಗ್ರಿ ಸೆಲ್ಶಿಯಸ್ ಆಸುಪಾಸಿನಲ್ಲಿ ಇರಲಿದೆ. ಹೀಗಾಗಿ ಬೆಂಗಳೂರಲ್ಲಿ ಬಿರುಬಿಸಿಲು ಕಾಡಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನಾ ವರದಿ ವಿವರಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ರಾಜ್ಯದಲ್ಲಿ ಮಾರ್ಚ್ 23ರ ಬೆಳಗ್ಗೆ ತನಕದ ಹವಾಮಾನ ಮುನ್ಸೂಚನೆ ನೀಡಿರುವ ಬೆಂಗಳೂರು ಹವಾಮಾನ ಕೇಂದ್ರ, ಮುಂದಿನ 24 ಗಂಟೆಗಳಲ್ಲಿಕರಾವಳಿ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಸಾಧಾರಣ ಮೆಳಯಾಗುವ ಬಹಳಷ್ಟು ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹೇಳಿದೆ.

ತಾಪಮಾನ ಮುನ್ಸೂಚನೆ ವರದಿ ಪ್ರಕಾರ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಅಂದರೆ ಕೊಪ್ಪಳ ಜಿಲ್ಲೆಯಲ್ಲಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆ ಅಂದರೆ ಬೆಂಗಳೂರು ಗ್ರಾಮಾಂತರ, ದಾವಣಗೆರೆ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸಾಮಾನ್ಯಕ್ಕಿಂತ 2 ಡಿಗ್ರಿ ಸೆಲ್ಶಿಯಸ್‌ ಹೆಚ್ಚಾಗುವ ಸಾಧ್ಯತೆ ಇದೆ.

ಇನ್ನು, ಗರಿಷ್ಠ ಉಷ್ಣಾಂಶ ಹೇಳುವುದಾದರೆ ನಿನ್ನೆ (ಮಾರ್ಚ್‌ 21) ಬಳ್ಳಾರಿ ಜಿಲ್ಲೆಯ ಕೊಲೂರು, ಹಿರೇಹಡಗಳ್ಳಿ ಹೋಬಳಿಗಳಲ್ಲಿ 40 ಡಿಗ್ರಿ ಸೆಲ್ಶಿಯಸ್‌ಗಿಂತ ಹೆಚ್ಚು ತಾಪಮಾನ ದಾಖಲಾಯಿತು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮಾಹಿತಿ ನೀಡಿದೆ.

ಜಿಲ್ಲಾವಾರು ಕನಿಷ್ಠ ಮತ್ತು ಗರಿಷ್ಠ ತಾಪಮಾನ ವಿವರ

ಜಿಲ್ಲಾವಾರು ಕನಿಷ್ಠ ಮತ್ತು ಗರಿಷ್ಠ ತಾಪಮಾನ ವಿವರ
ಜಿಲ್ಲಾವಾರು ಕನಿಷ್ಠ ಮತ್ತು ಗರಿಷ್ಠ ತಾಪಮಾನ ವಿವರ

ಕರ್ನಾಟಕದಲ್ಲಿ ಮಾರ್ಚ್ 20 ಬೆಳಗ್ಗೆ 8.30 ರಿಂದ ಮಾರ್ಚ್ 21 ಬೆಳಗ್ಗೆ 8.30ರ ತನಕದ ಜಿಲ್ಲಾವಾರು ಕನಿಷ್ಠ ಮತ್ತು ಗರಿಷ್ಠ ತಾಪಮಾನ ವಿವರ ಈ ಮೇಲಿನ ಚಾರ್ಟ್‌ನಲ್ಲಿದೆ.

ಎಲ್ಲೆಲ್ಲಿ ಮಳೆ ಬೀಳಲಿದೆ..

ಕರಾವಳಿಯ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಮಳೆ ಬೀಳಬಹುದು. ಇದೇ ರೀತಿ ಉತ್ತರ ಒಳನಾಡಿನಲ್ಲಿ ಇಂದು (ಮಾರ್ಚ್ 22) ಒಣಹವೆ ಇರಲಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆಗಳಿವೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಬೆಂಗಳೂರು ಹವಾಮಾನ ಇಂದು (ಮಾ.22) ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮಾರ್ಚ್ 22) ಮಳೆ ಇರಲ್ಲ. ತಾಪಮಾನ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಇದೇ ರೀತಿ, ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು (ಮಾರ್ಚ್‌ 22) ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.21)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 34.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 20.5 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 21) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 22 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 24.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 73)

ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಚಿತ್ರದುರ್ಗ – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 60)

ಗದಗ – 28.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62)

ಹೊನ್ನಾವರ – 30.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 72)

ಕಲಬುರಗಿ – 26.3 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 31)

ಬೆಳಗಾವಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಕಾರವಾರ – 31.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner