ಕರ್ನಾಟಕ ಹವಾಮಾನ ಮಾರ್ಚ್ 24; ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯ ಒಂದೆರಡು ಕಡೆ ಚದುರಿದ ಮಳೆ ನಿರೀಕ್ಷೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 24; ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯ ಒಂದೆರಡು ಕಡೆ ಚದುರಿದ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ಮಾರ್ಚ್ 24; ದಕ್ಷಿಣ ಒಳನಾಡು, ಮಲೆನಾಡು, ಕರಾವಳಿಯ ಒಂದೆರಡು ಕಡೆ ಚದುರಿದ ಮಳೆ ನಿರೀಕ್ಷೆ

ಕರ್ನಾಟಕ ಹವಾಮಾನ ಮಾರ್ಚ್ 24: ರಾಜ್ಯದಲ್ಲಿ ನಾಳೆ ಬೆಳಗ್ಗೆ 8.30ರ ತನಕ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡಲ್ಲೂ ಒಂದೆರಡು ಕಡೆ ಚದುರಿದ ಮಳೆ ನಿರೀಕ್ಷಿಸಬಹುದು. ಬೆಂಗಳೂರಲ್ಲಿ ಭಾಗಶಃ ಮೋಡಕವಿದ ವಾತಾವರಣ ಇರಲಿದೆ.

ಕರ್ನಾಟಕ ಹವಾಮಾನ ಮಾರ್ಚ್ 24, ಒಂದೆರಡು ಕಡೆ ಚದುರಿದ ಮಳೆ ನಿರೀಕ್ಷೆ
ಕರ್ನಾಟಕ ಹವಾಮಾನ ಮಾರ್ಚ್ 24, ಒಂದೆರಡು ಕಡೆ ಚದುರಿದ ಮಳೆ ನಿರೀಕ್ಷೆ

ಬೆಂಗಳೂರು: ಕರ್ನಾಟಕದ ದಕ್ಷಿಣ ಒಳನಾಡು, ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಬಹುದು. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ನಾಳೆ (ಮಾರ್ಚ್ 25) ಬೆಳಗ್ಗೆ 8.30ರ ತನಕದ ಮಳೆ ಮುನ್ಸೂಚನೆ ಪ್ರಕಾರ, ರಾಜ್ಯದ ವಿವಿಧೆಡೆ ಅಲ್ಲಲ್ಲಿ ಚದುರಿದ ಸಾಧಾರಣ ಮಳೆಯಾಗಬಹುದು. ವಿಶೇಷವಾಗಿ ಕರಾವಳಿ ಜಿಲ್ಲೆಗಳಾದ ಉಡುಪಿ ಮತ್ತು ದಕ್ಷಿಣ ಕನ್ನಡಗಳಲ್ಲಿ, ಅದೇ ರೀತಿ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆ ಚದುರಿದ ಸಾಧಾರಣ ಮಳೆ ಬೀಳಬಹುದು.

ಇಂದು (ಮಾರ್ಚ್ 24) ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಒಂದೆರಡು ಕಡೆ ಬೀಳಬಹುದು ಎಂದು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಎಚ್ಚರಿಕೆ ನೀಡಿದೆ.

ಬೆಂಗಳೂರು ಹವಾಮಾನ ಕೇಂದ್ರ ಶನಿವಾರ ಮಧ್ಯಾಹ್ನ ಪ್ರಕಟಿಸಿರುವ ಮಳೆ ಮುನ್ಸೂಚನೆ ವರದಿ ಪ್ರಕಾರ, ಮಾರ್ಚ್‌ 25ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು. ಇನ್ನುಳಿದಂತೆ ಎಲ್ಲ ಜಿಲ್ಲೆಗಳಲ್ಲೂ ಒಣಹವೆ ಮುಂದುವರಿಯಲಿದೆ.

ಬೆಂಗಳೂರು ಹವಾಮಾನ ಇಂದು (ಮಾ.24), ಗರಿಷ್ಠ 34 ಡಿಗ್ರಿ ಸೆಲ್ಶಿಯಸ್, ಕನಿಷ್ಠ 21 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮಾರ್ಚ್ 24) ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಆದರೆ ಮಳೆ ಇರಲ್ಲ. ತಾಪಮಾನ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.

ಇದೇ ರೀತಿ, ಬೆಂಗಳೂರು ನಗರ ಜಿಲ್ಲೆಯಲ್ಲಿ ಇಂದು (ಮಾರ್ಚ್‌ 24) ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.23)ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಹಾಗೆ ತಾಪಮಾನದಲ್ಲಿ ಕೊಂಚ ಇಳಿಕೆ ದಾಖಲಾಗಿದೆ. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 23) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 34.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 24 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 26.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 50)

ಮಂಗಳೂರು – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಚಿತ್ರದುರ್ಗ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 56)

ಗದಗ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 57)

ಹೊನ್ನಾವರ – 30.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 68)

ಕಲಬುರಗಿ – 31.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 44)

ಬೆಳಗಾವಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಕಾರವಾರ – 32.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70 )

----------------------

ಓದಬಹುದಾದ ಆಯ್ದ ಸ್ಟೋರಿಗಳು

1) 2 ವರ್ಷದಲ್ಲಿ ಕರ್ನಾಟಕ ಶಾಲೆಗಳ ಶುಲ್ಕ ಶೇ 30 ಕ್ಕಿಂತಲೂ ಹೆಚ್ಚಳ; ವರದಿ

2) ಚುನಾವಣಾ ನೀತಿ ಸಂಹಿತೆ ಜಾರಿಯಾದ ಒಂದೇ ವಾರಕ್ಕೆ ಕರ್ನಾಟಕದಲ್ಲಿ 9.64 ಕೋಟಿ ರೂಪಾಯಿ ಹಣ ವಶ

3) ಹುಬ್ಬಳ್ಳಿ ಶಿರಸಿ ತಾಳಗುಪ್ಪ ರೈಲು ಮಾರ್ಗ ಎಲ್ಲಿ ತನಕ ಬಂತು, ಸ್ಥಿತಿಗತಿ ವಿವರ ಹೀಗಿದೆ

Whats_app_banner