ಕರ್ನಾಟಕ ಹವಾಮಾನ ಮಾರ್ಚ್ 28; ಬೆಳಗಾವಿ, ಧಾರವಾಡ, ಗದಗ, ಹಾವೇರಿಗಳಲ್ಲಿ ಮಳೆ ನಿರೀಕ್ಷೆ, ಉಳಿದೆಡೆ ಒಣಹವೆ
ಕರ್ನಾಟಕ ಹವಾಮಾನ ಮಾರ್ಚ್ 28: ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿಗಳ ಒಂದೆರಡು ಕಡೆಗಳಲ್ಲಿ ಇಂದು ಚದುರಿದ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬಿಸಿಲ ಬೇಗೆ, ಉಳಿದೆಡೆ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಹೇಳಿದೆ.
ಬೆಂಗಳೂರು: ಕರ್ನಾಟಕದಲ್ಲಿ ಇಂದು ಬೆಳಗ್ಗೆ 8.30ರ ಒಳಗೆ ಬೆಳಗಾವಿ, ಧಾರವಾಡ, ಗದಗ, ಹಾವೇರಿಗಳ ಒಂದೆರಡು ಕಡೆಗಳಲ್ಲಿ ಚದುರಿದ ಹಗುರ ಮಳೆಯಾಗುವ ನಿರೀಕ್ಷೆ ಇದೆ. ಗುಡುಗು ಮಿಂಚಿನ ಮುನ್ನೆಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ. ಇನ್ನುಳಿದಂತೆ ನಾಳೆ (ಮಾರ್ಚ್ 29) ಬೆಳಗ್ಗೆ 8.30ರ ತನಕ ರಾಜ್ಯದಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ, ಮಾರ್ಚ್ 29ರ ಬೆಳಗ್ಗೆ 8.30ರ ತನಕ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಮುಂದಿನ 5 ದಿನಗಳ ಗುಡುಗು ಮುನ್ನೆಚ್ಚರಿಕೆಯನ್ನೂ ನೀಡಿರುವ ಹವಾಮಾನ ಕೇಂದ್ರ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚಿನ ಸಾಧ್ಯತೆ ಇದೆ ಎಂದು ಎಚ್ಚರಿಸಿದೆ.
ಮುಂದಿನ 5 ದಿನಗಳ ಅವಧಿಯಲ್ಲಿ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್ ಹೆಚ್ಚಾಗು ಬಹಳಷ್ಟು ಸಾಧ್ಯತೆ ಇದೆ. ಇದಲ್ಲದೇ, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಶಾಖದ ಅಲೆಗಳು ಅಪ್ಪಳಿಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಮುನ್ಸೂಚನೆ ವರದಿ ಎಚ್ಚರಿಸಿದೆ.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮಾಹಿತಿ ಪ್ರಕಾರ, ರಾಯಚೂರು ಜಿಲ್ಲೆ ಯ ಮಾನ್ವಿ ಹೋಬಳಿಯಲ್ಲಿ 43 ಡಿಗ್ರಿ ಸೆಲ್ಶಿಯಸ್ ತಾಪಮಾನ ದಾಖಲಾಗಿದೆ. ಇದು ರಾಜ್ಯದ ಗರಿಷ್ಠ ತಾಪಮಾನವಾಗಿ ಕಂಡುಬಂದಿದೆ. ರಾಜ್ಯದ 38 ಹೋಬಳಿಗಳಲ್ಲಿ ನಿನ್ನೆ (ಮಾರ್ಚ್ 27) 40 ಡಿಗ್ರಿ ಸೆಲ್ಶಿಯಸ್ ಮೇಲ್ಪಟ್ಟ ತಾಪಮಾನ ದಾಖಲಾಗಿದೆ.
ಬೆಂಗಳೂರು ಹವಾಮಾನ ಇಂದು (ಮಾ.28), ಗರಿಷ್ಠ 36 ಡಿಗ್ರಿ ಸೆಲ್ಶಿಯಸ್, ಕನಿಷ್ಠ 21 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಇಂದು (ಮಾರ್ಚ್ 28) ತಾಪಮಾನ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ.ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.27) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 35.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 27) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.3 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 19.8 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್ 28 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 58)
ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78)
ಚಿತ್ರದುರ್ಗ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 28)
ಗದಗ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 29)
ಹೊನ್ನಾವರ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 72)
ಕಲಬುರಗಿ – 31.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 44)
ಬೆಳಗಾವಿ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)
ಕಾರವಾರ – 32.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 72 )
----------------------
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ
(This copy first appeared in Hindustan Times Kannada website. To read more like this please logon to kannada.hindustantimes.com)