ಕರ್ನಾಟಕ ಹವಾಮಾನ ಮಾರ್ಚ್ 30; ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿ 6 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮಾರ್ಚ್ 30; ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿ 6 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ

ಕರ್ನಾಟಕ ಹವಾಮಾನ ಮಾರ್ಚ್ 30; ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿ 6 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆ

ಕರ್ನಾಟಕ ಹವಾಮಾನ ಮಾರ್ಚ್ 30; ಕರ್ನಾಟಕದ ಉದ್ದಗಲಕ್ಕೂ ಇಂದು ಒಣಹವೆ ಇರಲಿದೆ. ಉಳಿದಂತೆ ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿ 6 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆಯ ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮಾರ್ಚ್ 30
ಕರ್ನಾಟಕ ಹವಾಮಾನ ಮಾರ್ಚ್ 30

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ವಿಜಯಪುರ, ರಾಯಚೂರು ಸೇರಿ 6 ಜಿಲ್ಲೆಗಳಲ್ಲಿ ಉಷ್ಣ ಅಲೆಯ ಎಚ್ಚರಿಕೆಯನ್ನು ನೀಡಿರುವ ಭಾರತೀಯ ಹವಾಮಾನ ಇಲಾಖೆ, ಇಂದು (ಮಾರ್ಚ್ 30) ತಾಪಮಾನದ ಹೆಚ್ಚಳ ಉಂಟಾಗಬಹುದು ಎಂದು ಹೇಳಿದೆ. ಯಾವುದೇ ಪ್ರದೇಶದಲ್ಲೂ ಸದ್ಯ ಮಳೆ ಮುನ್ಸೂಚನೆ ಇಲ್ಲ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಮುಂದಿನ ಎರಡು ದಿನಗಳ ಅವಧಿಯಲ್ಲಿ ಕರ್ನಾಟಕದ ಉತ್ತರ ಒಳನಾಡಿನ ಕಲಬುರಗಿ, ಬಾಗಲಕೋಟೆ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಉಷ್ಣ ಅಲೆಯ ಪರಿಸ್ಥಿತಿ ಇರುವ ಸಾಧ್ಯತೆ ಇದೆ. ಮುಂದಿನ 3 ದಿನಗಳಲ್ಲಿ ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನಲ್ಲಿ ಕೂಡ ಒಂದೆರಡು ಸ್ಥಳಗಳಲ್ಲಿ ಗರಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಶಿಯಸ್‌ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ. ಕರಾವಳಿ ಜಿಲ್ಲೆಗಳ ಹವಾಮಾನದಲ್ಲಿ ಯಾವುದೇ ಹೆಚ್ಚಿನ ವ್ಯತ್ಯಾಸವಿಲ್ಲ ಎಂದು ಹವಾಮಾನ ಇಲಾಖೆ ಶುಕ್ರವಾರ ಮಧ್ಯಾಹ್ನ ಪ್ರಕಟಿಸಿದ ವರದಿಯಲ್ಲಿ ತಿಳಿಸಿದೆ.

ಬೆಂಗಳೂರು ಹವಾಮಾನ ಇಂದು (ಮಾ.30) ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮಾರ್ಚ್ 30) ತಾಪಮಾನ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರ ತಿಳಿಸಿದೆ. ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮಾ.29) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.6 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 36 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮಾರ್ಚ್ 29) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 36.1 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಶಿಯಸ್‌ ದಾಖಲಾಗಿತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮಾರ್ಚ್‌ 29 ರ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 27.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 39)

ಮಂಗಳೂರು – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಚಿತ್ರದುರ್ಗ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70)

ಗದಗ – 28.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66)

ಹೊನ್ನಾವರ – 31 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 64)

ಕಲಬುರಗಿ – 32.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 48)

ಬೆಳಗಾವಿ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಕಾರವಾರ – 34.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 70 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner