ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲು, ಮೇ 7ರಿಂದ 9 ರವರೆಗೆ ಮಳೆ ನಿರೀಕ್ಷೆ- ಹವಾಮಾನ ವರದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲು, ಮೇ 7ರಿಂದ 9 ರವರೆಗೆ ಮಳೆ ನಿರೀಕ್ಷೆ- ಹವಾಮಾನ ವರದಿ

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲು, ಮೇ 7ರಿಂದ 9 ರವರೆಗೆ ಮಳೆ ನಿರೀಕ್ಷೆ- ಹವಾಮಾನ ವರದಿ

ಕರ್ನಾಟಕ ಹವಾಮಾನ; ನಾಲ್ಕು ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲಾಗಿದ್ದು, ಮೇ 7ರಿಂದ 9 ರವರೆಗೆ ಮಳೆ ಬೀಳುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ಹೇಳಿದೆ. (ವರದಿ- ಎಚ್. ಮಾರುತಿ, ಬೆಂಗಳೂರು)

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲಾಗಿದ್ದು, ಮೇ 7 ರಿಂದ 9 ರವರೆಗೆ ಮಳೆ ನಿರೀಕ್ಷೆಮಾಡಬಹುದು ಎಂದು ಹವಾಮಾನ ವರದಿ ಹೇಳಿದೆ (ಸಾಂಕೇತಿಕ ಚಿತ್ರ)
ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆ. ದಾಖಲಾಗಿದ್ದು, ಮೇ 7 ರಿಂದ 9 ರವರೆಗೆ ಮಳೆ ನಿರೀಕ್ಷೆಮಾಡಬಹುದು ಎಂದು ಹವಾಮಾನ ವರದಿ ಹೇಳಿದೆ (ಸಾಂಕೇತಿಕ ಚಿತ್ರ) (Canva)

ಬೆಂಗಳೂರು: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ರಣಬಿಸಿಲು ಮತ್ತು ತೀವ್ರ ಬಿಸಿ ಗಾಳಿ ಮುಂದುವರಿದಿದ್ದು, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ (ಕೆಎಸ್‌ಎನ್‌ಡಿಎಂಸಿ) ಪ್ರಕಾರ ನಾಲ್ಕು ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಗುರುವಾರ ನಾಲ್ಕು ಜಿಲ್ಲೆಗಳಲ್ಲಿ ತಾಪಮಾನ 45 ಡಿಗ್ರಿ ಸೆಲ್ಸಿಯಸ್ ದಾಟಿದ್ದರೆ 5 ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮಂಡ್ಯದಲ್ಲಿ 47.6 ಡಿಗ್ರಿ ಸೆಲ್ಸಿಯಸ್, ರಾಯಚೂರಿನಲ್ಲಿ 46.7 ಡಿಗ್ರಿ ಸೆಲ್ಸಿಯಸ್, ಕಲಬುರಗಿಯಲ್ಲಿ 46.1 ಡಿಗ್ರಿ ಸೆಲ್ಸಿಯಸ್ ಹಾಗೂ ಯಾದಗಿರಿಯಲ್ಲಿ 46 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದೆ.

ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು ಹಾಗೂ ಹಾಸನ ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಗಿಂತ ಕಡಿಮೆ ಇದೆ. ಉಳಿದ ಎಲ್ಲ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಎಂದು ಕೆಎಸ್‌ಎನ್‌ಡಿಎಂಸಿ ಪ್ರಕಟಣೆ ತಿಳಿಸಿದೆ. ಮೇ 5 ರವರೆಗೂ ಒಣ ಹವೆ ಇರಲಿದ್ದು ನಾಗರಿಕರು ಎಚ್ಚರಿಕೆ ವಹಿಸಬೇಕಿದೆ. ಮೇ 7 ರಿಂದ 9 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ಭಾರತೀಯ ಹವಾಮಾನ ಇಲಾಖೆ( ಐಎಂಡಿ) ತಿಳಿಸಿದೆ.

ಇಂದು 18 ಜಿಲ್ಲೆಗಳಲ್ಲಿ ರಣಬಿಸಿಲು, ಬಿಸಿಗಾಳಿ ಎಚ್ಚರಿಕೆ

ಹವಾಮಾನ ಇಲಾಖೆ ವರದಿ ಪ್ರಕಾರ ಬೆಂಗಳೂರು ನಗರ, ಮಂಡ್ಯ ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಬೀದರ್, ಬೆಳಗಾವಿ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಧಾರವಾಡ, ಗದಗ, ಕಲಬುರಗಿ, ದಾವಣಗೆರೆ, ಮೈಸೂರು, ತುಮಕೂರು ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಶುಕ್ರವಾರ ತೀವ್ರ ಬಿಸಿ ಗಾಳಿ ಕಾಣಿಸಿಕೊಳ್ಳುವ ಸಾಧ್ಯತೆಯಿದೆ.

ಆದರೂ ಕೆಲವು ಜಿಲ್ಲೆಗಳಲ್ಲಿ ಅಲ್ಲಲ್ಲಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೈಸೂರು ಮತ್ತು ಕೊಡಗು ಜಿಲ್ಲೆಯ ಕೆಲವು ಭಾಗಗಳಲ್ಲಿ ಶುಕ್ರವಾರ ಮಳೆಯಾಗುವ ಸಾಧ್ಯತೆಗಳಿವೆ.

ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ಮುಂದಿನ ನಾಲ್ಕು ದಿನಗಳು ರಾತ್ರಿಯ ವೇಳೆಯಲ್ಲೂ ಹವಾಮಾನ ಬಿಸಿ ವಾತಾವರಣದಿಂದ ಕೂಡಿರಲಿದೆ ಎಂದು ತಿಳಿದು ಬಂದಿದೆ.

ಏಳು ವರ್ಷದ ಗರಿಷ್ಠ ತಾಪಮಾನ 46.7 ಡಿಗ್ರಿ ಸೆಲ್ಶಿಯಸ್ ದಾಖಲು

ಕರ್ನಾಟಕ ರಾಜ್ಯದಲ್ಲಿ ಮೇ 02 ರಂದು ದಾಖಲಾದ ಗರಿಷ್ಠ ತಾಪಮಾನದ ವರ್ಷವಾರು (2017-2024) ಹೋಲಿಕೆಯ ಪ್ರಕಾರ, ಕಳೆದ 7 ವರ್ಷಕ್ಕೆ ಹೋಲಿಸಿದರೆ 46.7˚C ಅತಿ ಹೆಚ್ಚು ತಾಪಮಾನ ದಾಖಲಾಗಿದೆ.

ಕರ್ನಾಟಕದಲ್ಲಿ ಮೇ 02 ರಂದು ದಾಖಲಾದ ಗರಿಷ್ಠ ತಾಪಮಾನದ ವರ್ಷವಾರು (2017-2024) ಹೋಲಿಕೆ
ಕರ್ನಾಟಕದಲ್ಲಿ ಮೇ 02 ರಂದು ದಾಖಲಾದ ಗರಿಷ್ಠ ತಾಪಮಾನದ ವರ್ಷವಾರು (2017-2024) ಹೋಲಿಕೆ (KarnatakaSNDMC)

ಕರ್ನಾಟಕದಲ್ಲಿ ಏಳು ವರ್ಷಗಳ ಅವಧಿಯಲ್ಲಿ ಗರಿಷ್ಠ ತಾಪಮಾನ 46.7 ನಿನ್ನೆ (ಮೇ 2) ದಾಖಲಾಗಿದೆ. ಅಂದರೆ ಮೇ 1ರ ಬೆಳಗ್ಗೆ 8.30ರಿಂದ ಮೇ 2 ರ ಬೆಳಗ್ಗೆ 8.30ರ ನಡುವಿನ ಅವಧಿಯಲ್ಲಿ ಈ ತಾಪಮಾನ ದಾಖಲಾಗಿರುವಂಥದ್ದು. ಇದೇ ಅವಧಿಯಲ್ಲಿ 2017ರಲ್ಲಿ 42.30 ಡಿಗ್ರಿ ಸೆಲ್ಶಿಯಸ್‌, 2018ರಲ್ಲಿ 45.00 ಡಿಗ್ರಿ ಸೆಲ್ಶಿಯಸ್‌, 2019ರಲ್ಲಿ 43.70 ಡಿಗ್ರಿ ಸೆಲ್ಶಿಯಸ್‌, 2020 ಮತ್ತು 2021ರಲ್ಲಿ 41.90 ಡಿಗ್ರಿ ಸೆಲ್ಶಿಯಸ್, 2022ರಲ್ಲಿ 44.70 ಡಿಗ್ರಿ ಸೆಲ್ಶಿಯಸ್, 2023ರಲ್ಲಿ 38.80 ಡಿಗ್ರಿ ಸೆಲ್ಶಿಯಸ್ ಗರಿಷ್ಠ ತಾಪಮಾನ ದಾಖಲಾಗಿತ್ತು.

(ವರದಿ- ಎಚ್. ಮಾರುತಿ, ಬೆಂಗಳೂರು)

Whats_app_banner