ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 11; ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆ

ಕರ್ನಾಟಕ ಹವಾಮಾನ ಮೇ 11; ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆ

ಕರ್ನಾಟಕ ಹವಾಮಾನ ಮೇ 11; ರಾಜ್ಯದಲ್ಲಿ ಇಂದು ವ್ಯಾಪಕವಾಗಿ ಮಳೆಯಾಗಲಿದೆ. ವಿಶೇಷವಾಗಿ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಬಿಟ್ಟು ಉಳಿದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮೇ 11; ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮೇ 11; ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆ ಬೀಳಬಹುದು ಎಂದು ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಹೇಳಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಇಂದು (ಮೇ 11) ಮಳೆಯಾಗಲಿದೆ. ವಿಶೇಷವಾಗಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಬಿಟ್ಟು ಉಳಿದ ಜಿಲ್ಲೆಗಳಲ್ಲಿ ಬಹುತೇಕ ಕಡೆ ಮಳೆ ಬೀಳಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಮಳೆ ಮುನ್ಸೂಚನೆ ವರದಿ ಹೇಳಿದೆ. ಈ ವರದಿಯ ಪ್ರಕಾರ, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಾತ್ರವೇ ಮಳೆ ಬೀಳಲಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಬಹುದು.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಕರಾವಳಿಯ ಮೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗುವ ಸಂದರ್ಭದಲ್ಲಿ ಗುಡುಗು ಮಿಂಚು ಕೂಡ ಉಂಟಾಗಬಹುದು. ಗಂಟೆಗೆ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸಬಹುದು ಎಂದು ವರದಿ ಎಚ್ಚರಿಸಿದೆ. ಇನ್ನುಳಿದಂತೆ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದೆ. ಇಲ್ಲಿ ಕೆಲವು ಕಡೆಗಳಲ್ಲಿ ಗಾಳಿಯ ವೇಗ 40 ರಿಂದ 50 ಕಿ.ಮೀ ಇರಲಿದೆ ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಸಿದೆ.

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಸಿದೆ.

ಬೆಂಗಳೂರು ಹವಾಮಾನ ಇಂದು (ಮೇ 11), ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮೇ 11) ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗಲಿದೆ. ಗುಡುಗು ಮಿಂಚು ಗಾಳಿ ಸಹಿತ ಮಳೆಯಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 10) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 33.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ನಿನ್ನೆ (ಮೇ 9) 14 ಮಿ.ಮೀ. ಮಳೆಯಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗಲಿದ್ದು, ಮಿಂಚಿನ ಎಚ್ಚರಿಕೆ ನೀಡಲಾಗಿದೆ. ನಿನ್ನೆ (ಮೇ 10) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.5 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 19.4. ಡಿಗ್ರಿ ಸೆಲ್ಶಿಯಸ್‌ ಇತ್ತು. ನಿನ್ನೆ 72.4 ಎಂಎಂ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 11 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88)

ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಚಿತ್ರದುರ್ಗ – 25.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)

ಗದಗ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 73)

ಹೊನ್ನಾವರ – 30.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 73)

ಕಲಬುರಗಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 69)

ಬೆಳಗಾವಿ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)

ಕಾರವಾರ – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point