ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ

ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್ ಘೋ‍ಷಣೆ ಮಾಡಿರುವ ಭಾರತೀಯ ಹವಾಮಾನ ಇಲಾಖೆ, 15 ಮತ್ತು 16 ರಂದು ಉತ್ತರ ಒಳನಾಡು ಜಿಲ್ಲೆಗಳಿಗೆ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ನೆಚ್ಚರಿಕೆ ನೀಡಿದೆ.

ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಕೆ ನೀಡಿದೆ.
ಕರ್ನಾಟಕ ಹವಾಮಾನ ಮೇ 16; ರಾಜ್ಯದ ಉತ್ತರ ಒಳನಾಡಿಗೆ ಆರೆಂಜ್ ಅಲರ್ಟ್‌, ಗುಡುಗು ಮಿಂಚು ಗಾಳಿ ಮಳೆ ಸಾಧ್ಯತೆ ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಕೆ ನೀಡಿದೆ.

ಬೆಂಗಳೂರು: ಬೆಳಗಾವಿ, ಧಾರವಾಡ ಸೇರಿ ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಇಂದು (ಮೇ 16) ಗುಡುಗು ಮಿಂಚು ಗಾಳಿ ಮಳೆಯಾಗುವ ಸಾಧ್ಯತೆ ಇರುವ ಕಾರಣ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್‌ ಘೋಷಿಸಿದೆ. 15 ಮತ್ತು 16 ರಂದು ಉತ್ತರ ಒಳನಾಡು ಜಿಲ್ಲೆಗಳಿಗೆ ಗುಡುಗು, ಮಿಂಚು, ಜೋರಾದ ಗಾಳಿಯೊಂದಿಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಳೆ ಮುನ್ಸೂಚನೆ ವರದಿ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ನಿನ್ನೆ (ಮೇ 15) ಮಧ್ಯಾಹ್ನ ನೀಡಿದ ಹವಾಮಾನ ಮುನ್ಸೂಚನೆ ವರದಿ ಪ್ರಕಾರ ನಾಳೆ (ಮೇ 17ರ ಬೆಳಗ್ಗೆ 8.30ರ ತನಕ ಕರ್ನಾಟಕದ ಬಹುತೇಕ ಜಿಲ್ಲೆಗಳ ಹಲವೆಡೆ ಮಳೆಯಾಗಬಹುದು. ಈ ಪೈಕಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆ ಗುಡುಗು ಮಿಂಚು ಮತ್ತು ಬಿರುಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ.

ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಮತ್ತು ಬಿರುಗಾಳಿ (ಗಂಟೆಗೆ 50 ರಿಂದ 60 ಕಿ.ಮೀ. ವೇಗ) ಸಹಿತ ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ ಹಲವೆಡೆ ಇಂದು ಗುಡುಗು ಮಿಂಚು ಗಾಳಿ ಮಳೆಯಾಗುವ ಸಾಧ್ಯತೆ ಇದೆ.

ಕರಾವಳಿ ಜಿಲ್ಲೆಗಳು ಸೇರಿ 13 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಕರ್ನಾಟಕದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಯೆಲ್ಲೋ ಅಲರ್ಟ್ ಘೋ‍ಷಣೆಯಾಗಿದೆ. ಇಲ್ಲಿ ಮಳೆಯ ತೀವ್ರತೆ ಮತ್ತು ಗುಡುಗು ಮಿಂಚು ಭಾರಿ ಗಾಳಿ ಬೀಸುವ ಸಾಧ್ಯತೆ ಇರುವ ಕಾರಣ ಯೆಲ್ಲೋ ಅಲರ್ಟ್ ಅನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಘೋಷಿಸಿದೆ.

ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ ಮತ್ತು ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಅನ್ನು ಹವಾಮಾನ ಕೇಂದ್ರ ಘೋ‍ಷಿಸಿದೆ. ಇಲ್ಲೂ, ತೀವ್ರ ಗುಡುಗು ಮಿಂಚು ಗಾಳಿ ಮಳೆಯಾಗುವ ಸಾಧ್ಯತೆ ದಟ್ಟವಾಗಿದೆ.

ಬೆಂಗಳೂರು ಹವಾಮಾನ ಇಂದು (ಮೇ 16), ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮೇ 16) ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಇರಬಹುದು. ಹಲವೆಡೆ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಮಿಂಚು ಗಾಳಿ ಸಹಿತ ಸಾಧಾರಣ ಮಳೆಯಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 15) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 31.4 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಗುಡುಗು ಮಿಂಚು ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ನಿನ್ನೆ (ಮೇ 15) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 32.3 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 23. ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 16 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 24.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 81)

ಮಂಗಳೂರು – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 77)

ಚಿತ್ರದುರ್ಗ – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 80)

ಗದಗ – 27.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಹೊನ್ನಾವರ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)

ಕಲಬುರಗಿ – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 57)

ಬೆಳಗಾವಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಕಾರವಾರ – 34.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner