ಕರ್ನಾಟಕ ಹವಾಮಾನ ಮೇ 17; ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉಳಿದೆಡೆ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಮೇ 17; ರಾಜ್ಯದೆಲ್ಲ ಜಿಲ್ಲೆಗಳಲ್ಲಿ ಬಹುತೇಕ ಇಂದು ಮಳೆಯಾಗಲಿದ್ದು, ಪ್ರದೇಶ ಮತ್ತು ಪ್ರಮಾಣಗಳಲ್ಲಿ ವ್ಯತ್ಯಾಸವಿರಲಿದೆ. ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉಳಿದೆಡೆ ಮಳೆ ಮುನ್ಸೂಚನೆ ಇದ್ದು, ಗುಡುಗು ಮಿಂಚುಗಳ ಮುನ್ನೆಚ್ಚರಿಕೆಯೂ ಇದೆ.
ಬೆಂಗಳೂರು: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಇಂದು (ಮೇ 17) ಮಳೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಚದುರಿದ ಮಳೆಯಾದರೆ, ಕರಾವಳಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಲಿದೆ. ರಾಜ್ಯದ ದಕ್ಷಿಣ ಕನ್ನಡ, ಮೈಸೂರು, ಮಂಡ್ಯ ಸೇರಿ 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್, ಉಳಿದೆಡೆ ಮಳೆ ಮುನ್ಸೂಚನೆ ಲಭ್ಯವಾಗಿದ್ದು, ಗುಡುಗು ಮಿಂಚು ಬಿರುಗಾಳಿಯ ಎಚ್ಚರಿಕೆಯನ್ನೂ ಹವಾಮಾನ ಇಲಾಖೆ ನೀಡಿದೆ.
ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 18 ಬೆಳಗ್ಗೆ 8.30ರ ತನಕ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಈ ಮೂರು ಕರಾವಳಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ (ಶೇಕಡ 75 ಭೂಭಾಗ) ಮಳೆಯಾಗಲಿದೆ. ಗುಡುಗು ಮಿಂಚು ಕೂಡ ಇರಲಿದ್ದು, ಗಾಳಿಯೂ ಜೋರಾಗಿ ಬೀಸಬಹುದು ಎಂಬ ಎಚ್ಚರಿಕೆ ನೀಡಲಾಗಿದೆ.
ಕರ್ನಾಟಕದ ಉತ್ತರ ಒಳನಾಡಿನ ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣದಿಂದ ಭಾರಿ ಮಳೆಯಾಗಲಿದ್ದು, ಗುಡುಗು ಮಿಂಚು ಕೂಡ ಇರಲಿದೆ ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಗುಡುಗು ಮಿಂಚು ಕೂಡ ಇರಲಿದೆ. ಬಿರುಗಾಳಿಯ ವೇಗ ಗಂಟೆಗೆ 40 ರಿಂದ 50 ಕಿ.ಮೀ. ಇರಲಿದ್ದು, ಮುಂಜಾಗ್ರತಾ ಕ್ರಮ ತೆಗೆದುಕೊಳ್ಳುವಂತೆ ಇಲಾಖೆ ಎಚ್ಚರಿಸಿದೆ.
ದಕ್ಷಿಣ ಕನ್ನಡ, ಮೈಸೂರು ಮಂಡ್ಯ ಸೇರಿ 6 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್
ವ್ಯಾಪಕವಾಗಿ ಮಳೆ ಬೀಳಲಿರುವ ದಕ್ಷಿಣ ಕನ್ನಡ, ಮೈಸೂರು, ಮಂಡ್ಯ,ಹಾಸನ, ಕೊಡಗು, ತುಮಕೂರು ಜಿಲ್ಲೆಗಳ ಹಲವೆಡೆ ಬಿರುಗಾಳಿ, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
ಬೆಂಗಳೂರು ಹವಾಮಾನ ಇಂದು (ಮೇ 17), ಮೋಡ ಕವಿದ ವಾತಾವರಣ, ಗುಡುಗು ಮಿಂಚು ಸಹಿತ ಮಳೆ
ಬೆಂಗಳೂರು ನಗರದಲ್ಲಿ ಇಂದು (ಮೇ 17) ಮೋಡಕವಿದ ವಾತಾವರಣ ಇರಲಿದ್ದು, ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಬಹುದು. ಗರಿಷ್ಠ ತಾಪಮಾನವು 30 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 16) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 31.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 30 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಗುಡುಗು ಮಿಂಚು ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ನಿನ್ನೆ (ಮೇ 16) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 32.6 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 23.3 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 17 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 24.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 85)
ಮಂಗಳೂರು – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 81)
ಚಿತ್ರದುರ್ಗ – 24.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 81)
ಗದಗ – 22.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)
ಹೊನ್ನಾವರ – 25.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 86)
ಕಲಬುರಗಿ – 25.9 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)
ಬೆಳಗಾವಿ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಕಾರವಾರ – 31.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 64 )
----------------------
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)