ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ

ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ

ಕರ್ನಾಟಕ ಹವಾಮಾನ ಮೇ 18; ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಇಂದು (ಮೇ 18) ಬಹುತೇಕ ಮಳೆಯಾಗಲಿದೆ. ವ್ಯಾಪಕವಾಗಿ ಅಲ್ಲದೇ ಹೋದರೂ ಹಲವು ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದೆಡೆ ಗುಡುಗು ಮಿಂಚು ಸಹಿತ ಮಳೆ ಮುನ್ಸೂಚನೆ ಇದೆ.

ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಕರ್ನಾಟಕ ಹವಾಮಾನ ಮೇ 18; ಉತ್ತರ ಕನ್ನಡ, ತುಮಕೂರು, ಬೆಂಗಳೂರು ಸೇರಿ 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌, ಉತ್ತರ ಒಳನಾಡಲ್ಲಿ ಹಲವೆಡೆ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. (ANI)

ಬೆಂಗಳೂರು: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಇಂದು (ಮೇ 18) ಮಳೆಯಾಗಲಿದ್ದು, ಕೆಲವು ಜಿಲ್ಲೆಗಳಲ್ಲಿ ಬಹುತೇಕ ಪ್ರದೇಶಗಳಲ್ಲಿ ಆದರೆ, ಇನ್ನು ಕೆಲವು ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕರಾವಳಿ ಕರ್ನಾಟಕದ ಉತ್ತರ ಕನ್ನಡದಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಭಾರಿ ಮಳೆ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್‌ ಘೋಷಣೆಯಾಗಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಸಾಧಾರಣ ಮಳೆಯಾಗಲಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಈ ಜಿಲ್ಲೆಗಳಲ್ಲಿ ಯಾವುದೇ ಮುನ್ನೆಚ್ಚರಿಕೆ ನೀಡಲಾಗಿಲ್ಲ.

ಇನ್ನುಳಿದಂತೆ, ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಈ ಪೈಕಿ ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿಂತೆ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.

ಬೆಂಗಳೂರು ಹವಾಮಾನ ಇಂದು (ಮೇ 18); ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬೆಂಗಳೂರು ನಗರದಲ್ಲಿ ಇಂದು (ಮೇ 18) ಮೋಡಕವಿದ ವಾತಾವರಣ ಇರಲಿದ್ದು, ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಬಹುದು. ಗರಿಷ್ಠ ತಾಪಮಾನವು 31 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 17) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 30.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.1 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 31 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಗುಡುಗು ಮಿಂಚು ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ನಿನ್ನೆ (ಮೇ 17) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 31.6 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 18 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 83)

ಮಂಗಳೂರು – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 82)

ಚಿತ್ರದುರ್ಗ – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಗದಗ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಹೊನ್ನಾವರ – 32.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62)

ಕಲಬುರಗಿ – 26.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78)

ಬೆಳಗಾವಿ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಕಾರವಾರ – 34.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 63 )

----------------------

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

(This copy first appeared in Hindustan Times Kannada website. To read more like this please logon to kannada.hindustantimes.com)

Whats_app_banner