ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಕರ್ನಾಟಕ ಹವಾಮಾನ ಮೇ 19; ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಪೂರ್ವ ಮುಂಗಾರು ಮಳೆ ವ್ಯಾಪಿಸಿದೆ. ಹೀಗಾಗಿ ರಾಜ್ಯದಲ್ಲಿ ಮಳೆಯಾಗುತ್ತಿದ್ದು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಅನ್ನು ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ತನ್ನ ಮಳೆ ಮುನ್ಸೂಚನೆ ವರದಿಯಲ್ಲಿ ನೀಡಿದೆ.

ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌
ಕರ್ನಾಟಕ ಹವಾಮಾನ ಮೇ 19; ರಾಜ್ಯದಲ್ಲಿ ಮಳೆ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬೆಂಗಳೂರು: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಇಂದು (ಮೇ 19) ಮಳೆಯಾಗಲಿದೆ. 15ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಭಾರಿ ಮಳೆಯಾಗಲಿದೆ. ಉಳಿದ ಜಿಲ್ಲೆಗಳ ಹಲವೆಡೆ ಮಳೆಯಾಗಲಿದ್ದು, ಮಳೆಯಾಗುವಲ್ಲಿ ಗುಡುಗು ಮಿಂಚು ಮತ್ತು ಬಿರುಗಾಳಿ ಕೂಡ ಇರಬಹುದು ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ. ರಾಜ್ಯದಲ್ಲಿ ಮಳೆಯಾಗುವ ಸಂದರ್ಭದಲ್ಲಿ ಮಳೆಯ ತೀವ್ರತೆಗೆ ಅನುಗುಣವಾಗಿ ಶಿವಮೊಗ್ಗ, ಕೊಡಗು, ಚಿಕ್ಕಮಗಳೂರಲ್ಲಿ ಆರೆಂಜ್ ಅಲರ್ಟ್‌, 12 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಅನ್ನು ಮಳೆ ಮುನ್ಸೂಚನೆ ವರದಿ ನೀಡಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 20ರ ಬೆಳಗ್ಗೆ 8.30ರ ತನಕ, ಕರಾವಳಿ ಕರ್ನಾಟಕದಲ್ಲಿ ಗಮನಿಸುವುದಾದರೆ, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಭಾರಿ ಮಳೆಯಾಗಲಿದೆ. ಹೀಗಾಗಿ ಈ ಮೂರೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಈ ಪೈಕಿ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಈ ಮೂರು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಭಾರಿ ಪ್ರಮಾಣದ ಮಳೆ ಬೀಳುವ ಸಾಧ್ಯತೆ ಇರುವ ಕಾರಣ ಆರೆಂಜ್ ಅಲರ್ಟ್‌ ಅನ್ನು ಹವಾಮಾನ ಇಲಾಖೆ ಘೋ‍ಷಿಸಿದೆ. ಇನ್ನುಳಿದಂತೆ, ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ, ತುಮಕೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಭಾರಿ ಮಳೆಯಾಗಲಿರುವ ಕಾರಣ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿಂತೆ, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆ ಬೀಳಬಹುದು. ಹಾಗಾಗಿ ಈ ಜಿಲ್ಲೆಗಳಲ್ಲಿ ಯಾವುದೇ ಮುನ್ನೆಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿಲ್ಲ.

ಬೆಂಗಳೂರು ಹವಾಮಾನ ಇಂದು (ಮೇ 19); ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌

ಬೆಂಗಳೂರು ನಗರದಲ್ಲಿ ಇಂದು (ಮೇ 19) ಮೋಡಕವಿದ ವಾತಾವರಣ ಇರಲಿದ್ದು, ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 18) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 29.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಗುಡುಗು ಮಿಂಚು ಗಾಳಿ ಸಹಿತ ಸಾಧಾರಣ ಮಳೆಯಾಗಲಿದೆ. ನಿನ್ನೆ (ಮೇ 18) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕನಿಷ್ಠ ತಾಪಮಾನ 22.2 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 19 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)

ಮಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಚಿತ್ರದುರ್ಗ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 95)

ಗದಗ – 24.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಹೊನ್ನಾವರ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 81)

ಕಲಬುರಗಿ – 26.3 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 81)

ಬೆಳಗಾವಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಕಾರವಾರ – 34.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 69 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ ಕ್ಕೆ ಭೇಟಿ ನೀಡಿ.)

ಟಿ20 ವರ್ಲ್ಡ್‌ಕಪ್ 2024