ಕರ್ನಾಟಕ ಹವಾಮಾನ ಮೇ 20; ದಕ್ಷಿಣ ಕನ್ನಡ, ಉಡುಪಿ ಸೇರಿ 8ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಮೇ 20; ರಾಜ್ಯದಲ್ಲಿ ದಕ್ಷಿಣ ಕನ್ನಡ, ಉಡುಪಿ ಸೇರಿ 8 ಜಿಲ್ಲೆಗಳಲ್ಲಿ ಇಂದು (ಮೇ 20) ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಾವಣಗೆರೆ, ಮಂಡ್ಯ ಸೇರಿ 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಕಡೆ ಮಳೆಯಾಗಲಿದ್ದು, ಕೆಲವು ಕಡೆ ಗುಡುಗು ಮಿಂಚು ಇರಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಬೆಂಗಳೂರು: ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಸೇರಿ 8 ಜಿಲ್ಲೆಗಳಲ್ಲಿ ಇಂದು (ಮೇ 20) ಗುಡುಗು ಮಿಂಚು ಸಹಿತ ವ್ಯಾಪಕ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಇನ್ನುಳಿದಂತೆ ದಾವಣಗೆರೆ, ಮಂಡ್ಯ ಸೇರಿ 4 ಜಿಲ್ಲೆಗಳಲ್ಲಿ ಕೆಲವು ಕಡೆ ಭಾರಿ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಮಿಕ್ಕಂತೆ ರಾಜ್ಯದ ಬಹುಪಾಲು ಪ್ರದೇಶಗಳಲ್ಲಿ ಇಂದು ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ, ಮೇ 21ರ ಬೆಳಗ್ಗೆ 8.30 ರ ತನಕದ ಅವಧಿಯಲ್ಲಿ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲೂ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ದಕ್ಷಿಣ ಒಳನಾಡಿನಲ್ಲೂ ಗುಡುಗು ಮಿಂಚು ಸಹಿತ ಮಳೆಯಾಗಲಿದ್ದು, ಆರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿರುವ ಕಾರಣ ಮುನ್ನೆಚ್ಚರಿಕೆಯಾಗಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ರಾಮನಗರ, ಮಂಡ್ಯ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮುನ್ನೆಚ್ಚರಿಕೆಯಾಗಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಮಿಕ್ಕಂತೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಲಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಹಲವೆಡೆ ಚದುರಿದ ಸಾಧಾರಣ ಮಳೆಯಾಗಲಿದೆ. ಇಲ್ಲೂ ಗುಡುಗು ಮಿಂಚು ಉಂಟಾಗಬಹುದು ಎಂದು ವರದಿ ಎಚ್ಚರಿಸಿದೆ.
ಬೆಂಗಳೂರು ಹವಾಮಾನ ಇಂದು (ಮೇ 20); ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಹಲವೆಡೆ ಮಳೆ
ಬೆಂಗಳೂರು ನಗರದಲ್ಲಿ ಇಂದು (ಮೇ 20) ಮೋಡಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 29 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 19) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 29.3 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ನಿನ್ನೆ 30.3 ಮಿ.ಮೀ. ಮಳೆಯಾಗಿದೆ.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 29 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಗುಡುಗು ಮಿಂಚು ಗಾಳಿ ಸಹಿತ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಮೇ 19) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 32.1 ಡಿಗ್ರಿ ಸೆಲ್ಶಿಯಸ್ ಇತ್ತು. ನಿನ್ನೆ 9.4 ಮಿ.ಮೀ. ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 20 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 93)
ಮಂಗಳೂರು – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)
ಚಿತ್ರದುರ್ಗ – 22.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಗದಗ – 25.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 86)
ಹೊನ್ನಾವರ – 26.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)
ಕಲಬುರಗಿ – 28.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 65)
ಬೆಳಗಾವಿ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಕಾರವಾರ – 31.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79 )
----------------------
(This copy first appeared in Hindustan Times Kannada website. To read more like this please logon to kannada.hindustantimes.com)
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.