ಕರ್ನಾಟಕ ಹವಾಮಾನ ಮೇ 24; ಕೇರಳದಲ್ಲಿ ಚಂಡಮಾರುತದ ಮಳೆ, ಕರ್ನಾಟಕದ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮಳೆ ಮುನ್ಸೂಚನೆ
ಕರ್ನಾಟಕ ಹವಾಮಾನ ಮೇ 24; ಇನ್ನೈದು ದಿನ ಕೇರಳದಲ್ಲಿ ಚಂಡಮಾರುತದ ಕಾರಣ ಮಳೆಯಾಗಲಿದ್ದು, ಕರ್ನಾಟಕದ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರ್ನಾಟಕದ ಎಲ್ಲ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಈ ಸಲ ಬೇಗನೆ ಬರುವ ಸಾಧ್ಯತೆ ದಟ್ಟವಾಗಿದೆ. ಕೇರಳದದಲ್ಲಿ ಚಂಡಮಾರುತದ ಕಾರಣ ಮಳೆಯಾಗಲಿದೆ. ಪರಿಣಾಮ ಕರ್ನಾಟಕದ ಮೇಲೂ ಆಗಲಿದ್ದು, 4 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಮಳೆ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ, ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ತುಂತುರು ಮಳೆಯಾಗಲಿದೆ, ಕೆಲವು ಕಡೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ 4 ವಾರಗಳವರೆಗೆ ಭಾರತೀಯ ಹವಾಮಾನ ಇಲಾಖೆ ನೀಡಿದ ವಿಸ್ತೃತ ಶ್ರೇಣಿಯ ಮುನ್ಸೂಚನೆ ಗಮನಿಸಿದರೆ, ಮಲೆನಾಡು ಮತ್ತು ಕರಾವಳಿ ಕರ್ನಾಟಕದಲ್ಲಿ ಉತ್ತಮ ಮಳೆಯ ವಿಶೇಷವಾಗಿ ಸಾಮಾನ್ಯಕ್ಕಿಂತ ಹೆಚ್ಚಿನ ಮಳೆ ಮತ್ತು ಮುಂಗಾರು ಯಾವುದೇ ಸಮಯದಲ್ಲಿ ಬೇಗ ಪ್ರಾರಂಭವಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ವಿವರಿಸಿದೆ.
ರಾಜ್ಯದಾದ್ಯಂತ ಮೇ 24ರ ತನಕ ತುಂತುರು ಮಳೆ, ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಲಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ನಂತರ ರಾಜ್ಯದಲ್ಲಿ ಮಳೆಯ ಚಟುವಟಿಕೆ ಮತ್ತು ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಮೇ 23 ರಿಂದ 31 ರವರೆಗಿನ ಎಸ್ಡಿಎಸ್ಸಿ- ಎಸ್ಎಚ್ಎಆರ್ ಮಳೆ ಮುನ್ಸೂಚನೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೇಳಿದೆ.
ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 25ರ ಬೆಳಗ್ಗೆ 8.30 ರ ತನಕದ ಅವಧಿಯಲ್ಲಿ, ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕರ್ನಾಟಕದ ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ. ಕೆಲವು ಕಡೆ ಗಂಟೆಗೆ 40-50 ಕಿ.ಮೀ. ವೇಗದ ಗಾಳಿಯೊಂದಿಗೆ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲಿದೆ ಎಂದು ವರದಿ ಎಚ್ಚರಿಸಿದೆ.
ಕರ್ನಾಟಕದ ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು, ಮಿಂಚು, ಬಿರುಗಾಳಿ ಸಹಿತ ಭಾರಿ ಮಳೆಯಾಗಲಿರುವ ಸಾಧ್ಯತೆ ಇದೆ. ಹೀಗಾಗಿ ಈ 5 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ. ಇನ್ನುಳಿದಂತೆ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಕಡೆ ಸಾಧಾರಣ ಮಳೆಯಾಗಲಿದೆ.
ಬೆಂಗಳೂರು ಹವಾಮಾನ ಇಂದು (ಮೇ 24); ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಹಲವೆಡೆ ಮಳೆ
ಬೆಂಗಳೂರು ನಗರದಲ್ಲಿ ಇಂದು (ಮೇ 24) ಮೋಡಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 32 ಡಿಗ್ರಿ ಸೆಲ್ಶಿಯಸ್ ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 23) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 31.5 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 23.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ನಿನ್ನೆ 0.2 ಮಿ.ಮೀ. ಮಳೆಯಾಗಿದೆ.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 32 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 23 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಮೇ 23) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 31.8 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 23.6 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 24 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 25.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 87)
ಮಂಗಳೂರು – 26.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)
ಚಿತ್ರದುರ್ಗ – 24.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಗದಗ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)
ಹೊನ್ನಾವರ – 26.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)
ಕಲಬುರಗಿ – 28.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 62)
ಬೆಳಗಾವಿ – 24 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಕಾರವಾರ – 33.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78 )
----------------------
(This copy first appeared in Hindustan Times Kannada website. To read more like this please logon to kannada.hindustantimes.com)
(ಕನ್ನಡದಲ್ಲಿ ಕ್ರಿಕೆಟ್, ಎಚ್ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)