ಕರ್ನಾಟಕ ಹವಾಮಾನ ಮೇ 25; ಕರಾವಳಿ ಕರ್ನಾಟಕದಲ್ಲಷ್ಟೆ ಮಳೆ ಹೆಚ್ಚು, ಬೆಂಗಳೂರು ಸೇರಿ ಉಳಿದೆಡೆ ಮಳೆ ಪ್ರಮಾಣ ಇಳಿಕೆ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 25; ಕರಾವಳಿ ಕರ್ನಾಟಕದಲ್ಲಷ್ಟೆ ಮಳೆ ಹೆಚ್ಚು, ಬೆಂಗಳೂರು ಸೇರಿ ಉಳಿದೆಡೆ ಮಳೆ ಪ್ರಮಾಣ ಇಳಿಕೆ

ಕರ್ನಾಟಕ ಹವಾಮಾನ ಮೇ 25; ಕರಾವಳಿ ಕರ್ನಾಟಕದಲ್ಲಷ್ಟೆ ಮಳೆ ಹೆಚ್ಚು, ಬೆಂಗಳೂರು ಸೇರಿ ಉಳಿದೆಡೆ ಮಳೆ ಪ್ರಮಾಣ ಇಳಿಕೆ

ಕರ್ನಾಟಕ ಹವಾಮಾನ ಮೇ 25; ರಾಜ್ಯದಲ್ಲಿ ಇಂದು ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಕರಾವಳಿ ಕರ್ನಾಟಕದಲ್ಲಷ್ಟೆ ಮಳೆ ಹೆಚ್ಚು ಇರಲಿದೆ. ಬೆಂಗಳೂರು ಸೇರಿ ಉಳಿದೆಡೆ ಮಳೆಯ ಪ್ರಮಾಣ ಇಳಿಕೆಯಾಗಲಿದೆ. ಕೆಲವು ಜಿಲ್ಲೆಗಳಲ್ಲಿ ಮಳೆ ಇರಲ್ಲ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ತಿಳಿಸಿದೆ.

ಕರ್ನಾಟಕ ಹವಾಮಾನ ಮೇ 25; ಕರಾವಳಿ ಕರ್ನಾಟಕದಲ್ಲಷ್ಟೆ ಮಳೆ ಹೆಚ್ಚು, ಬೆಂಗಳೂರು ಸೇರಿ ಉಳಿದೆಡೆ ಮಳೆ ಪ್ರಮಾಣ ಇಳಿಕೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)
ಕರ್ನಾಟಕ ಹವಾಮಾನ ಮೇ 25; ಕರಾವಳಿ ಕರ್ನಾಟಕದಲ್ಲಷ್ಟೆ ಮಳೆ ಹೆಚ್ಚು, ಬೆಂಗಳೂರು ಸೇರಿ ಉಳಿದೆಡೆ ಮಳೆ ಪ್ರಮಾಣ ಇಳಿಕೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ) (Canva)

ಬೆಂಗಳೂರು: ಕರ್ನಾಟಕದಲ್ಲಿ ಇಂದು (ಮೇ 25) ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಕರಾವಳಿ ಕರ್ನಾಟಕದ ಜಿಲ್ಲೆಗಳಲ್ಲಿ ಮಾತ್ರವೇ ಹೆಚ್ಚಿನ ಮಳೆ ಇರಲಿದೆ. ಬೆಂಗಳೂರು ಸೇರಿ ಉಳಿದ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಇಳಿಕೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಬೀದರ್ ಸೇರಿ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಬೀಳುವ ಸಾಧ್ಯತೆ ಕಡಿಮೆ ಇದೆ. ಈ ಜಿಲ್ಲೆಗಳಲ್ಲಿ ಒಣಹವೆ, ಮೋಡ ಕವಿದ ವಾತಾವರಣ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ವಿವರಿಸಿದೆ.

ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 26ರ ಬೆಳಗ್ಗೆ 8.30 ತನಕದ ಅವಧಿಯಲ್ಲಿ ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆ ಬೀಳುವ ಸಾಧ್ಯತೆ ಇದೆ.

ಕರ್ನಾಟಕದ ಉತ್ತರ ಒಳನಾಡಿನ ಗದಗ, ಹಾವೇರಿ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಮಾತ್ರವೇ ಮಳೆಯಾಗಬಹುದು. ಉಳಿದಂತೆ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಇರಲ್ಲ. ಒಣಹವೆ ಕಾಣಲಿದ್ದು, ಕೆಲವು ಕಡೆ ಮೋಡಕವಿದ ವಾತಾವರಣ ಇರಲಿದೆ.

ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗಬಹುದು. ವಿಜಯನಗರ, ಶಿವಮೊಗ್ಗ, ರಾಮನಗರ, ಚಿತ್ರದುರ್ಗ, ಬಳ್ಳಾರಿ ಜಿಲ್ಲೆಗಳಲ್ಲಿ ಮಳೆ ಬೀಳುವ ಸಾಧ್ಯತೆ ಕಡಿಮೆ.

ಬೆಂಗಳೂರು ಹವಾಮಾನ ಇಂದು (ಮೇ 25); ನಗರ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆ

ಬೆಂಗಳೂರು ನಗರದಲ್ಲಿ ಇಂದು (ಮೇ 25) ಕೂಡ ಕೆಲವು ಕಡೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಹಲವೆಡೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಶಿಯಸ್ ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 24) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 33.4 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 24.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 24 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ನಿನ್ನೆ (ಮೇ 24) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 33.8 ಡಿಗ್ರಿ ಸೆಲ್ಶಿಯಸ್, ಕನಿಷ್ಠ ತಾಪಮಾನ 24.8 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 25 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 22.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)

ಮಂಗಳೂರು – 24.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 96)

ಚಿತ್ರದುರ್ಗ – 21 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಗದಗ – 25.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)

ಹೊನ್ನಾವರ – 29.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 80)

ಕಲಬುರಗಿ – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)

ಬೆಳಗಾವಿ – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಕಾರವಾರ – 33.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78 )

----------------------

(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್‌. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)

(This copy first appeared in Hindustan Times Kannada website. To read more like this please logon to kannada.hindustantimes.com)