ಕರ್ನಾಟಕ ಹವಾಮಾನ ಮೇ 29; ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡಗಳಲ್ಲಿ ಬಹುತೇಕ ಕಡೆ ಮಳೆ, ಒಟ್ಟು 18 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಕರ್ನಾಟಕ ಹವಾಮಾನ ಮೇ 29; ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ತೀವ್ರತೆ ಕಡಿಮೆಯಾಗಿದೆ. ರಾಜ್ಯದಲ್ಲಿ ಇಂದು (ಮೇ 29) 12ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಇರಲ್ಲ. ಒಣಹವೆ ಮುಂದುವರಿಯಲ್ಲಿದ್ದು, ತಾಪಮಾನ ಹೆಚ್ಚಳವಾಗಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡಗಳಲ್ಲಿ ಬಹುತೇಕ ಕಡೆ ಮಳೆ, ಒಟ್ಟು 18 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ವರದಿ ಹೇಳಿದೆ.
ಬೆಂಗಳೂರು: ಕರ್ನಾಟಕದಲ್ಲಿ ಪೂರ್ವ ಮುಂಗಾರು ಮಳೆಯ ತೀವ್ರತೆ ಕಡಿಮೆಯಾಗಿದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಹಲವೆಡೆ ಇಂದು (ಮೇ 29) ಗುಡುಗು ಮಿಂಚು ಸಹಿತ ಮಳೆಯಾಗಲಿದೆ. ಕೆಲವು ಕಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಇನ್ನುಳಿದಂತೆ ಬೆಂಗಳೂರು ಗ್ರಾಮಾಂತರ, ನಗರ ಜಿಲ್ಲೆ ಸೇರಿ 15 ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರ ಮಳೆಯಾಗಲಿದ್ದು, ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗಲೂ ಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.
ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರ ಪ್ರಕಟಿಸಿದ ಮಳೆ ಮುನ್ಸೂಚನೆ ವರದಿ ಪ್ರಕಾರ ಮೇ 30ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಕರ್ನಾಟಕದ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಕೆಲವು ಕಡೆ ಮಳೆಯಾಗಬಹುದು. ಈ ಜಿಲ್ಲೆಗಳ ಪೈಕಿ ಕೆಲವು ಕಡೆ ಬಿರುಗಾಳಿ ಅಂದರೆ ಗಂಟೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿ ಜೊತೆಗೆ ಗುಡುಗು ಮಿಂಚು ಸಹಿತ ಮಳೆಯಾಗಬಹುದು. ಇನ್ನುಳಿದಂತೆ, ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ,ಯಾದಗಿರಿ ಜಿಲ್ಲೆಗಳಲ್ಲಿ ಮಳೆ ಇರಲ್ಲ. ಒಣಹವೆ ಇರಲಿದ್ದು, ತಾಪಮಾನ ಹೆಚ್ಚಳವಾಗಲಿದೆ ಎಂದು ವರದಿ ಹೇಳಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಮಂಡ್ಯ, ಕೋಲಾರ, ಕೊಡಗು,ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದೆ. ಈ ಭಾಗದಲ್ಲಿ ಕೆಲವು ಕಡೆ ಗಂಟೆಗೆ 30 ರಿಂದ 40 ಕಿ.ಮೀ. ವೇಗದ ಗಾಳಿ, ಗುಡುಗು ಮಿಂಚು ಸಹಿತ ಭಾರಿ ಮಳೆಯಾಗಲೂ ಬಹುದು. ಇನ್ನುಳಿದಂತೆ, ವಿಜಯನಗರ, ಚಿತ್ರದುರ್ಗ,ದಾವಣಗೆರೆ, ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆ ಇರಲ್ಲ. ಒಣಹವೆ ಮುಂದುವರಿಯಲಿದೆ ಎಂದು ಮಳೆ ಮುನ್ಸೂಚನೆ ವರದಿ ವಿವರಿಸಿದೆ.
ಬೆಂಗಳೂರು ಹವಾಮಾನ ಇಂದು (ಮೇ 29); ನಗರ, ಗ್ರಾಮಾಂತರ ಜಿಲ್ಲೆಗಳ ಕೆಲವು ಕಡೆ ಮಳೆ ಸಾಧ್ಯತೆ
ಬೆಂಗಳೂರು ನಗರದಲ್ಲಿ ಇಂದು (ಮೇ 29) ಕೂಡ ಕೆಲವು ಕಡೆಗಳಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಕೆಲವು ನಿರ್ದಿಷ್ಟ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 33 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 28) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 31.6 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 33 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 29 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 23.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 88)
ಮಂಗಳೂರು – 26 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)
ಚಿತ್ರದುರ್ಗ – 23.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 90)
ಗದಗ – 24.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 84)
ಹೊನ್ನಾವರ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)
ಕಲಬುರಗಿ – 28.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 60)
ಬೆಳಗಾವಿ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಕಾರವಾರ – 34.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 68 )
----------------------
(ಕನ್ನಡದಲ್ಲಿ ಕ್ರಿಕೆಟ್, ಎಚ್‌ಟಿ ಕನ್ನಡ ಬೆಸ್ಟ್. ಐಪಿಎಲ್, ಟಿ20 ವರ್ಲ್ಡ್‌ಕಪ್ ಸೇರಿದಂತೆ ಕ್ರಿಕೆಟ್ ಲೋಕದ ಸಮಗ್ರ ಮಾಹಿತಿ, ತಾಜಾ ವಿದ್ಯಮಾನ, ರನ್-ವಿಕೆಟ್, ಪ್ಲೇಆಫ್, ಟೀಮ್ ಸ್ಟಾಟ್ ವಿಶ್ಲೇಷಣೆಗಳಿಗಾಗಿ kannada.hindustantimes.com/cricket ಕ್ಕೆ ಭೇಟಿ ನೀಡಿ.)
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)