ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ-weather today may 4 rain forecast for mysuru mandya kolar and near by parts bengaluru weather today uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ

ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ, ಉಳಿದೆಡೆ ಒಣಹವೆ

ಕರ್ನಾಟಕ ಹವಾಮಾನ ಮೇ 4; ರಣಬಿಸಿಲು, ಶಾಖದ ಅಲೆಗಳ ನಂತರ ನಿನ್ನೆ (ಮೇ 3) ಬೆಂಗಳೂರು, ಮೈಸೂರು ಮತ್ತು ರಾಜ್ಯದ ಕೆಲವು ಕಡೆ ಮಳೆಯಾಗಿದೆ. ಇಂದು (ಮೇ 4) ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ ಬೀಳುವ ಸಾಧ್ಯತೆ ಇದೆ. ಉಳಿದಂತೆ ಎಲ್ಲೆಡೆ ಒಣಹವೆ ಇರಲಿದೆ. ತಾಪಮಾನ ಕೊಂಚ ಇಳಿಕೆಯಾಗುವ ಸಾಧ್ಯತೆ ಇದೆ ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ ಸಾಧ್ಯತೆಯ ನಕ್ಷೆ (ಬಲ ಚಿತ್ರ)
ಕರ್ನಾಟಕ ಹವಾಮಾನ ಮೇ 4; ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ ಸಾಧ್ಯತೆಯ ನಕ್ಷೆ (ಬಲ ಚಿತ್ರ)

ಬೆಂಗಳೂರು: ಕರ್ನಾಟಕದ ಬೆಂಗಳೂರು, ಮೈಸೂರು ಸೇರಿ ವಿವಿಧೆಡೆ ನಿನ್ನೆ (ಮೇ 3) ಮಳೆಬಿದ್ದಿದ್ದು, ರಣಬಿಸಲು ಶಾಖದ ಅಲೆಗಳಿಂದ ಕಂಗೆಟ್ಟ ಜನ,ಜಾನುವಾರುಗಳು ಕೊಂಚ ನಿರಾಳವಾಗುವಂತೆ ಮಾಡಿದೆ. ಭೂಮಿಯೂ ಸ್ವಲ್ಪ ಮಟ್ಟಿಗೆ ತಂಪಾಗಿದೆ. ಇಂದು (ಮೇ 4) ) ಬೆಂಗಳೂರು, ಮೈಸೂರು, ಮಂಡ್ಯ, ಕೋಲಾರ ಸುತ್ತಮುತ್ತ ಅಲ್ಲಲ್ಲಿ ಮಳೆ ಬೀಳಬಹುದು. ಉಳಿದೆಡೆ ಒಣಹವೆ ಮುಂದುವರಿಯಬಹುದು ಎಂದು ಮಳೆ ಮುನ್ಸೂಚನೆ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಇದರಂತೆ, ದಕ್ಷಿಣ ಒಳನಾಡಿನ ಬಳ್ಳಾರಿ, ಚಿಕ್ಕಬಳ್ಳಾಪುರ, ಕೋಲಾರ ಮಂಡ್ಯ, ತುಮಕೂರು, ವಿಜಯನಗರ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜ ನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ. ಆದಾಗ್ಯೂ ಒಂದೆರಡು ಕಡೆ ಮಳೆಯಾಗಬಹುದು. ಗರಿಷ್ಠ ತಾಪಮಾನದಲ್ಲಿ ಕೊಂಚ ಇಳಿಕೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ತಿಳಿಸಿದೆ.

ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆ ಸೇರಿದಂತೆ ಉಳಿದೆಡೆ ಶಾಖದ ಅಲೆಗಳ ತೀವ್ರತೆ ಕಡಿಮೆಯಾಗಿದ್ದು, ಒಣಹವೆ ಮುಂದುವರಿಯಲಿದೆ. ಕೆಲವು ಜಿಲ್ಲೆಗಳಲ್ಲಿ ಒಂದೆರಡು ಕಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಮುನ್ಸೂಚನೆ ವರದಿ ವಿವರಿಸಿದೆ. ಆದಾಗ್ಯೂ, ಉತ್ತರ ಒಳನಾಡಿನ ಉಳಿದ ಜಿಲ್ಲೆಗಳು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಎಲ್ಲಾ ಜಿಲ್ಲೆಗಳು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನವು ಸುಮಾರು 40-44˚C ಇರುವ ಸಾಧ್ಯತೆಯಿದೆ. ಮೇ 6 ರವರೆಗೆ ಉತ್ತರ ಒಳನಾಡಿನ ರಾಯಚೂರು, ಕಲಬುರ್ಗಿ, ಬಾಗಲಕೋಟೆ ಯಾದಗಿರಿ ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನವು ಸುಮಾರು 40-46˚C ಇರುವ ಸಾಧ್ಯತೆಯಿದೆ. ಕೊಡಗು, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ 33-40 ಡಿಗ್ರಿ ಸೆಲ್ಸಿಯಸ್ ತಾಪಮಾನವು ಇರುವ ಸಾಧ್ಯತೆಯಿದೆ. ಮೇ 7 ರಿಂದ ರಾಜ್ಯದಾದ್ಯಂತ ಗರಿಷ್ಠ ತಾಪಮಾನವು 2-3˚C ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿ ವಿವರಿಸಿದೆ.

ಇನ್ನು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಈ ಮೂರು ಕರಾವಳಿ ಜಿಲ್ಲೆಗಳಲ್ಲಿ ಒಣಹವೆ ಇರಲಿದ್ದು, ಬಿಸಿ ವಾತಾವರಣ ಮತ್ತು ಆರ್ದ್ರತೆ ಯ ಕಾರಣ ಸೆಖೆಯನ್ನು ಹೆಚ್ಚು ಮಾಡಲಿದೆ ಎಂದು ವರದಿ ಹೇಳಿದೆ.

ಬೆಂಗಳೂರು ಹವಾಮಾನ ಇಂದು (ಮೇ 4), ಗರಿಷ್ಠ 39 ಡಿಗ್ರಿ ಸೆಲ್ಶಿಯಸ್ ಕನಿಷ್ಠ 26 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮೇ 4) ಗರಿಷ್ಠ ತಾಪಮಾನವು 39 ಡಿಗ್ರಿ ಸೆಲ್ಶಿಯಸ್ ಕನಿಷ್ಠ 26 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಭಾಗಶಃ ಮೋಡ ಕವಿದ ವಾತಾವರಣ ಇರಲಿದ್ದು, ಕೆಲವು ಕಡೆ ಮಳೆಯಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 39 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 26 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 3) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 26.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. ಬೆಂಗಳೂರು ಸುತ್ತಮುತ್ತ ಅಲ್ಲಲ್ಲಿ ಮಳೆ ಬಿದ್ದಿದ್ದು, ವಾತಾವರಣವನ್ನು ತಂಪು ಮಾಡಿದೆ.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 39 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 26 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮೇ 3) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 39.1 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 27 ಡಿಗ್ರಿ ಸೆಲ್ಶಿಯಸ್‌ ಇತ್ತು. ಈ ಜಿಲ್ಲೆಯಲ್ಲೂ ಕೆಲವು ಕಡೆ ನಿನ್ನೆ ಮಳೆಯಾಗಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 4 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 25.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 75)

ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಚಿತ್ರದುರ್ಗ – 29.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 68)

ಗದಗ – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 71)

ಹೊನ್ನಾವರ – 26.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 81)

ಕಲಬುರಗಿ – 31.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 31.4)

ಬೆಳಗಾವಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 74)

ಕಾರವಾರ – 34 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 61 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

mysore-dasara_Entry_Point