ಕನ್ನಡ ಸುದ್ದಿ  /  ಕರ್ನಾಟಕ  /  ಕರ್ನಾಟಕ ಹವಾಮಾನ ಮೇ 8; ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳಲ್ಲಿ ಮಳೆ, ಗುಡುಗು ಮಿಂಚು ಸಹಿತ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮೇ 8; ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳಲ್ಲಿ ಮಳೆ, ಗುಡುಗು ಮಿಂಚು ಸಹಿತ ಮಳೆ ಮುನ್ಸೂಚನೆ

ಕರ್ನಾಟಕ ಹವಾಮಾನ ಮೇ 8; ರಾಜ್ಯದಲ್ಲಿ ಇನ್ನು ಬಿಸಿಲಿನ ತಾಪ, ಶಾಖದ ಅಲೆಗಳ ಸಂಕಷ್ಟವಿಲ್ಲ, ಭೂಮಿ ತಂಪಾಗಿಸುವಂತೆ ಇನ್ನು ಕೆಲವು ದಿನ ಮಳೆ ಬೀಳಲಿದೆ. ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ಇದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಕರ್ನಾಟಕ ಹವಾಮಾನ ಮೇ 8 ರಂದು ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ  ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ವರದಿ ತಿಳಿಸಿದೆ.
ಕರ್ನಾಟಕ ಹವಾಮಾನ ಮೇ 8 ರಂದು ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಬಹುದು ಎಂದು ಮಳೆ ಮುನ್ಸೂಚನೆ ವರದಿ ತಿಳಿಸಿದೆ.

ಬೆಂಗಳೂರು: ಕರ್ನಾಟಕದ ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಇಂದು (ಮೇ 8) ಕೆಲವು ಕಡೆ ಚದುರಿದಂತೆ ಮಳೆಯಾದರೆ, ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯನ್ನು ನಿರೀಕ್ಷಿಸಬಹುದು. ಬೆಂಗಳೂರು, ಮೈಸೂರು, ಮಂಗಳೂರು ಸೇರಿ 26 ಜಿಲ್ಲೆಗಳಲ್ಲಿ ಮಳೆಯಾಗಲಿದ್ದು, ಕೆಲವು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಟ್ರೆಂಡಿಂಗ್​ ಸುದ್ದಿ

ಕರಾವಳಿ ಕರ್ನಾಟಕದಲ್ಲಿ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಲಿದೆ.ಬಿಸಿ ಮತ್ತು ಆರ್ದ್ರತೆ ಇರಲಿದ್ದು, ಮಳೆ ಬೀಳುವಾಗ ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ವರದಿ ಎಚ್ಚರಿಸಿದೆ. ಇದೇ ವೇಳೆ ಕರ್ನಾಟಕದ ಉತ್ತರ ಒಳನಾಡಿನಲ್ಲಿ ತಾಪಮಾನ ಕೊಂಚ ಇಳಿಕೆಯಾಗಲಿದ್ದು, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಂದೆರಡು ಕಡೆ ಚದುರಿದ ಮಳೆಯಾಗಲಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿಗಳಲ್ಲಿ ಒಣಹವೆ ಮುಂದುವರಿಯಲ್ಲಿದ್ದು, ಕೆಲವು ಕಡೆಗೆ ಶಾಖದ ಅಲೆಗಳು ಉಂಟಾಗಲಿದೆ ಎಂದು ವರದಿ ಎಚ್ಚರಿಸಿದೆ.

ದಕ್ಷಿಣ ಒಳನಾಡಿನ ಎಲ್ಲ ಜಿಲ್ಲೆಗಳಲ್ಲೂ ಇಂದು ಸಾಧಾರಣ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,ಚಾಮರಾಜನಗರ,ಚಿಕ್ಕಬಳ್ಳಾಪುರ,ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ,ತುಮಕೂರು, ವಿಜಯನಗರಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮಳೆಯ ಜೊತೆಗೆ 40 ರಿಂದ 50 ಕಿ.ಮೀ. ವೇಗದ ಗಾಳಿಯೂ ಬೀಸಲಿದೆ ಎಂದು ಮಳೆ ಮುನ್ಸೂಚನೆ ವರದಿ ಎಚ್ಚರಿಸಿದೆ.

ಬೆಂಗಳೂರು ಹವಾಮಾನ ಇಂದು (ಮೇ 8), ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್

ಬೆಂಗಳೂರು ನಗರದಲ್ಲಿ ಇಂದು (ಮೇ 8) ಗರಿಷ್ಠ ತಾಪಮಾನವು 35 ಡಿಗ್ರಿ ಸೆಲ್ಶಿಯಸ್ ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಕೆಲವು ಕಡೆ ಗುಡುಗು ಮಿಂಚು ಸಹಿತ ಮಳೆ ಬೀಳಬಹುದು ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 7) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 36.3 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.3 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 35 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 22 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮೇ 7) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 38.8 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 21.6 ಡಿಗ್ರಿ ಸೆಲ್ಶಿಯಸ್‌ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 8 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 27.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 65)

ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಚಿತ್ರದುರ್ಗ – 28.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 92)

ಗದಗ – 26.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 76)

ಹೊನ್ನಾವರ – 29.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 72)

ಕಲಬುರಗಿ – 26.7 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 57)

ಬೆಳಗಾವಿ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)

ಕಾರವಾರ – 33.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 71 )

----------------------

(This copy first appeared in Hindustan Times Kannada website. To read more like this please logon to kannada.hindustantimes.com)

IPL_Entry_Point