ಕರ್ನಾಟಕ ಹವಾಮಾನ ಮೇ 9; ಮೈಸೂರು, ಮಂಡ್ಯ, ಕೊಡಗು, ಬೆಂಗಳೂರು ಸೇರಿ 23 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಸಾಧ್ಯತೆ
ಕರ್ನಾಟಕ ಹವಾಮಾನ ಮೇ 9; ರಾಜ್ಯದ ಬೆಂಗಳೂರು, ಮೈಸೂರು, ಮಂಡ್ಯ, ಕೊಡಗು ಸೇರಿ 23 ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ. ಈ ಪೈಕಿ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಕೆಲವು ಕಡೆ ಮಾತ್ರವೇ ಮಳೆ ಬೀಳಲಿದೆ ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.
ಬೆಂಗಳೂರು: ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ ಸೇರಿ 7 ಜಿಲ್ಲೆಗಳಲ್ಲ ಕೆಲವು ಕಡೆ ಮಳೆ ಬೀಳಲಿದೆ. ದಕ್ಷಿಣ ಒಳನಾಡಿನ ಎರಡು ಜಿಲ್ಲೆಗಳನ್ನು ಬಿಟ್ಟು ಎಲ್ಲ ಜಿಲ್ಲೆಗಳಲ್ಲೂ ಸಾಧಾರಣ ಮಳೆ ಬೀಳಲಿದೆ. ಕೆಲವು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ಹೇಳಿದೆ.
ವಿವರವಾಗಿ ಹೇಳಬೇಕು ಎಂದರೆ ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಮಳೆ ಇಲ್ಲ. ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಜಿಲ್ಲೆಗಳ ಕೆಲವು ಕಡೆ ಮಳೆಯಾಗಲಿದೆ.ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗುಡುಗು ಮಿಂಚು ಕೂಡ ಇರಬಹುದು. ಉಳಿದಂತೆ ಯಾದಗಿರಿ, ಹಾವೇರಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಒಣಹವೆ ಇರಲಿದೆ.
ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವು ಕಡೆ ಸಾಧಾರಣ ಮಳೆಯಾಗಲಿದ್ದು, ಗುಡುಗು ಮಿಂಚು ಕೂಡ ಇರಲಿದೆ. ಉಳಿದಂತೆ ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ.
ಬೆಂಗಳೂರು ಹವಾಮಾನ ಇಂದು (ಮೇ 9), ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್
ಬೆಂಗಳೂರು ನಗರದಲ್ಲಿ ಇಂದು (ಮೇ 9) ಗರಿಷ್ಠ ತಾಪಮಾನವು 34 ಡಿಗ್ರಿ ಸೆಲ್ಶಿಯಸ್ ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ದಾಖಲಾಗಬಹುದು. ಮೋಡ ಕವಿದ ವಾತಾವರಣ ಮತ್ತು ಸಾಧಾರಣ ಮಳೆಯಾಗಲಿದೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುನ್ಸೂಚನಾ ವರದಿ ತಿಳಿಸಿದೆ.
ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ನಿನ್ನೆ (ಮೇ 8) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 33.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 22.4 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.
ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 34 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ನಿನ್ನೆ (ಮೇ 8) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗರಿಷ್ಠ ತಾಪಮಾನ 35.2 ಡಿಗ್ರಿ ಸೆಲ್ಶಿಯಸ್, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಶಿಯಸ್ ಇತ್ತು ಎಂದು ಬೆಂಗಳೂರು ಹವಾಮಾನ ಕೇಂದ್ರದ ವರದಿ ಹೇಳಿದೆ.
ಪ್ರಮುಖ ನಗರಗಳ ತಾಪಮಾನ
ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಮೇ 9 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.
ಬೆಂಗಳೂರು – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 85)
ಮಂಗಳೂರು – 29 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 79)
ಚಿತ್ರದುರ್ಗ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಗದಗ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 71)
ಹೊನ್ನಾವರ – 29.2 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 72)
ಕಲಬುರಗಿ – 25.1 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 67)
ಬೆಳಗಾವಿ – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)
ಕಾರವಾರ – 34.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 66 )
----------------------
ಕರ್ನಾಟಕದ ಮತ್ತಷ್ಟು ತಾಜಾ ಸುದ್ದಿ, ಕ್ರೈಮ್ ಸುದ್ದಿ, ಬೆಂಗಳೂರು ನಗರ ಸುದ್ದಿ, ರಾಜಕೀಯ ವಿಶ್ಲೇಷಣೆ ಓದಿ.
(This copy first appeared in Hindustan Times Kannada website. To read more like this please logon to kannada.hindustantimes.com)