Karnataka Rains; ಗಣೇಶ ಹಬ್ಬದ ದಿನ ಕರ್ನಾಟಕದ ಬಹುತೇಕ ಕಡೆ ಹಾಗೂ ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ- ಹವಾಮಾನ ಮುನ್ಸೂಚನೆ-weather today sept 07 karnataka rains all over the state widespread rain in coastal karnataka bengaluru weather uks ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains; ಗಣೇಶ ಹಬ್ಬದ ದಿನ ಕರ್ನಾಟಕದ ಬಹುತೇಕ ಕಡೆ ಹಾಗೂ ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ- ಹವಾಮಾನ ಮುನ್ಸೂಚನೆ

Karnataka Rains; ಗಣೇಶ ಹಬ್ಬದ ದಿನ ಕರ್ನಾಟಕದ ಬಹುತೇಕ ಕಡೆ ಹಾಗೂ ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆ- ಹವಾಮಾನ ಮುನ್ಸೂಚನೆ

Karnataka Weather September 7 2024; ಇಂದು ಗಣೇಶ ಹಬ್ಬ. ಕರ್ನಾಟಕದ ಉದ್ದಗಲಕ್ಕೂ ಗಣಪತಿ ಹಬ್ಬದ ಸಂಭ್ರಮ, ಸಡಗರದ ನಡುವೆ, ಬಹುತೇಕ ಕಡೆಗಳಲ್ಲಿ ಮಳೆಯಾಗಬಹುದು. ಕರಾವಳಿ ಕರ್ನಾಟಕದಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಹವಾಮಾನ ಮುನ್ಸೂಚನೆ ವರದಿಯಲ್ಲಿ ಎಚ್ಚರಿಸಿದೆ.

ಗಣೇಶ ಹಬ್ಬದ ದಿನ ಕರ್ನಾಟಕದ ಬಹುತೇಕ ಕಡೆ ಹಾಗೂ ಕರಾವಳಿಯಲ್ಲಿ ವ್ಯಾಪಕ ಮಳೆ ಬೀಳಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)
ಗಣೇಶ ಹಬ್ಬದ ದಿನ ಕರ್ನಾಟಕದ ಬಹುತೇಕ ಕಡೆ ಹಾಗೂ ಕರಾವಳಿಯಲ್ಲಿ ವ್ಯಾಪಕ ಮಳೆ ಬೀಳಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ತಿಳಿಸಿದೆ. (ಸಾಂಕೇತಿಕ ಚಿತ್ರ)

ಬೆಂಗಳೂರು: ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲೂ ಅಂದರೆ ಬಹುತೇಕ ಕಡೆಗಳಲ್ಲಿ ಇಂದು (ಸೆಪ್ಟೆಂಬರ್ 7) ಮಳೆ ಸುರಿಯಬಹುದು. ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಲ್ಲಿ ಈ ಪ್ರಮಾಣ ತುಸು ಹೆಚ್ಚು ಇರಲಿದೆ. ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತನ್ನ ಹವಾಮಾನ ಮುನ್ಸೂಚನೆ ವರದಿಯಲ್ಲಿ ತಿಳಿಸಿದೆ. ಇದರಂತೆ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಸೇರಿ 11 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಮುನ್ನೆಚ್ಚರಿಕೆ ನೀಡಿರುವ ಹವಮಾನ ಇಲಾಖೆ, ಬೆಂಗಳೂರು ಮತ್ತು ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗಬಹುದು ಎಂದು ಹೇಳಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಹವಾಮಾನ ಕೇಂದ್ರದ ಮಳೆ ಮುನ್ಸೂಚನೆ ವರದಿ ಪ್ರಕಾರ ಸೆಪ್ಟೆಂಬರ್‌ 8ರ ಬೆಳಗ್ಗೆ 8.30ರ ತನಕದ ಅವಧಿಯಲ್ಲಿ ಎಲ್ಲ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗಬಹುದು. ಈ ಪೈಕಿ ಕರ್ನಾಟಕದ ಉತ್ತರ ಒಳನಾಡಿನ 3 ಜಿಲ್ಲೆಗಳಲ್ಲಿ ಅಂದರೆ ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ತುಸು ಹೆಚ್ಚು ಮಳೆ ಸುರಿಯಬಹುದು. ಹೀಗಾಗಿ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದಂತೆ, ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಬೀದರ್, ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಬಹುದು.

ಇದೇ ರೀತಿ, ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳ ಹೆಚ್ಚಿನ ಪ್ರದೇಗಳಲ್ಲಿ ಮಳೆಯಾಗಲಿದೆ. ಈ ಜಿಲ್ಲೆಗಳ ಪೈಕಿ ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಬಹುದು. ಈ ಜಿಲ್ಲೆಗಳಿಗೆ ಅನ್ವಯವಾಗುವಂತೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋ‍ಷಿಸಿದೆ. ಇನ್ನುಳಿದಂತೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ವಿಜಯನಗರ, ಮೈಸೂರು, ಮಂಡ್ಯ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ ಜಿಲ್ಲೆಗಳ ಹೆಚ್ಚಿನ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ವರದಿ ಹೇಳಿದೆ.

ಇನ್ನೊಂದೆಡೆ, ಕರಾವಳಿಯ ಮೂರು ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಬಹುದು ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಯೆಲ್ಲೋ ಅಲರ್ಟ್‌ ಇರುವ ಜಿಲ್ಲೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ರಾಯಚೂರು, ಯಾದಗಿರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು

ಬೆಂಗಳೂರು ಹವಾಮಾನ ಇಂದು (ಸೆಪ್ಟೆಂಬರ್ 7); ನಗರ, ಗ್ರಾಮಾಂತರ ಜಿಲ್ಲೆಗಳಲ್ಲಿ ಭಾಗಶಃ ಮೋಡ, ಮಳೆ

ಬೆಂಗಳೂರು ನಗರದಲ್ಲಿ ಇಂದು (ಸೆಪ್ಟೆಂಬರ್‌) ಭಾಗಶಃ ಮೋಡ ಮತ್ತು ಹಲವೆಡೆ ಸಾಧಾರಣ ಮಳೆಯಾಗಬಹುದು. ಗರಿಷ್ಠ ತಾಪಮಾನವು 28 ಡಿಗ್ರಿ ಸೆಲ್ಶಿಯಸ್ ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಇರಬಹುದು ಎಂದು ಹವಾಮಾನ ಮುನ್ಸೂಚನಾ ವರದಿ ತಿಳಿಸಿದೆ.

ಬೆಂಗಳೂರು ನಗರ ಜಿಲ್ಲೆಯಲ್ಲಿ ಕೂಡ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಉಷ್ಣಾಂಶ ಇರಬಹುದು. ಇಂದು ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಭಾಗಶಃ ಮೋಡ ಕವಿದ ವಾತಾವರಣ ಇರಬಹುದು. ನಿನ್ನೆ (ಸೆಪ್ಟೆಂಬರ್ 6) ಬೆಂಗಳೂರು ನಗರ ಜಿಲ್ಲೆಯ ಗರಿಷ್ಠ ತಾಪಮಾನ 29.8 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ ಉಷ್ಣಾಂಶ 21.2 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು.

ಇದೇ ರೀತಿ ಬೆಂಗಳೂರು ಗ್ರಾಮಾಂತರದಲ್ಲಿ ಕೂಡ ಉಷ್ಣಾಂಶ ಗರಿಷ್ಠ 28 ಡಿಗ್ರಿ ಸೆಲ್ಶಿಯಸ್ ಮತ್ತು ಕನಿಷ್ಠ 20 ಡಿಗ್ರಿ ಸೆಲ್ಶಿಯಸ್ ಅಂದಾಜಿಸಲಾಗಿದೆ. ಜಿಲ್ಲೆಯ ಬಹುತೇಕ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ನಿನ್ನೆ (ಸೆಪ್ಟೆಂಬರ್ 6) ಗರಿಷ್ಠ ತಾಪಮಾನ 30.2 ಡಿಗ್ರಿ ಸೆಲ್ಸಿಯಸ್, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಶಿಯಸ್ ದಾಖಲಾಗಿತ್ತು. 1.8 ಮಿಮೀ ಮಳೆಯಾಗಿತ್ತು.

ಪ್ರಮುಖ ನಗರಗಳ ತಾಪಮಾನ

ಭಾರತೀಯ ಹವಾಮಾನ ಇಲಾಖೆಯ ದತ್ತಾಂಶ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಇಂದು (ಸೆಪ್ಟೆಂಬರ್ 7 ) ಬೆಳಗ್ಗೆ 6 ಗಂಟೆಗೆ ದಾಖಲಾಗಿರುವ ತಾಪಮಾನಗಳ ವಿವರ.

ಬೆಂಗಳೂರು – 22.8 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 78)

ಮಂಗಳೂರು – 25 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಚಿತ್ರದುರ್ಗ – 26.4 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 82)

ಗದಗ – 22.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 91)

ಹೊನ್ನಾವರ – 27 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89)

ಕಲಬುರಗಿ – 23.6 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 98)

ಬೆಳಗಾವಿ – 23 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 94)

ಕಾರವಾರ – 28 ಡಿಗ್ರಿ ಸೆಲ್ಶಿಯಸ್ (ತೇವಾಂಶ ಶೇ 89 )

----------------------

mysore-dasara_Entry_Point