ಕನ್ನಡ ಸುದ್ದಿ  /  Karnataka  /  Weather Update Heat Wave Alert North Interior Karnataka Health Minister Urges Public To Take Protective Measures Uks

Heat Wave Alert: ರಾಯಚೂರು, ಬಾಗಲಕೋಟೆ, ಕಲಬುರಗಿ ಸೇರಿ ಕರ್ನಾಟಕದ ಉತ್ತರ ಒಳನಾಡಲ್ಲಿ ಶಾಖ ತರಂಗ; ಏ.1ರ ತನಕ ಉಷ್ಣಾಂಶ ಹೆಚ್ಚಳ

ರಾಯಚೂರು, ಬಾಗಲಕೋಟೆ, ಕಲಬುರಗಿ ಸೇರಿ ಕರ್ನಾಟಕದ ಉತ್ತರ ಒಳನಾಡಲ್ಲಿ ಶಾಖ ತರಂಗದ ಮುನ್ನೆಚ್ಚರಿಕೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ನಾಳೆಯೂ ಬಿಸಿಗಾಳಿ ಬೀಸಲಿದ್ದು, ಏಪ್ರಿಲ್ 1ರ ತನಕ ಉಷ್ಣಾಂಶದಲ್ಲಿ ಬಹಳ ಏರಿಕೆ ದಾಖಲಾಗಲಿದೆ ಎಂದು ವರದಿ ಹೇಳಿದೆ. ಇನ್ನಷ್ಟು ಮಾಹಿತಿ ಈ ವರದಿಯಲ್ಲಿದೆ.

ರಾಯಚೂರು, ಬಾಗಲಕೋಟೆ, ಕಲಬುರಗಿ ಸೇರಿ ಕರ್ನಾಟಕದ ಉತ್ತರ ಒಳನಾಡಲ್ಲಿ ಶಾಖ ತರಂಗದ ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆಯ ನಕ್ಷೆ
ರಾಯಚೂರು, ಬಾಗಲಕೋಟೆ, ಕಲಬುರಗಿ ಸೇರಿ ಕರ್ನಾಟಕದ ಉತ್ತರ ಒಳನಾಡಲ್ಲಿ ಶಾಖ ತರಂಗದ ಮುನ್ನೆಚ್ಚರಿಕೆ ನೀಡಿರುವ ಹವಾಮಾನ ಇಲಾಖೆಯ ನಕ್ಷೆ

ಬೆಂಗಳೂರು: ಕಲ್ಯಾಣ ಕರ್ನಾಟಕ ಭಾಗದಲ್ಲಿ ತಾಪಮಾನವು 40 ಡಿಗ್ರಿ ಸೆಲ್ಶಿಯಸ್ ದಾಟಿದ್ದು, ನಾಳೆವರೆಗೆ ಬಿಸಿಗಾಳಿಯ ಎಚ್ಚರಿಕೆಯನ್ನು ಭಾರತದ ಹವಾಮಾನ ಇಲಾಖೆ ನೀಡಿದೆ. ಉತ್ತರ ಕರ್ನಾಟಕದಲ್ಲಿ ತಾಪಮಾನ ಕೂಡ ಏರಿಕೆಯಾಗಿದ್ದು ಶಾಖದ ಅಲೆಗಳು ಅಪ್ಪಳಿಸುವ ಮುನ್ಸೂಚನೆಯನ್ನು ಹವಾಮಾನ ವರದಿ ನೀಡಿದೆ. ಬೆಂಗಳೂರಿನಲ್ಲೂ ಉಷ್ಣಾಂಶ ಸಾಮಾನ್ಯಕ್ಕಿಂತ 3 ಡಿಗ್ರಿ ಸೆಲ್ಶಿಯಸ್ ಹೆಚ್ಚಳವಾಗಿದ್ದು, ಸಂಕಷ್ಟವನ್ನು ಇನ್ನಷ್ಟು ಹೆಚ್ಚಿಸಿದೆ.

CTA icon
ನಿಮ್ಮ ನಗರದ ಹವಾಮಾನ ತಿಳಿಯಲು ಇಲ್ಲಿ ಕ್ಲಿಕ್ ಮಾಡಿ

ಶಾಖದ ಅಲೆಯ ಎಚ್ಚರಿಕೆಯನ್ನು ನೀಡಿರುವ ಭಾರತದ ಹವಾಮಾನ ಇಲಾಖೆಯು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಗರಿಷ್ಠ ತಾಪಮಾನವು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಬಹುದು ಎಂದು ಹೇಳಿದೆ.

ಕರ್ನಾಟಕ, ಗುಜರಾತ್ ಮತ್ತು ರಾಜಸ್ಥಾನದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದು, 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಈ ಹಿನ್ನೆಲೆಯಲ್ಲಿ ಭಾರತ ಹವಾಮಾನ ಇಲಾಖೆ (ಐಎಂಡಿ) ಮುಂದಿನ ಎರಡು ದಿನಗಳ ಕಾಲ ಈ ರಾಜ್ಯಗಳಲ್ಲಿ ಬಿಸಿಗಾಳಿಯ ಬಗ್ಗೆ ಎಚ್ಚರಿಕೆ ನೀಡಿದೆ. ಕರ್ನಾಟಕದ ಉತ್ತರ ಒಳನಾಡಿನಲ್ಲಿ ಮಾರ್ಚ್ 27 ರಿಂದ 29 ರವರೆಗೆ, ಗುಜರಾತ್‌ನ ಸೌರಾಷ್ಟ್ರ ಮತ್ತು ಕಛ್‌ನಲ್ಲಿ ಮಾರ್ಚ್ 27 - 28ರಂದು ಬಿಸಿಗಾಳಿಯ ಪರಿಸ್ಥಿತಿಗಳು ಹೆಚ್ಚು ಇರುತ್ತವೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದ್ದಾಗಿ ಪಿಟಿಐ ವರದಿ ಮಾಡಿದೆ.

ರಾಯಚೂರು, ಬಾಗಲಕೋಟೆ, ಕಲಬುರಗಿ ಸೇರಿ ಕರ್ನಾಟಕದ ಉತ್ತರ ಒಳನಾಡಲ್ಲಿ ಶಾಖ ತರಂಗ

ಮುಂದಿನ ಐದು ದಿನಗಳಲ್ಲಿ ಕರ್ನಾಟಕದ ಉತ್ತರ ಮತ್ತು ದಕ್ಷಿಣ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗರಿಷ್ಠ ತಾಪಮಾನವು ಎರಡರಿಂದ ಮೂರು ಡಿಗ್ರಿ ಸೆಲ್ಸಿಯಸ್ ಹೆಚ್ಚಾಗುವ ಸಾಧ್ಯತೆಯಿದೆ. ಮಾರ್ಚ್ 29ರ ತನಕ ಬಿಸಿಗಾಳಿಯ ಬಗ್ಗೆ ಎಚ್ಚರಿಕೆ ವಹಿಸಬೇಕು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

ಪ್ರಸ್ತುತ, ಉತ್ತರ ಕೇರಳದ ಪಕ್ಕದಲ್ಲಿರುವ ಕರ್ನಾಟಕದ ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಗರಿಷ್ಠ ತಾಪಮಾನವು ಹವಾಮಾನ ಮೌಲ್ಯದ 95 ಶೇಕಡಾವನ್ನು ಮೀರಿದೆ. ಇವು ಮಾರ್ಚ್‌ 27 ರಂದು ಕರ್ನಾಟಕದ ಒಳನಾಡಿನ ವಿಸ್ತೃತ ಪ್ರದೇಶಗಳಲ್ಲಿ ಹವಾಮಾನ ಮೌಲ್ಯದ 95 ನೇ ಶೇಕಡಾವನ್ನು ಮೀರುವ ಸಾಧ್ಯತೆಯಿದೆ ಎಂದು ಮಂಗಳವಾರದ ವರದಿ ಹೇಳಿತ್ತು.

ರಾಯಚೂರು ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ತಾಪಮಾನ 40.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದರೆ, ರಾಜ್ಯದ ಶೇ 84ರಷ್ಟು ಭೌಗೋಳಿಕ ಪ್ರದೇಶದಲ್ಲಿ ಗರಿಷ್ಠ ತಾಪಮಾನ 36ರಿಂದ 42 ಡಿಗ್ರಿ ಸೆಲ್ಸಿಯಸ್‌ನಷ್ಟಿದೆ. "ಹಾವೇರಿ, ವಿಜಯಪುರ, ಕೊಪ್ಪಳ, ದಾವಣಗೆರೆ, ಕಲಬುರಗಿ, ಬಾಗಲಕೋಟೆ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಭಾಗಗಳಲ್ಲಿ 41 ರಿಂದ 43 ಡಿಗ್ರಿ ಸೆಲ್ಸಿಯಸ್ ವ್ಯಾಪ್ತಿಯಲ್ಲಿ ಗರಿಷ್ಠ ತಾಪಮಾನ ದಾಖಲಾಗಿದೆ. ಬೆಂಗಳೂರಿನ ಗರಿಷ್ಠ ತಾಪಮಾನವು ಶುಕ್ರವಾರದವರೆಗೆ 35 ರಿಂದ 36 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಮುನ್ಸೂಚನೆ ವರದಿ ಹೇಳಿದೆ.

ಬಿಸಿಗಾಳಿ ಸಮಸ್ಯೆ ನಿರ್ವಹಣೆಗೆ ಕರ್ನಾಟಕ ಆರೋಗ್ಯ ಸಚಿವರ ಸಲಹೆ

ಕರ್ನಾಟಕದಲ್ಲಿ ತಾಪಮಾನ ಹೆಚ್ಚಳದ ಸಮಸ್ಯೆಯಿಂದ ಸಾರ್ವಜನಿಕರು ತಮ್ಮನ್ನು ತಾವು ರಕ್ಷಿಸಿಕೊಳ್ಳಲು ಅಗತ್ತ ಕ್ರಮಗಳನ್ನು ತೆಗೆದುಕೊಳ್ಳುವಂತೆ ಕರ್ನಾಟಕ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಂಗಳವಾರ ಸಲಹೆ ನೀಡಿದರು.

ಎಲ್ಲಾ ಆಸ್ಪತ್ರೆಗಳಲ್ಲಿ ಔಷಧಿಗಳಿವೆ ಎಂದು ಖಚಿತಪಡಿಸಿಕೊಳ್ಳಲು ಆರೋಗ್ಯ ಇಲಾಖೆ ಆಯುಕ್ತರು ಜಿಲ್ಲಾ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಶಾಖ-ಸಂಬಂಧಿತ ವಿವಿಧ ಸಮಸ್ಯೆಗಳ ಸಂದರ್ಭದಲ್ಲಿ ಸೂಕ್ತ ಚಿಕಿತ್ಸೆಗಾಗಿ ಔ‍ಷಧಗಳು ಸುಲಭವಾಗಿ ಲಭ್ಯವಿದೆ ಎಂದು ಕರ್ನಾಟಕ ಆರೋಗ್ಯ ಸಚಿವರು ಹೇಳಿದರು.

ರಾಜ್ಯದಲ್ಲಿ ಬೇಸಿಗೆಯ ಬಿಸಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅತಿಯಾದ ಬಿಸಿಲ ತಾಳಲಾರದೆ ಜನ ಪರದಾಡುತ್ತಿದ್ದಾರೆ. ಕಳೆದ ಒಂದು ತಿಂಗಳಿನಿಂದ ಗರಿಷ್ಠ ತಾಪಮಾನವು ಸುಮಾರು 40 ಡಿಗ್ರಿಗಳಷ್ಟಿದೆ. ಬಿಸಿಲು, ಮೈಗ್ರೇನ್ ಮತ್ತು ಚರ್ಮದ ಸಮಸ್ಯೆಗಳಂತಹ ವಿವಿಧ ಶಾಖ-ಸಂಬಂಧಿತ ಸಮಸ್ಯೆಗಳಿಂದ ಆರೋಗ್ಯ ಸಮಸ್ಯೆ ಉಲ್ಬಣಕ್ಕೆ ಕಾರಣವಾಗುತ್ತದೆ. ಹೀಗಾಗಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ್ದಾರೆ.

IPL_Entry_Point