Karnataka Rains: ಮತ್ತೆ ಉತ್ತರ ಕರ್ನಾಟಕದ 6 ಜಿಲ್ಲೆಗಳಲ್ಲಿಂದು ಭಾರೀ ಮಳೆ; ಕಲಬುರಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ-weather update today heavy rain today in 6 districts of north karnataka how is the weather in bangalore imd report prs ,ಕರ್ನಾಟಕ ಸುದ್ದಿ
ಕನ್ನಡ ಸುದ್ದಿ  /  ಕರ್ನಾಟಕ  /  Karnataka Rains: ಮತ್ತೆ ಉತ್ತರ ಕರ್ನಾಟಕದ 6 ಜಿಲ್ಲೆಗಳಲ್ಲಿಂದು ಭಾರೀ ಮಳೆ; ಕಲಬುರಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Rains: ಮತ್ತೆ ಉತ್ತರ ಕರ್ನಾಟಕದ 6 ಜಿಲ್ಲೆಗಳಲ್ಲಿಂದು ಭಾರೀ ಮಳೆ; ಕಲಬುರಗಿಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

Karnataka Weather Update: ಉತ್ತರ ಕರ್ನಾಟಕದ 6 ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದರೆ, ಕರಾವಳಿ ಭಾಗದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಉತ್ತರ ಕರ್ನಾಟಕದ 6 ಜಿಲ್ಲೆಗಳಲ್ಲಿಂದು ಭಾರೀ ಮಳೆ
ಉತ್ತರ ಕರ್ನಾಟಕದ 6 ಜಿಲ್ಲೆಗಳಲ್ಲಿಂದು ಭಾರೀ ಮಳೆ

ಬೆಂಗಳೂರು: ಕಳೆದ ಮೂರ್ನಾಲ್ಕು ಜಿಲ್ಲೆಗಳಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದ್ದು, ಇಂದು (ಸೆಪ್ಟೆಂಬರ್​ 2 ರಂದು) ಕೂಡ ಅಂತಹದ್ದೇ ಮಳೆಯಾಗುವ ನಿರೀಕ್ಷೆ ಇದೆ. ಉತ್ತರದ ಭಾಗಗಳ 6 ಜಿಲ್ಲೆಗಳು ಹಾಗೂ ಕರಾವಳಿ ಭಾಗದ ಎರಡು ಮೂರು ಜಿಲ್ಲೆಗಳಲ್ಲಿ ನಿರಂತರ ಗಾಳಿಯ ಜೊತೆಗೆ ಸಾಧಾರಣ ಮಳೆ ಬರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೆಲವೆಡೆ ಯೆಲ್ಲೋ ಅಲರ್ಟ್, ಕರಾವಳಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. 

ಕಲಬುರಗಿಯಲ್ಲಿ ಭಾರೀ ಮಳೆಯಾಗುವ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಕರ್ನಾಟಕದ ಉತ್ತರ ಭಾಗದ ಕಲಬುರಗಿ, ಬೀದರ್​, ವಿಜಯಪುರ, ಬಾಗಲಕೋಟೆ, ಯಾದಗಿರಿ ಮತ್ತು ಬೆಳಗಾವಿಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ. ಇದಲ್ಲದೆ, ಉತ್ತರ ಕನ್ನಡ, ಉಡುಪಿ ಜಿಲ್ಲೆ, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯ ಜೊತೆಗೆ ನಿರಂತರ ಗಾಳಿಯೂ ಇರಲಿದೆ. ಆದರೆ ಇದು ಕೆಲವು ಸ್ಥಳಗಳಲ್ಲಿ ಮಾತ್ರ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಕರ್ನಾಟಕದಲ್ಲಿ ಹಲವೆಡೆ ಧಾರಾಕರ ಮಳೆ ಸುರಿಯುತ್ತಿರುವ ಕಾರಣ ಬೆಳೆಗಳು ನಾಶವಾಗುತ್ತಿವೆ. ಇಲ್ಲಿ ಅತಿ ಹೆಚ್ಚು ಮಳೆ ಸುರಿಯುವ ಕಾರಣ ಕಾಂಡ ಕೊಳೆರೋಗ, ಬೇರು ಕಳೆ ರೋಗ ಸೇರಿದಂತೆ ಹಲವು ರೋಗಳು ಕಾಣಿಸಿಕೊಳ್ಳುತ್ತಿವೆ, ಆದರೆ ಕೈಗೆ ಬಂದ ತುತ್ತು ಬಾಯಿಗರ ಬರುತ್ತಿಲ್ಲ ಎಂದು ಅಳಲು ತೋಡಿಕೊಳ್ಳುತ್ತಿದ್ದಾರೆ. ಕರ್ನಾಟಕದ ಬಹುತೇಕ ಕಡೆ ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ.

ಸೆಪ್ಟೆಂಬರ್​ 7ರ ತನಕವೂ ಮಳೆ

ಪ್ರಸ್ತುತ ಮಳೆಯು ಸೆಪ್ಟೆಂಬರ್​ 7ರ ತನಕವೂ ಮಳೆ ಬೀಳುವ ಸಾಧ್ಯತೆ ಇದೆ. ಕರಾವಳಿ ಭಾಗದಲ್ಲೇ ಹೆಚ್ಚಿನ ಮಳೆ ಸುರಿಯಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯ ಜೊತೆಗೆ ಧಾರಾಕಾರ ಮಳೆಯನ್ನೂ ನಿರೀಕ್ಷಿಸಲಾಗಿದೆ. ಕರಾವಳಿಯ ಜೊತೆಗೆ ಕರ್ನಾಟಕದ ಹಲವು ಭಾಗಗಳಲ್ಲಿ ಬಿರುಸಿನ ಮಳೆಯ ಜೊತೆಗೆ ಗಾಳಿಯ ವೇಗವೂ ಹೆಚ್ಚಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆ

ಬೆಂಗಳೂರು ಮತ್ತು ಸುತ್ತಮುತ್ತಲಿನ ಜಿಲ್ಲೆಗಳಲ್ಲೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ಅಲ್ಲದೆ, ಲಘು ಮಳೆಯಾಗುವ ಸಾಧ್ಯತೆಯೂ ಹೆಚ್ಚಿದೆ. ಗರಿಷ್ಠ ಮತ್ತು ಕನಿಷ್ಠ ತಾಮಮಾನವು ಕ್ರಮವಾಗಿ 29 ° C ಮತ್ತು 21 ° C ಆಗಿರಬಹುದು. ಮುಂದಿನ 48 ಗಂಟೆಗಳಲ್ಲಿ ಇದೇ ವಾತಾವರಣ ಮತ್ತು ತಾಪಮಾನ ಇರಲಿದೆ. ಇಂದು ಬೆಳಿಗ್ಗೆಗೆ ಬೆಂಗಳೂರಿನಲ್ಲಿ ಬಿಸಿಲು ಕಾಣಿಸಿಕೊಂಡಿದೆ.

ಮೀನುಗಾರರಿಗೆ ಎಚ್ಚರಿಕೆ

ಕರಾವಳಿ ಭಾಗದ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಗಾಳಿಯ ವೇಗ ಗಂಟೆಗೆ 35 ಕಿಮೀನಿಂದ 45 ಕಿಮೀ ವೇಗದಲ್ಲಿ 55 ಕಿಮೀ ವರೆಗೆ ಬೀಸುವ ಗಾಳಿಯು ಕರ್ನಾಟಕದ ಉದ್ದಕ್ಕೂ ಮತ್ತು ಹೊರಗೆ ಚಾಲ್ತಿಯಲ್ಲಿರಲಿದೆ.

ಅತ್ಯಧಿಕ ಮಳೆ ಸುರಿದ ಪ್ರದೇಶಗಳು

ಸೆಪ್ಟೆಂಬರ್​​ 1ರ ಭಾನುವಾರದಂದು ಕಲಬುರಗಿಯ ಸೇಡಂನಲ್ಲಿ ಅತಿ ಹೆಚ್ಚು ಅಂದರೆ 9 ಸೆಂ.ಮೀಗಳಲ್ಲಿ ಮಳೆಯಾಗಿದೆ. ಕಲಬುರಗಿಯ ವೀಕ್ಷಣಾಲಯ, ಕಮಲಾಪುರದಲ್ಲಿ 8 ಸೆಂ.ಮೀ, ಚಿತ್ತಾಪುರ, ಪಣಂಬೂರು ವೀಕ್ಷಣಾಲಯದಲ್ಲಿ ತಲಾ 7 ಸೆಂ.ಮೀ ಮಳೆ ಸುರಿದಿದೆ. ಕಲಬುರಗಿಯ ಚಿಂಚೋಳಿ, ಜೇವರ್ಗಿ, ನೆಲೋಗಿ, ಯೆಡ್ರಾಮಿ, ಖಜೂರಿ, ಬೀದರ್​​ನ ಔರಾದ್, ಚಿಟಗುಪ್ಪ, ಭಾಲ್ಕಿ, ಮಂಠಾಳ, ಹುಮನಾಬಾದ್, ಉತ್ತರ ಕನ್ನಡ ಜಿಲ್ಲೆಯ ಗೇರುಸೊಪ್ಪ, ಶಿರಾಲಿ, ಕದ್ರಾ, ಮಂಕಿ, ಕ್ಯಾಸಲ್ ರಾಕ್, ಗೋಕರ್ಣ, ಯಾದಗಿರಿಯ ಸೈದಾಪುರ, ಶಹಾಪುರ.

ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಿತ್ರದುರ್ಗ, ರಾಯಚೂರು, ತುಮಕೂರು, ಬಾಗಲಕೋಟೆ, ಉಡುಪಿ, ಕೊಡಗು, ಶಿವಮೊಗ್ಗ ಸೇರಿದಂತೆ ಪ್ರಮುಖ ಭಾಗಗಳಲ್ಲಿ ಉತ್ತಮ ಮಳೆಯಾಗಿದೆ.