ಕನ್ನಡ ಸುದ್ದಿ  /  Karnataka  /  Will Establish 10 Language Labs At Malleshwaram Says Minister Ashwath Narayan

Language Labs: ಮಲ್ಲೇಶ್ವರಂನಲ್ಲಿ 10 ಭಾಷಾ ಪ್ರಯೋಗಾಲಯಗಳ ಸ್ಥಾಪನೆ: ಸಚಿವ ಅಶ್ವತ್ಥ ನಾರಾಯಣ

ಯುವಜನರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲಾಂಗ್ವೇಜ್ ಲ್ಯಾಬ್​ ಗಳನ್ನು (ಭಾಷಾ ಪ್ರಯೋಗಾಲಯ) ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಮತ್ತು ಸ್ಥಳೀಯ ಶಾಸಕ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಮಲ್ಲೇಶ್ವರಂನಲ್ಲಿ ಉದ್ಯೋಗ ಮೇಳ
ಮಲ್ಲೇಶ್ವರಂನಲ್ಲಿ ಉದ್ಯೋಗ ಮೇಳ

ಬೆಂಗಳೂರು: ಯುವಜನರನ್ನು ಉದ್ಯೋಗಕ್ಕೆ ಅರ್ಹರನ್ನಾಗಿ ಮಾಡುವ ನಿಟ್ಟಿನಲ್ಲಿ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಇನ್ನೂ 10 ಲಾಂಗ್ವೇಜ್ ಲ್ಯಾಬ್​ ಗಳನ್ನು (ಭಾಷಾ ಪ್ರಯೋಗಾಲಯ) ಸ್ಥಾಪಿಸಲಾಗುವುದು ಎಂದು ಕೌಶಲ್ಯಾಭಿವೃದ್ಧಿ ಸಚಿವ ಮತ್ತು ಸ್ಥಳೀಯ ಶಾಸಕ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಕೌಶಲ್ಯಾಭಿವೃದ್ಧಿ ಇಲಾಖೆಯ ವತಿಯಿಂದ ಮಲ್ಲೇಶ್ವರಂ 18ನೇ ಅಡ್ಡರಸ್ತೆಯಲ್ಲಿ ಇರುವ ಸರಕಾರಿ ಪದವಿಪೂರ್ವ ಮತ್ತು ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಏರ್ಪಡಿಸಿದ್ದ ಉದ್ಯೋಗ ಮೇಳವನ್ನು ಅವರು ಶನಿವಾರ ಉದ್ಘಾಟಿಸಿ ಮಾತನಾಡಿದರು.

ಕರ್ನಾಟಕದಲ್ಲಿ ಉದ್ಯೋಗ ಅವಕಾಶಗಳಿಗೆ ಕೊರತೆ ಇಲ್ಲ. ಮುಖ್ಯಮಂತ್ರಿಗಳ ಮತ್ತು ಪ್ರಧಾನ ಮಂತ್ರಿಗಳ ಕೌಶಲ್ಯ ವಿಕಾಸ ಯೋಜನೆಯಡಿ 18 ರಿಂದ 35 ವರ್ಷಗಳ ಒಳಗಿನ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿ ಕೊಟ್ಟು, ಉದ್ಯೋಗಗಳಿಗೆ ಸಜ್ಜುಗೊಳಿಸಲಾಗುತ್ತಿದೆ. ಸ್ಕಿಲ್ ಪೋರ್ಟಲ್ ವೇದಿಕೆಯಲ್ಲಿ ಈಗಾಗಲೇ 250 ಕಂಪನಿಗಳು ನೋಂದಣಿ ಆಗಿವೆ. ಹಾಗೆಯೇ ಸ್ಕಿಲ್ ಕನೆಕ್ಟ್ ಉಪಕ್ರಮದಡಿ 25 ಸಾವಿರ ಉದ್ಯೋಗ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದರು.

ಬೆಂಗಳೂರು ಇಂದು ದೇಶದ ಜ್ಞಾನ, ಆರ್ಥಿಕ, ಸ್ಟಾರ್ಟಪ್ ಮತ್ತು ಅಗ್ರಿಟೆಕ್ ರಾಜಧಾನಿಯಾಗಿ ಹೊರಹೊಮ್ಮಿದೆ. ಜಾಗತಿಕ ಮಟ್ಟದಲ್ಲಿ ಗಮನ ಸೆಳೆಯುತ್ತಿರುವ ಬೆಂಗಳೂರಿನಲ್ಲಿ ಯುವಜನರ ಉಜ್ವಲ ಭವಿಷ್ಯ ಅಡಗಿದೆ. ಹೀಗಾಗಿ ಈಗ ಲಕ್ಷಗಟ್ಟಲೆ ಜನರಿಗೆ ಕೌಶಲ್ಯಗಳನ್ನು ಕಲಿಸಲಾಗುತ್ತಿದೆ. ಇವೆಲ್ಲದರ ಪರಿಣಾಮವಾಗಿ ರಾಜ್ಯದಲ್ಲಿ ನಿರುದ್ಯೋಗ ಪ್ರಮಾಣ ಇಡೀ ದೇಶದಲ್ಲಿ ಕಡಿಮೆ ಪ್ರಮಾಣದಲ್ಲಿದೆ ಎಂದು ಅವರು ವಿವರಿಸಿದರು.

ಕ್ಯಾಂಪಸ್ ಸಂದರ್ಶನದಲ್ಲಿ ಆಯ್ಕೆಯಾಗಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಕೂಡ ಸರಕಾರವು ವಿಶೇಷ ತರಬೇತಿಗೆ ವ್ಯವಸ್ಥೆ ಮಾಡಿದೆ. ಸರ್ವರಿಗೂ ಉದ್ಯೋಗ ಎನ್ನುವುದೇ ಸರಕಾರದ ನೀತಿಯಾಗಿದೆ ಎಂದು ಅವರು ಪ್ರತಿಪಾದಿಸಿದರು.

ಇಂದಿನ ಉದ್ಯೋಗ ಮೇಳದಲ್ಲಿ 125 ಕಂಪನಿಗಳು ಪಾಲ್ಗೊಂಡಿದ್ದು, 28 ಸಾವಿರ ಉದ್ಯೋಗ ಅವಕಾಶಗಳು ಲಭ್ಯವಿವೆ. ಎಸ್ಸೆಸ್ಸೆಲ್ಸಿಯಿಂದ ಹಿಡಿದು ಎಂಜಿನಿಯರಿಂಗ್ ಪದವೀಧರರವರೆಗೆ ಇಲ್ಲಿ ಅವಕಾಶ ಒದಗಿಸಲಾಗಿದೆ ಎಂದು ಅವರು ತಿಳಿಸಿದರು.

ಅಕ್ಷರ ಯೋಗ: ಪಡುಕೋಣೆ ಗ್ರಾಮದಲ್ಲಿ ಮೂರು ಆಸನಗಳ ಗಿನ್ನಿಸ್ ದಾಖಲೆ ಪ್ರದರ್ಶನ

ನೂತನ ರಾಷ್ಟ್ರೀಯ ಶಿಕ್ಷಣ ನೀತಿಯಡಿಯಲ್ಲಿ ಯೋಗವನ್ನು ಪಠ್ಯದ ಭಾಗವನ್ನಾಗಿ ಮಾಡಲಾಗಿದೆ. ಇದರಿಂದ ಜನಜಾಗೃತಿ ಮೂಡಿಸುವುದೂ ಸಾಧ್ಯವಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಅಕ್ಷರ ಯೋಗ ಸಂಶೋಧನಾ ಮತ್ತು ಅಭಿವೃದ್ಧಿ ಕೇಂದ್ರವು ಯಲಹಂಕ ಸಮೀಪದ ಪಡುಕೋಣೆ ಕ್ರೀಡಾ ಗ್ರಾಮದಲ್ಲಿ ಶನಿವಾರ ಏರ್ಪಡಿಸಿದ್ದ ಹಲಾಸನ, ಉಷ್ಟ್ರಾಸನ ಮತ್ತು ವಸಿಷ್ಟಾಸನ ಪ್ರದರ್ಶನದ ಗಿನ್ನಿಸ್ ದಾಖಲೆ ಕಾರ್ಯಕ್ರಮ ಮಂಡಲ ಯೋಗ ಉತ್ಸವದಲ್ಲಿ ಅವರು ಮಾತನಾಡಿದರು.

ಯೋಗವು ಭಾರತೀಯ ಸಂಸ್ಕೃತಿಯ ಅವಿಭಾಜ್ಯ ಅಂಗವಾಗಿದೆ. ಇಂದಿನ ಕಾರ್ಯಕ್ರಮದಲ್ಲಿ ಪೊಲೀಸ್ ಇಲಾಖೆಯ ಹೆಚ್ಚಿನ ಸಿಬ್ಬಂದಿ ಪಾಲ್ಗೊಂಡಿರುವುದು ಶ್ಲಾಘನೀಯ ಸಂಗತಿ ಆಗಿದೆ ಎಂದು ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಕರ್ನಾಟಕವು ಮೊದಲಿನಿಂದಲೂ ಯೋಗಕ್ಕೆ ಪ್ರಾಮುಖ್ಯತೆ ಕೊಡುತ್ತ ಬಂದಿದೆ. ಈ ಕಾರ್ಯಕ್ರಮದಲ್ಲಿ 20 ದೇಶಗಳ ಒಂದು ಸಾವಿರಕ್ಕೂ ಹೆಚ್ಚು ಪ್ರತಿನಿಧಿಗಳು ಪಾಲ್ಗೊಂಡಿರುವುದು ಗಮನಾರ್ಹವಾಗಿದೆ ಎಂದರು.

ಸಾಮೂಹಿಕವಾಗಿ ಮಾಡುವ ಯೋಗವು ಆರೋಗ್ಯ, ಅನ್ಯೋನ್ಯತೆ ಮತ್ತು ಪರಂಪರೆಯ ಅರಿವನ್ನು ಮೂಡಿಸುತ್ತವೆ. ಪ್ರಧಾನಿ ನರೇಂದ್ರ ಮೋದಿಯವರ ಪ್ರಯತ್ನಗಳಿಂದಾಗಿ ಯೋಗವು ಇಂದು ತನ್ನ ಗತವೈಭವವನ್ನು ಪಡೆದುಕೊಂಡಿದೆ ಎಂದು ಅವರು ಬಣ್ಣಿಸಿದರು.

IPL_Entry_Point

ವಿಭಾಗ