ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ
ಕನ್ನಡ ಸುದ್ದಿ  /  ಕರ್ನಾಟಕ  /  ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣ; ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣಕ್ಕೀಡಾದರು. ಎರಡು ಅಪಘಾತಗಳಲ್ಲಿ ಮೃತಪಟ್ಟವರ ಆತ್ಮಕ್ಕೆ ಚಿರಶಾಂತಿ ಕೋರಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಸಂತಾಪ ಸೂಚಿಸಿದರು.

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣಕ್ಕೀಡಾದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.
ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣಕ್ಕೀಡಾದರು. ಮೃತರ ಕುಟುಂಬಕ್ಕೆ ಸಾಂತ್ವನ ಹೇಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು.

ಬೆಂಗಳೂರು: ಯಲ್ಲಾಪುರ ಮತ್ತು ಸಿಂಧನೂರು ಅಪಘಾತಗಳ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಕಟ ವ್ಯಕ್ತಪಡಿಸಿದ್ದು, ಮೃತರ ಆತ್ಮಕ್ಕೆ ಶಾಂತಿ ಕೋರಿದರು. ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸರ್ಕಾರದ ಕಡೆಯಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ. ಈ ಕುರಿತು ಮುಖ್ಯಮಂತ್ರಿಯವರ ಕಚೇರಿ ಟ್ವೀಟ್ ಮಾಡಿದ್ದು, ಈ ವಿಚಾರ ಸ್ಪಷ್ಟಪಡಿಸಿದೆ. ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕು ಗುಳ್ಳಾಪುರ ಸಮೀಪ ತರಕಾರಿ ಲಾರಿ ಕಂದಕಕ್ಕೆ ಉರುಳಿ ದುರಂತ ಸಂಭವಿಸಿದ್ದು, ಸಾವಿನ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಕ್ರೂಸರ್ ವ್ಯಾನ್ ಪಲ್ಟಿಯಾಗಿ ಚಾಲಕ ಮತ್ತು ಮಂತ್ರಾಲಯ ಸಂಸ್ಕೃತ ಪಾಠ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಎರಡೂ ಅಪಘಾತಗಳಲ್ಲಿ ಒಟ್ಟು 14 ಜನ ದುರ್ಮರಣಕ್ಕೀಡಾದರು.

ಯಲ್ಲಾಪುರ, ಸಿಂಧನೂರು ಅಪಘಾತಗಳಲ್ಲಿ 14 ಜನರ ದುರ್ಮರಣ; ಸಿಎಂ ಸಿದ್ದರಾಮಯ್ಯ ಸಂತಾಪ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ಹಾಗೂ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಸಂಭವಿಸಿದ ಎರಡು ಪ್ರತ್ಯೇಕ ಅಪಘಾತಗಳಲ್ಲಿ ಒಟ್ಟು 14 ಜನ ಸಾವನ್ನಪ್ಪಿರುವ ಸುದ್ದಿ ತಿಳಿದು ಸಂಕಟವಾಯಿತು. ಮೃತರ ಆತ್ಮಗಳಿಗೆ ಚಿರಶಾಂತಿ ಕೋರುತ್ತೇನೆ. ಈ ದುರ್ಘಟನೆಗಳಲ್ಲಿ ತಮ್ಮವರನ್ನು ಕಳೆದುಕೊಂಡು ದುಃಖದಲ್ಲಿರುವ ನೊಂದ ಜನರಿಗೆ ನನ್ನ ಸಂತಾಪಗಳು. ಮೃತರ ಕುಟುಂಬಗಳಿಗೆ ಸರ್ಕಾರದಿಂದ ಸೂಕ್ತ ಪರಿಹಾರ ನೀಡಲಾಗುವುದು ಎಂದು ಮುಖ್ಯಸಿದ್ದರಾಮಯ್ಯ ಅವರು ತಿಳಿಸಿರುವುದಾಗಿ ಮುಖ್ಯಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಂತಾಪ

ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರದ ಅರಬೈಲ್ ಬಳಿ ನಡೆದ ಲಾರಿ ಅಪಘಾತದಲ್ಲಿ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಹತ್ತು ಜನರು ದುರಂತ ಸಾವಿಗೀಡಾದ ಸುದ್ದಿ ಮನಸ್ಸಿಗೆ ನೋವುಂಟು ಮಾಡಿದೆ. ಈ ಘಟನೆಯಲ್ಲಿ ಇನ್ನೂ ಕೆಲವರು ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ರಾಜ್ಯ ಸರ್ಕಾರವು ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡಬೇಕು, ಹಾಗೂ ಗಾಯಗೊಂಡವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ಆಗ್ರಹಿಸುತ್ತೇನೆ. ಮೃತರ ಆತ್ಮಕ್ಕೆ ಚಿರಶಾಂತಿ ಕೋರುತ್ತೇನೆ. ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಸ್ಥರಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಯಲ್ಲಾಪುರ ಸಮೀಪದ ಗುಳ್ಳಾಪುರದಲ್ಲಿ ಲಾರಿ ದುರಂತ; 10 ಸಾವು

ಕುಮಟಾ ಸಂತೆಗೆ ವ್ಯಾಪಾರಕ್ಕೆ ಹೋಗುತ್ತಿದ್ದ ವೇಳೆ ಲಾರಿ ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿ ಅಪಘಾತ ಸಂಭವಿಸಿದೆ. ಈ ಲಾರಿಯಲ್ಲಿ ಸವಣೂರು ತಾಲೂಕಿನ 28 ವ್ಯಾಪಾರಿಗಳು ಲಾರಿಯಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ. ಅಪಘಾತವಾಗಿ ಬಹಳ ಹೊತ್ತಿನ ಬಳಿಕ ರಕ್ಷಣಾ ಕಾರ್ಯಾಚರಣೆ ನಡೆದಿದ್ದು, 8 ಜನ ಸ್ಥಳದಲ್ಲೇ ಮೃತಪಟ್ಟಿದ್ದರು. ಇನ್ನಿಬ್ಬರು ನಂತರ ಮೃತಪಟ್ಟರು ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕಾಗಮಿಸಿರುವ ಪೊಲೀಸರು, ಸ್ಥಳ ಪರಿಶೀಲನೆ ನಡೆಸಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಈ ಸಂಬಂಧ ಯಲ್ಲಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಂಧನೂರು ಅಪಘಾತದಲ್ಲಿ ನಾಲ್ವರ ದುರ್ಮರಣ

ರಾಯಚೂರು ಜಿಲ್ಲೆ ಸಿಂಧನೂರು ಸಮೀಪ ಅರಗಿನಮರ ಕ್ಯಾಂಪ್ ಬಳಿ ಮಂಗಳವಾರ (ಜನವರಿ 21) ತಡರಾತ್ರಿ ಕ್ರೂಸರ್ ವ್ಯಾನ್‌ ಪಲ್ಪಿಯಾಗಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕ್ರೂಸರ್‌ ವ್ಯಾನ್‌ನಲ್ಲಿ ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳು ಪ್ರಯಾಣಿಸುತ್ತಿದ್ದರು. ಅವರು ಕೊಪ್ಪಳದ ಆನೆಗುಂದಿಯ ನರಹರಿ ತೀರ್ಥರ ವೃಂದಾವನದಲ್ಲಿ ನಡೆಯಲಿದ್ದ ಆರಾಧಾನ ಮಹೋತ್ಸವದಲ್ಲಿ ಭಾಗವಹಿಸುವುದಕ್ಕೆ ಹೋಗುತ್ತಿದ್ದರು. ಈ ದುರಂತದಲ್ಲಿ ಚಾಲಕ ಮತ್ತು ಮೂವರು ವಿದ್ಯಾರ್ಥಿಗಳು ದುರ್ಮರಣಕ್ಕೀಡಾದರು. ಮೃತರನ್ನು ಕ್ರೂಸರ್ ಚಾಲಕ ಕಂಸಾಲಿ ಶಿವ (24), ಮಂತ್ರಾಲಯದ ಸಂಸ್ಕೃತ ಪಾಠ ಶಾಲೆಯ ವಿದ್ಯಾರ್ಥಿಗಳಾದ ಹಯವದನ (18), ಸುಜಯೇಂದ್ರ (22) ಹಾಗೂ ಅಭಿಲಾಷ್​(20) ಎಂದು ಗುರುತಿಸಲಾಗಿದೆ. ಕ್ರೂಸರ್‌ನಲ್ಲಿ ಪ್ರಯಾಣಿಸುತ್ತಿದ್ದ 10 ಯಾತ್ರಿಕರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಸಿಂಧನೂರು ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿಂಧನೂರು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Whats_app_banner