ಯಲ್ಲಾಪುರದ ಗುಳ್ಳಾಪುರದಲ್ಲಿ ತರಕಾರಿ ಟ್ರಕ್ ಪಲ್ಟಿಯಾಗಿ ಭೀಕರ ದುರಂತ, ರಸ್ತೆ ಅಪಘಾತದಲ್ಲಿ 9 ಸಾವು, ಹಲವರಿಗೆ ಗಾಯ
Yellapur Accident: ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕು ಗುಳ್ಳಾಪುರದಲ್ಲಿ ತರಕಾರಿ ಟ್ರಕ್ ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ಯಲ್ಲಾಪುರ ಅಪಘಾತದಲ್ಲಿ 9 ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ.

Yellapur Accident: ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕು ಗುಳ್ಳಾಪುರದಲ್ಲಿ ಇಂದು (ಜನವರಿ 22) ಮುಂಜಾನೆ ತರಕಾರಿ ಟ್ರಕ್ ಪಲ್ಟಿಯಾಗಿ ಭೀಕರ ದುರಂತ ಸಂಭವಿಸಿದೆ. ವೇಗವಾಗಿ ಬರುವಾಗ ಗಾಡಿ ಪಲ್ಟಿಯಾಗಿ ಈ ದುರ್ಘಟನೆ ನಡೆದಿದೆ. ಈ ರಸ್ತೆ ಅಪಘಾತದಲ್ಲಿ 9 ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ. ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತರಕಾರಿ ಸಾಗಿಸುತ್ತಿದ್ದ ಟ್ರಕ್‌ನಲ್ಲಿ 25ಕ್ಕೂ ಹೆಚ್ಚು ಜನರು ಪ್ರಯಾಣಿಸುತ್ತಿದ್ದರು. ಮೃತರು ಹಾವೇರಿ ಮೂಲದವರು ಎಂದು ಹೇಳಲಾಗುತ್ತಿದೆ. ಸವಣೂರಿನಿಂದ ಕುಮಟಾ ಕಡೆಗೆ ತೆರಳುತ್ತಿದ್ದರು. ಘಟನೆ ಸ್ಥಳಕ್ಕೆ ಯಲ್ಲಾಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಯಲ್ಲಾಪುರ ತಾಲೂಕು ಗುಳ್ಳಾಪುರದಲ್ಲಿ ಲಾರಿ ಪಲ್ಟಿಯಾಗಿ ದುರಂತ
ಹಾವೇರಿಯ ಸವಣೂರಿನಿಂದ ಕುಮಟಾ ಕಡೆಗೆ ತರಕಾರಿ, ಹಣ್ಣುಹಂಪಲುಗಳನ್ನು ಸಾಗಿಸುತ್ತಿದ್ದ ಲಾರಿಯಲ್ಲಿ 25ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು ಎಂದು ಪ್ರಾಥಮಿಕ ಮಾಹಿತಿ ಬಂದಿತ್ತು. ಮುಂಜಾನೆ ದಟ್ಟ ಮಂಜು ಆವರಿಸಿದ ರಸ್ತೆಯಲ್ಲಿ ಲಾರಿ ಸಂಚರಿಸುತ್ತಿರುವಾಗ ಅಪಘಾತ ಸಂಭವಿಸಿದೆ. ರಾಷ್ಟ್ರೀಯ ಹೆದ್ದಾರಿ 63ರ ಗುಳ್ಳಾಪುರ ಘಟ್ಟ ಭಾಗದಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದೆ. ಭೀಕರ ರಸ್ತೆ ದುರಂತದಲ್ಲಿ ಕನಿಷ್ಠ 9 ಜನ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 15ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯಗಳಾಗಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತ ನಡೆದ ಕೆಲವೇ ಹೊತ್ತಿನಲ್ಲಿ ರಕ್ಷಣಾ ಕಾರ್ಯಾಚರಣೆ ನಡೆದಿದೆ.
ಗ್ರಾಮಾಂತರ ಭಾಗದಲ್ಲಿದೆ ಅಪಘಾತ ನಡೆದ ಸ್ಥಳ
ಅಪಘಾತ ಸ್ಥಳ ಗ್ರಾಮಾಂತರ ಭಾಗದಲ್ಲಿದ್ದು, ಮೊಬೈಲ್ ಸಂಪರ್ಕ ಕ್ಷೀಣವಾಗಿದೆ. ಆದಾಗ್ಯೂ, ಸ್ಥಳೀಯರ ನೆರವಿನೊಂದಿಗೆ ರಕ್ಷಣಾ ಕಾರ್ಯಾಚರಣೆ ನಡೆಸಿದ ಪೊಲೀಸರು ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಮುಂದುವರಿದಿದೆ. 10ಕ್ಕೂ ಹೆಚ್ಚು ಜನರು ಗಂಭೀರ ಗಾಯಗೊಂಡಿದ್ದಾರೆ. ಮೃತರ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮೃತಪಟ್ಟವರ ಗುರುತುಪತ್ತೆಯಾಗಿಲ್ಲ. ಪೊಲೀಸರು ಕೇಸ್ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
