ಮೈಸೂರಿನಲ್ಲಿ ಮನೆಯ ಮಹಡಿಯಿಂದ ಬಿದ್ದು ಯುವತಿ ಸಾವು: ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಕನ್ನಡ ಸುದ್ದಿ  /  ಕರ್ನಾಟಕ  /  ಮೈಸೂರಿನಲ್ಲಿ ಮನೆಯ ಮಹಡಿಯಿಂದ ಬಿದ್ದು ಯುವತಿ ಸಾವು: ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮೈಸೂರಿನಲ್ಲಿ ಮನೆಯ ಮಹಡಿಯಿಂದ ಬಿದ್ದು ಯುವತಿ ಸಾವು: ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ಓದುತ್ತಿದ್ದ ಯುವತಿ ಮನೆಯ ಮಹಡಿಯಿಂದ ಬಿದ್ದು ಮೃತಪಟ್ಟಿದ್ದಾರೆ.

ಮೈಸೂರಿನಲ್ಲಿ ಮನೆಯ ಮಹಡಿಯಿಂದ ಬಿದ್ದು ಯುವತಿ ಸಾವು
ಮೈಸೂರಿನಲ್ಲಿ ಮನೆಯ ಮಹಡಿಯಿಂದ ಬಿದ್ದು ಯುವತಿ ಸಾವು (canva)

ಮೈಸೂರು: ಮನೆಯ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿದ್ದ ಪ್ರಕರಣ ಮೈಸೂರಿನ ಮಂಡಿ ಮೊಹಲ್ಲಾದ ಎಸ್‌ ಆರ್‌ ರಸ್ತೆಯ ಅಕ್ಷತಾ ಅಪಾರ್ಟ್‌ಮೆಂಟ್‌ನಲ್ಲಿ ನಡೆದಿದೆ. 20 ವರ್ಷದ ಅನಿಕಾ ಇಲಾಯಿ ಮೃತ ಯುವತಿಯಾಗಿದ್ದು, ಮೈಸೂರಿನ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದರು.

ನಿನ್ನೆ ರಾತ್ರಿ ಬಾಲ್ಕನಿಯಲ್ಲಿ ಓಡಾಡುತ್ತಾ ಓದುತ್ತಿದ್ದ ಯುವತಿ ಅಲ್ಲಿಂದ ಕೆಳಗೆ ಬಿದ್ದು ಮೃತಪಟ್ಟಿರಬೇಕು ಎಂದು ಶಂಕಿಸಲಾಗಿದೆ. ಬೆಳಿಗ್ಗೆ ನೋಡಿದಾಗ ಬಾಲ್ಕನಿಯ ಕೆಳಗೆ ಯುವತಿಯ ಮೃತದೇಹ ಪತ್ತೆಯಾಗಿದ್ದು, ಬಾಲ್ಕನಿಯಿಂದ ಬಿದ್ದ ಪರಿಣಾಮ ತಲೆಗೆ ತೀವ್ರ ಪೆಟ್ಟಾಗಿ ಮೃತಪಟ್ಟಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.

ಅಪಾರ್ಟ್‌ಮೆಂಟ್‌ನ ಮೊದಲ ಮಹಡಿಯಲ್ಲಿ ಅನಿಕಾ ಇಲಾಯಿ ಕುಟುಂಬ ವಾಸವಾಗಿತ್ತು. ಮರಣೋತ್ತರ ಪರೀಕ್ಷೆಗಾಗಿ ಮೃತದೇಹ ರವಾನಿಸಲಾಗಿದ್ದು, ಈ‌ ಸಂಬಂಧ ಮಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಿರಣ್ ಐ.ಜಿ.: 'ಹಿಂದೂಸ್ತಾನ್ ಟೈಮ್ಸ್​​ ಕನ್ನಡ'ದಲ್ಲಿ ಸೀನಿಯರ್​ ಕಂಟೆಂಟ್ ಪ್ರೊಡ್ಯೂಸರ್. ಜನರ ಬದುಕು ಸುಧಾರಿಸಬಲ್ಲ ಟೆಕ್‌ ಮತ್ತು ಗ್ಯಾಜೆಟ್ ಇವರ ಆಸಕ್ತಿಯ ಕ್ಷೇತ್ರ. ಯಾವುದೇ ವಿಷಯವಾದರೂ ಶ್ರದ್ಧೆಯಿಂದ ಕಲಿಯಬಲ್ಲೆ, ಬರೆಯಬಲ್ಲೆ ಎನ್ನುವುದು ಇವರ ವಿಶ್ವಾಸ. ಊರು ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ. ಪ್ರಜಾವಾಣಿ, ವಿಜಯವಾಣಿ ಮತ್ತು ವಿಜಯ ಕರ್ನಾಟಕ ವೆಬ್ ಹಾಗೂ ಟಿವಿ9 ಕನ್ನಡ ಡಿಜಿಟಲ್‌ನ ವಿವಿಧ ವಿಭಾಗಗಳಲ್ಲಿ ಒಟ್ಟು 10 ವರ್ಷ ಕೆಲಸ ಮಾಡಿದ ಅನುಭವ. ಇಮೇಲ್: kiran.kumar@htdigital.in