Yuva Nidhi Enrollment: ಪದವಿ, ಡಿಪ್ಲೊಮಾ ಕಳೆದ ವರ್ಷ ಮುಗಿಸಿದ್ದೀರಾ, ಯುವನಿಧಿಗೆ ನೋಂದಣಿ ಅಭಿಯಾನ ಶುರುವಾಗಿದೆ, ಜನವರಿ 20 ಕಡೆ ದಿನ
Yuva Nidhi Enrollment: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆ ಶುರುವಾಗಿದೆ. ಜನವರಿ 20ರವರಗೆ ನೋಂದಣಿಗೆ ಅವಕಾಶವಿದೆ.
ಮೈಸೂರು: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆ ಯಾದ ಯುವನಿಧಿ ಯೋಜನೆಯಲ್ಲಿ 2022 -23 ಮತ್ತು 2023-24 ನೇ ಸಾಲಿನಲ್ಲಿ ಸ್ನಾತಕ ಪದವಿ/ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪದವಿಯಲ್ಲಿ ತೇರ್ಗಡೆಯಾಗಿ ಉದ್ಯೋಗ ಸಿಗದ ಅರ್ಹ ಅಭ್ಯರ್ಥಿಗಳು ಸೇವಾಸಿಂಧು ಪೋರ್ಟಲ್ https://sevasindhugs.Karnataka.gov.inನಲ್ಲಿ ನೊಂದಾಯಿಸಿಕೊಳ್ಳಲು ಜನವರಿ 6 ರಿಂದ 20 ರ ವರೆಗೆ ವಿಶೇಷ ನೊಂದಣಿ ಅಭಿಯಾನವನ್ನು ಮೈಸೂರು ವಿಶ್ವವಿದ್ಯಾನಿಲಯದಿಂದ ಹಮ್ಮಿಕೊಳ್ಳಲಾಗಿದ್ದು, ಅರ್ಹ ಫಲಾನುಭವಿಗಳು ಈ ಸದಾವಕಾಶವನ್ನು ಉಪಯೋಗಿಸಿಕೊಂಡು ಇದರ ಪ್ರಯೋಜನವನ್ನು ಪಡೆದುಕೊಳ್ಳಬಹುದಾಗಿದೆ.
ಯುವನಿಧಿ ಅಡಿ ಪದವೀಧರರಿಗೆ ಪ್ರತಿ ತಿಂಗಳು ರೂ.3000 ಹಾಗೂ ಡಿಪ್ಲೋಮಾ ಪದವಿದರರಿಗೆ ರೂ.1500 ನಿರುದ್ಯೋಗ ಭತ್ಯೆಯನ್ನು ನೀಡಲಾಗುವುದು. ಫಲಿತಾಂಶದ ನಂತರ ನಿರುದ್ಯೋಗಿಗಳಾಗಿ 180 ದಿವಸಗಳು ಪೂರೈಸಿ ಹೆಸರನ್ನು ನೋಂದಾಯಿಸಿಕೊoಡ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗುತ್ತದೆ.
ನಂತರ ಪ್ರತಿ ತಿಂಗಳು ಯುವ ನಿಧಿ ಯೋಜನೆಯ ಪ್ರಯೋಜನವನ್ನು ಪಡೆಯಬೇಕಿದ್ದರೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಮಾಹೆಯಾನ ತಾನು ನಿರುದ್ಯೋಗಿ ಎಂದು ಉನ್ನತ ವ್ಯಾಸಂಗ ಮುಂದುವರಿಸುತ್ತಿಲ್ಲವೆoದು ಹಾಗೂ ಸ್ವಯಂ ಉದ್ಯೋಗಿ ಅಲ್ಲವೆಂದು ಪ್ರತಿ ತಿಂಗಳ 25ನೇ ತಾರೀಕಿನೊಳಗಾಗಿ ಸ್ವಯಂ ಘೋಷಣೆಯನ್ನು ಮಾಡಬೇಕಾಗಿರುವುದು ಕಡ್ಡಾಯವಾಗಿರುತ್ತದೆ. ಸ್ವಯಂ ಘೋಷಣೆ ಆಧಾರದ ಮೇಲೆ ಅಭ್ಯರ್ಥಿಗಳು ಮುಂದಿನ ಪಾವತಿಯನ್ನು ಸ್ವೀಕರಿಸಲಾಗುವುದು.
ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಒನ್/ಗ್ರಾಮವನ್ನು ಮತ್ತು ಬಾಪೂಜಿ ಕೇಂದ್ರಗಳಲ್ಲಿ ಯುವ ನಿಧಿ ಯೋಜನೆಗೆ ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಕಡ್ಡಾಯವಾಗಿ ಆಧಾರ್ ಸೀಡಿಂಗ್ ಬ್ಯಾಂಕ್ ಖಾತೆ ಹಾಗೂ ಆಧಾರ್ ಲಿಂಕ್ ಮೊಬೈಲ್ ನಂಬರನ್ನು ಹೊಂದಿರತಕ್ಕದ್ದು ಅರ್ಜಿ ಸಲ್ಲಿಸಿದ ನಂತರ ಸೇವಾ ಸಿಂಧು ಪೋರ್ಟಲ್ ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು ಒಂದು ವೇಳೆ ಅರ್ಜಿಯು ಅಪ್ರೂವ್ ಆಗದ ಸಂದರ್ಭದಲ್ಲಿ ಸೂಚಿಸಲ್ಪಟ್ಟ ಇಲಾಖೆಯ ಕಚೇರಿಗಳಿಗೆ ತಮ್ಮ ಎಲ್ಲ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ಅಪ್ರೂವ್ ಮಾಡಿಕೊಳ್ಳಬೇಕಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಇಲ್ಲಿಗೆ ಕರೆ ಮಾಡಿ
ಹೆಚ್ಚಿನ ಮಾಹಿತಿಗಾಗಿ ಉದ್ಯೋಗ ವಿನಿಮಯ ಕಚೇರಿಯ ದೂ.ಸಂ:9113982513, 8748984360,9986263695 ನ್ನು ಸಂಪರ್ಕಿಸಬಹುದು ಎಂದು ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಸಕ್ತ ಅಭ್ಯರ್ಥಿಗಳು www.sevasindhugs.karnataka.gov.in ನಲ್ಲಿಯೂ ನೋಂದಾಯಿಸಲು ಅವಕಾಶವನ್ನೂ ಮಾಡಿಕೊಡಲಾಗಿದೆ. ಯೋಜನೆಯ ಅರ್ಹ ಅಭ್ಯರ್ಥಿಗಳು ನಿರುದ್ಯೋಗ ಭತ್ಯೆಯನ್ನು ಪಡೆಯಲು ಪ್ರತಿ ತಿಂಗಳ 1 ರಿಂದ 25ನೇ ತಾರೀಖಿನೊಳಗೆ ಘೋಷಣೆಯನ್ನು ಆನ್ ಲೈನ್ ನಲ್ಲಿ ಈ ಮೇಲೆ ತಿಳಿಸಲಾದ ಅಂತರ್ಜಾಲ ತಾಣದಿಂದ ಅಥವಾ ಸಹಾಯವಾಣಿ ಸಂಖ್ಯೆ:1800-599-9918 ಯಿಂದ ಪಡೆಯಲು ಸಾಧ್ಯವಿದೆ.
ಏನಿದು ಯೋಜನೆ
ಯುವನಿಧಿ ಯೋಜನೆಯು 2023ನೇ ಸಾಲಿನಲ್ಲಿ ಪದವಿ/ಡಿಪ್ಲೋಮೊ ಪಡೆದು ನಂತರ 180 ದಿನಗಳವರೆಗೆ ಉದ್ಯೋಗ ಹೊಂದಿರದ ವಿದ್ಯಾರ್ಥಿಗಳಿಗೆ ಪ್ರತೀ ತಿಂಗಳು ಅನುಕ್ರಮವಾಗಿ ರೂ.3000 ಹಾಗೂ ರೂ.1500 ನಿರುದ್ಯೋಗ ಭತ್ಯೆಯನ್ನು ನೀಡುವ ಯೋಜನೆ. ಎರಡು ವರ್ಷದವರೆಗೂ ಈ ನಿಧಿಯನ್ನುಉದ್ಯೋಗ ಸಿಗುವವರೆಗೆ ಪಡೆಬಹುದು.
ಸರ್ಕಾರಿ/ ಸರ್ಕಾರಿ ಅನುದಾನಿತ ಸಂಸ್ಥೆ / ಖಾಸಗಿ ವಲಯಗಳಲ್ಲಿ ಉದ್ಯೋಗದಲ್ಲಿರುವ ಅಭ್ಯರ್ಥಿಗಳು. ಸ್ವಯಂ ಉದ್ಯೋಗಿಗಳಾಗಿರುವ ಅಭ್ಯರ್ಥಿಗಳು. ವಿದ್ಯಾಭ್ಯಾಸವನ್ನು ಮುಂದುವರೆಸುವ ಅಭ್ಯರ್ಥಿಗಳು ಪಡೆಯಲು ಅವಕಾಶವಿಲ್ಲ. ನಿರುದ್ಯೋಗಿಗಳಾಗಿದ್ದರೆ ನೋಂದಣಿಗೆ ಅವಕಾಶವಿದೆ ಎಂದು ತಿಳಿಸಲಾಗಿದೆ.