Kannada News  /  Latest News  /  Karnataka Kannada Live News Updates September 22 09 2022

ಜಲಾವೃತವಾಗಿರುವ ರಸ್ತೆಯಲ್ಲೇ ೇಸಾಗುತ್ತಿರುವ ಜನರು (ಫೋಟೋ-ANI)

September 22 Kannada News Updates: ಭಾರಿ ಮಳೆಗೆ ದೆಹಲಿ ಸುತ್ತಮುತ್ತಲಿನ ಪ್ರದೇಶದ ಜನ ತತ್ತರ

ರಾಜ್ಯ, ದೇಶ ಹಾಗೂ ವಿದೇಶದ ಎಲ್ಲಾ ಬ್ರೇಕಿಂಗ್‌ ಸುದ್ದಿಗಳು ಇಲ್ಲಿ ಲಭ್ಯ. ಪ್ರತಿ ಕ್ಷಣದ ನಿಖರ ಸುದ್ದಿಗಾಗಿ ಇಲ್ಲಿ ಕ್ಲಿಕ್‌ ಮಾಡಿ.

Thu, 22 Sep 202214:52 IST

ಭದ್ರತಾ ಪಡೆಗಳ ದಾಳಿಯಿಂದ ಕನಿಷ್ಠ 31 ಮಂದಿ ಸಾವು!

ಪೊಲೀಸರಿಂದ ಬಂಧಿಸಲ್ಪಟ್ಟ ಮಹ್ಸಾ ಅಮಿನಿ ಸಾವಿನ ನಂತರ ಭುಗಿಲೆದ್ದ ಪ್ರತಿಭಟನೆಗಳ ಮೇಲೆ ಇರಾನ್ ಭದ್ರತಾ ಪಡೆಗಳು ನಡೆಸಿದ ದಾಳಿಯಲ್ಲಿ ಕನಿಷ್ಠ 31 ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಎನ್‌ಜಿಒ ಅನ್ನು ಉಲ್ಲೇಖಿಸಿ ಎಎಫ್‌ಪಿ ವರದಿ ಮಾಡಿದೆ.

Thu, 22 Sep 202214:48 IST

ಗ್ರಾಮೀಣ ಸೇವೆಯಡಿ 4 ಸಾವಿರ ವೈದ್ಯರ ನೇಮಕ

ರಾಜ್ಯದಲ್ಲಿ ಕಡ್ಡಾಯ ಗ್ರಾಮೀಣ ಸೇವೆಯಡಿಯಲ್ಲಿ 4 ಸಾವಿರ ವೈದ್ಯರನ್ನು ನೇಮಕ ಮಾಡಿಕೊಳ್ಳುತ್ತಿದ್ದು, ತಾಲೂಕು ಆಸ್ಪತ್ರೆಗಳಲ್ಲಿ ಕೊರತೆಯಿರುವ ತಜ್ಞ ವೈದ್ಯರನ್ನು ನೇಮಕ ಮಾಡಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಸಚಿವ ಡಾ ಕೆ ಸುಧಾಕರ್ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

Thu, 22 Sep 202213:54 IST

ಮಳೆಯಿಂದ ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇ ಜಲಾವೃತ

ಹರಿಯಾಣ: ರಾಷ್ಟ್ರ ರಾಜಧಾನಿ ದೆಹಲಿ ಸೇರಿದಂತೆ ಹಲವೆಡೆ ಭಾರಿ ಮಳೆಯಾಗುತ್ತಿರುವುದರಿಂದ ಗುರುಗ್ರಾಮ್‌ನ ನರಸಿಂಗ್‌ಪುರ ಪ್ರದೇಶದಲ್ಲಿ ದೆಹಲಿ-ಗುರುಗ್ರಾಮ್ ಎಕ್ಸ್‌ಪ್ರೆಸ್‌ವೇ ಜಲಾವೃತಗೊಂಡಿದೆ. ಇದರಿಂದ ಜನರು ಸಾಕಷ್ಟು ತೊಂದರೆ ಅನುಭವಿಸುತ್ತಿದ್ದಾರೆ. 

Thu, 22 Sep 202213:26 IST

ಪಿಎಫ್ಐ, ಎಸ್​ಡಿಪಿಐ ಕಾರ್ಯಕರ್ತರ ಪ್ರತಿಭಟನೆ

ದೇಶದ ವಿವಿಧೆಡೆ ಪಿಎಫ್ಐ ಮುಖಂಡರ ಮನೆ ಮೇಲೆ ಎನ್ಐಎ ದಾಳಿ ನಡೆಸಿದ ಹಿನ್ನೆಲೆ ಬೆಳಗಾವಿ ಮತ್ತು ಹುಬ್ಬಳ್ಳಿಯಲ್ಲಿ ಪಿಎಫ್ಐ, ಎಸ್​ಡಿಪಿಐ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. 

Thu, 22 Sep 202212:00 IST

ಉಗ್ರ ಚಟುವಟಿಕೆಗಳಿಗ ಹಣ ಫಂಡಿಂಗ್ ಆರೋಪ: ಎನ್ಐಎಯಿಂದ ಯಾಸಿರ್ ಹಸನ್ ಎಂಬಾತ ಬಂಧನ

ರಾಷ್ಟ್ರೀಯ ತನಿಖಾ ಸಂಸ್ಥೆ ಯಾಸಿರ್​ ಹಸನ್​ ಎಂಬಾತನನ್ನು ಬಂಧಿಸಿದೆ. ಉಗ್ರ ಚಟುವಟಿಕೆಗಳಿಗೆ ಹಣ ಫಂಡಿಂಗ್​ ಮಾಡುತ್ತಿದ್ದ ಆರೋಪದ ಮೇಲೆ ಬಂಧನ ಮಾಡಲಾಗಿದೆ. ಆತನನ್ನು ಎನ್ಐಎ‌ ಅಧಿಕಾರಿಗಳು ದೆಹಲಿಗೆ ಕರೆದುಕೊಂಡು ಹೋಗಲಿದ್ದಾರೆ.

Thu, 22 Sep 202211:58 IST

ರಾಜಕಾಲುವೆ ಒತ್ತುವರಿದಾರರಿಗೆ ಬಿಬಿಎಂಪಿ ಶಾಕ್

ಬೆಂಗಳೂರಿನಲ್ಲಿ ರಾಜಕಾಲುವೆ ಒತ್ತುವರಿ ತೆರವು ಸಂಬಂಧ ಹೈಕೋರ್ಟ್ ಮೆಟ್ಟಿಲೇರಿದ್ದ ಮನೆ ಮಾಲೀಕರಿಗೆ ಬಿಬಿಎಂಪಿ ಬಿಸಿ ಮುಟ್ಟಿಸಿದ್ದು, 29 ಕಟ್ಟಡಗಳ ವಿರುದ್ಧ ಕಾರ್ಯಾಚರಣೆಗೆ ಆದೇಶಿಸಿದೆ.

Thu, 22 Sep 202211:32 IST

ಎಲ್ಲ ರೀತಿಯ ಕೋಮುವಾದ ಮತ್ತು ಹಿಂಸಾಚಾರ ಒಂದೇ - ರಾಹುಲ್ ಗಾಂಧಿ

ಎಲ್ಲ ರೀತಿಯ ಕೋಮುವಾದ ಮತ್ತು ಹಿಂಸಾಚಾರ ಒಂದೇ. ಅವು ಎಲ್ಲಿಂದ ಬಂದರೂ ಒಂದೇ ಆಗಿರುತ್ತವೆ. ಅದರ ವಿರುದ್ಧ ಹೋರಾಡಬೇಕು. ಶೂನ್ಯ ಸಹಿಷ್ಣುತೆ ಇರಬೇಕೆಂದು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಹೇಳಿದ್ದಾರೆ. ಪಿಎಫ್​ಐ ಕಚೇರಿಗಳು ಮತ್ತು ಅದರ ನಾಯಕರ ಮೇಲೆ ಎನ್​ಐಎ ದಾಳಿ ಕುರಿತಾದ ಪ್ರಶ್ನೆಗೆ ರಾಹುಲ್​ ಈ ಉತ್ತರ ನೀಡುವ ಮೂಲಕ ಪರೋಕ್ಷವಾಗಿ ಎನ್​ಐಎ ದಾಳಿಯನ್ನು ಬೆಂಬಲಿಸಿದ್ದಾರೆ.

Thu, 22 Sep 202211:30 IST

ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆಗೆ ವಿರೋಧ ಮಾಡಿಲ್ಲ - ಯಡಿಯೂರಪ್ಪ

ನಾನು ಪಂಚಮಸಾಲಿ ಸಮುದಾಯವನ್ನು 2ಎಗೆ ಸೇರ್ಪಡೆ ಮಾಡಲು ಎಲ್ಲಿಯೂ ವಿರೋಧ ವ್ಯಕ್ತಪಡಿಸಿಲ್ಲ. ಮುಖ್ಯಮಂತ್ರಿಯಾಗಿದ್ದಾಗ ಆ ಸಮುದಾಯದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಕೊಟ್ಟಿದ್ದೆ. ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ಶಿಫಾರಸ್ಸು ಮಾಡಿದ್ದೇ ನಾನು ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾಲಪದಲ್ಲಿ ಹೇಳಿದರು.

Thu, 22 Sep 20229:50 IST

ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ ಆರೋಪ

40% ಕಮಿಷನ್‌ಗೆ ಕಿರುಕುಳ ನೀಡಿ ಒಂದು ಜೀವ ಬಲಿ ಪಡೆದ ಆರೋಪಿಯಾಗಿದ್ದ ಈಶ್ವರಪ್ಪರನ್ನು ಒಂದು ದಿನವೂ ಬಂಧಿಸಿ ವಿಚಾರಣೆ ನಡೆಸಲಿಲ್ಲ.

ಆದರೆ #PayCM ಪೋಸ್ಟರ್ ಅಂಟಿಸಿದವರ ವಿರುದ್ಧ 7-8 ಕೇಸ್‌ಗಳು, ಬಂಧನಕ್ಕೆ ವಿಶೇಷ ಪೊಲೀಸ್ ತಂಡ. ಕಾಂಗ್ರೆಸ್ ಕಾರ್ಯಕರ್ತರಿಗೆ ಕಿರುಕುಳ.

@BSBommai ಅವರೇ, ಇದು ಹೇಡಿತನದ, ಲಜ್ಜೆಗೇಡಿತನದ ಪರಮಾವಧಿಯಲ್ಲವೇ? ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ. 

Thu, 22 Sep 20228:07 IST

ಅಮಿತ್‌ ಶಾ ನೇತೃತ್ವದಲ್ಲಿ ಸಭೆ

ದೇಶದ 13 ರಾಜ್ಯಗಳಲ್ಲಿ ಎನ್‌ಐಎ, ಇಡಿ ಮತ್ತು ಪೊಲೀಸರು ಜಂಟಿಯಾಗಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಮುಖಂಡರ ನಿವಾಸ ಹಾಗೂ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. 

ಹಲವು ಮುಖಂಡರನ್ನು ವಶಕ್ಕೆ ಪಡೆಯಲಾಗಿದೆ.

ಇದಾದ ಬೆನಲ್ಲೇ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹಾಗೂ ಭದ್ರತಾ ಮುಖ್ಯಸ್ಥರೊಂದಿಗೆ ಸಭೆ ನಡೆಸಲಿದ್ದಾರೆ. 

ದಾಳಿ ವೇಳೆ ಸಂಗ್ರಹಿಸಿದ ಸಾಕ್ಷ್ಯಗಳನ್ನು ಪರಿಶೀಲಿಸಲು ಮತ್ತು ಮುಂದಿನ ಕ್ರಮದ ಬಗ್ಗೆ ಚರ್ಚಿಸುವ ಉದ್ದೇಶದಿಂದ ಸಭೆ ನಡೆಸಲು ಯೋಜಿಸಲಾಗಿದೆ. 

Thu, 22 Sep 20227:36 IST

ಗಂಗಾವತಿ, ಕಲಬುರಗಿಯಲ್ಲೂ ಎನ್‌ಐಎ ದಾಳಿ, ವಶ

ಕೆಜಿ ಹಳ್ಳಿ ಮತ್ತು ಡಿಜೆ ಹಳ್ಳಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಪ್ಪಳ ಜಿಲ್ಲಾ ಪಿಎಫ್‌ಐ ಸಂಘಟನೆ ಮುಖಂಡ ಅಬ್ದುಲ್ ಫೈಯಾಜ್ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಗಂಗಾವತಿಯ ಈದ್ಗಾ ಕಾಲೋನಿಯ ಫೈಯಾಜ್ ಮನೆ ಮೇಲೆ ಇಂದು ಮೇಲೆ ಬೆಳಗಿನ ಜಾವ ಅಧಿಕಾರಿಗಳು ದಾಳಿ ನಡೆಸಿದ್ದರು.

ಇನ್ನೊಂದೆಡೆ ಕಲಬುರಗಿಯಲ್ಲಿ ಇಬ್ಬರು PFI ಕಾರ್ಯಕರ್ತರನ್ನು ವಶಕ್ಕೆ ಪಡೆಯಲಾಗಿದೆ.

ರಾತ್ರಿಯಿಡೀ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಇಂದು ಬೆಳಗ್ಗೆ ಪಿಎಫ್‌ಐ ಜಿಲ್ಲಾಧ್ಯಕ್ಷ ಎಜಾಜ್ ಅಲಿಯನ್ನು ವಶಕ್ಕೆ ಪಡೆದಿದ್ದಾರೆ.

Thu, 22 Sep 20227:36 IST

ಮಂಗಳೂರಿನಲ್ಲಿ ಮೂವರು ಪಿಎಫ್ಐ ಮುಖಂಡರು ವಶಕ್ಕೆ

ಮಂಗಳೂರಿನಲ್ಲಿ ಎನ್​ಐಎ ಪರಿಶೀಲನೆ ಮುಕ್ತಾಯ

ಮೂವರು ಪಿಎಫ್ಐ ಮುಖಂಡರು ವಶಕ್ಕೆ

ಪಿಎಫ್ಐ ಮುಖಂಡ ಅಶ್ರಫ್ ಎ.ಕೆ, ಮೊಹಿದ್ದೀನ್ ಹಳೆಯಂಗಡಿ, ನವಾಜ್ ಕಾವೂರು ಎಂಬವರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇತ್ತ ಶಿವಮೊಗ್ಗದಲ್ಲಿ ಪಿಎಫ್​ಐ ರಾಜ್ಯ ವಲಯ ಅಧ್ಯಕ್ಷ ಶಾಹೀದ್ ಖಾನ್ ಎಂಬಾತನ ಮನೆ ಮೇಲೆ ದಾಳಿ ನಡೆಸಿರುವ, ಆತನನ್ನು ವಶಕ್ಕೆ ಪಡೆದಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಟಿಪ್ಪು ನಗರದಲ್ಲಿಯೂ ಎನ್‌ಐಎ ಅಧಿಕಾರಿಗಳು ದಾಳಿ ನಡೆಸಿದ್ದು, ಎಸ್​​ಡಿಪಿಐ ಮುಖಂಡ ಅಜೀಜ್ ಅಬ್ದುಲ್ ಶುಕುರ್ ಹೊನ್ನಾವರ್ ಎಂಬಾತನನ್ನು ಬಂಧಿಸಿದ್ದಾರೆ.

Thu, 22 Sep 20227:36 IST

ತೆಲಂಗಾಣ ಪಿಎಫ್‌ಐ ಕೇಂದ್ರ ಕಚೇರಿಗೆ ಸೀಲ್

ಹೈದರಾಬಾದ್‌ನ ಚಂದ್ರಾಯನಗುಟ್ಟದಲ್ಲಿರುವ ತೆಲಂಗಾಣ ಪಿಎಫ್‌ಐ ಕೇಂದ್ರ ಕಚೇರಿಗೆ ಸೀಲ್ ಹಾಕಿದ ಎನ್‌ಐಎ. 

ಎನ್‌ಐಎ ಮತ್ತು ಇಡಿ ಅಧಿಕಾರಿಗಳು ಸ್ಥಳೀಯ ಪೊಲೀಸರೊಂದಿಗೆ ಜಂಟಿಯಾಗಿ ಪಿಎಫ್‌ಐ ಕಚೇರಿಗೆ ಸೀಲ್‌ ಹಾಕಿದ್ದಾರೆ.

Thu, 22 Sep 20227:36 IST

ಹಾಸ್ಯನಟ ರಾಜು ಶ್ರೀವಾಸ್ತವ ಅವರ ಅಂತ್ಯ ಸಂಸ್ಕಾರ

ಇಂದು ಹಾಸ್ಯನಟ ರಾಜು ಶ್ರೀವಾಸ್ತವ ಅವರ ಅಂತ್ಯ ಸಂಸ್ಕಾರ

ಪಾರ್ಥಿವ ಶರೀರವನ್ನು ಅಂತಿಮ ವಿಧಿವಿಧಾನಗಳಿಗಾಗಿ ದೆಹಲಿಯ ನಿಗಮಬೋಧ ಘಾಟ್ ಸ್ಮಶಾನಕ್ಕೆ ಕೊಂಡೊಯ್ಯಲಾಯಿತು.

ಜಿಮ್‌ನಲ್ಲಿ ವ್ಯಾಯಾಮ ಮಾಡುವಾಗ ಎದೆನೋವಿನಿಂದ ಕುಸಿದು ಬಿದ್ದ ಬಳಿಕ ಅವರನ್ನು ಆಗಸ್ಟ್ 10ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ AIIMSನಲ್ಲಿ ಸಾವನ್ನಪ್ಪಿದ್ದರು.

Thu, 22 Sep 20227:36 IST

ಎನ್‌ಐಎ ದಾಳಿ ನಡೆಸಿದ ಉದ್ದೇಶ ಇದು

10 ರಾಜ್ಯಗಳಲ್ಲಿ ನಡೆಸಲಾದ ದಾಳಿಯಲ್ಲಿ ಎನ್‌ಐಎ, ಇಡಿ ಮತ್ತು ರಾಜ್ಯ ಪೊಲೀಸರು 100 ಕ್ಕೂ ಹೆಚ್ಚು ಪಿಎಫ್‌ಐ ಕಾರ್ಯಕರ್ತರನ್ನು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. 

ಈ ಬಗ್ಗೆ ಸುದ್ದಿ ಸಂಸ್ಥೆ ಎಎನ್‌ಐ ವರದಿ ಮಾಡಿದೆ.

ಎನ್‌ಐಎ ಇಲ್ಲಿಯವರೆಗಿನ ಅತಿದೊಡ್ಡ ತನಿಖೆ ಪ್ರಕ್ರಿಯೆಯಲ್ಲಿ ಅನೇಕ ಸ್ಥಳಗಳಲ್ಲಿ ಹುಡುಕಾಟ ನಡೆಸುತ್ತಿದೆ. 

ಭಯೋತ್ಪಾದನೆಗೆ ಧನಸಹಾಯ, ತರಬೇತಿ ಶಿಬಿರಗಳನ್ನು ಆಯೋಜಿಸುವುದು ಮತ್ತು ನಿಷೇಧಿತ ಸಂಘಟನೆಗಳಿಗೆ ಸೇರಲು ಜನರನ್ನು ಮೂಲಭೂತವಾಗಿ ರೂಪಿಸುವ ವಿವಿಧ ವ್ಯಕ್ತಿಗಳ ನಿವಾಸ ಮತ್ತು ಅಧಿಕೃತ ಕಚೇರಿಗಳಲ್ಲಿ ಹುಡುಕಾಟಗಳನ್ನು ನಡೆಸಲಾಗುತ್ತಿದೆ.

Thu, 22 Sep 20227:36 IST

ತಮಿಳುನಾಡಿನಲ್ಲೂ ಎನ್‌ಐಎ ತನಿಖೆ

ತಮಿಳುನಾಡಿನ ಕೊಯಮತ್ತೂರು, ಕಡಲೂರು, ರಾಮನಾಡ್, ದಿಂಡುಗಲ್, ತೇಣಿ ಮತ್ತು ತೆಂಕಾಸಿ ಸೇರಿದಂತೆ ಹಲವು ಸ್ಥಳಗಳಲ್ಲಿ ಪಿಎಫ್‌ಐ ಪದಾಧಿಕಾರಿಗಳ ಮನೆಗಳಲ್ಲಿ ಎನ್‌ಐಎ ಶೋಧ ಕಾರ್ಯ ನಡೆಸುತ್ತಿದೆ. 

ಪುರಸವಕ್ಕಂನಲ್ಲಿರುವ ಚೆನ್ನೈ PFI ರಾಜ್ಯ ಪ್ರಧಾನ ಕಚೇರಿಯಲ್ಲೂ ಶೋಧ ನಡೆಸಲಾಗುತ್ತಿದೆ.

Thu, 22 Sep 20227:36 IST

ಮಂಗಳೂರಿನಲ್ಲಿ ಎನ್‌ಐಎ ದಾಳಿ

ಮಂಗಳೂರು ನಗರದಲ್ಲಿನ ಪಿಎಫ್ಐ ಹಾಗೂ ಎಸ್‌​ಡಿಪಿಐ ಜಿಲ್ಲಾ ಕಚೇರಿಗಳ ಮೇಲೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದೆ. 

ಇಂದು ನಸುಕಿನ ಜಾವ 3.30ರ ಸುಮಾರಿಗೆ ದಾಳಿ ನಡೆಸಲಾಗಿದೆ ಎನ್ನಲಾಗಿದೆ.

ದಾಳಿಗೆ ನಿಖರ ಕಾರಣ ತಿಳಿದುಬಂದಿಲ್ಲ. 

ಮಂಗಳೂರು ನಗರ ಪೊಲೀಸರು ಸ್ಥಳದಲ್ಲಿ ಉಪಸ್ಥಿತರಿದ್ದು ಭದ್ರತೆ ಒದಗಿಸಿದ್ದಾರೆ. ‌ಶಸ್ತ್ರಸಜ್ಜಿತ ಕೇಂದ್ರೀಯ ಪಡೆಗಳೊಂದಿಗೆ ಸ್ಥಳಕ್ಕೆ ಬಂದಿರುವ ಅಧಿಕಾರಿಗಳು, ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಮತ್ತು ಎಸ್‌ಡಿಪಿಐ ಕಾರ್ಯಕರ್ತರು ಸ್ಥಳದಲ್ಲಿ ಪ್ರತಿಭಟನೆ ನಡೆಸಿದರು. 

ಅಧಿಕಾರಿಗಳು ತಪಾಸಣೆ ನಡೆಸುತ್ತಿದ್ದಂತೆ ಪಿಎಫ್ಐ ಕಾರ್ಯಕರ್ತರು ಅವರ ವಿರುದ್ಧ ಗೋ ಬ್ಯಾಕ್ ಘೋಷಣೆ ಕೂಗುತ್ತಿದ್ದಾರೆ.

Thu, 22 Sep 20222:50 IST

ಕೇರಳದಲ್ಲಿ ಎನ್‌ಐಎ ದಾಳಿ

ಕೇರಳದಲ್ಲಿ ಎನ್‌ಐಎ ದಾಳಿ ನಡೆಸಿದೆ. 

ಮಲಪ್ಪುರಂ ಜಿಲ್ಲೆಯ ಮಂಜೇರಿಯಲ್ಲಿರುವ ಪಿಎಫ್‌ಐ ಅಧ್ಯಕ್ಷ ಒಎಂಎ ಸಲಾಂ ಅವರ ಮನೆಯ ಮೇಲೆಯೂ ದಾಳಿ ನಡೆಸಲಾಗಿದೆ. 

ಪಿಎಫ್‌ಐ ಸಂಘಟನೆಯ ರಾಜ್ಯ ಹಾಗೂ ಜಿಲ್ಲಾ ಮಟ್ಟದ ನಾಯಕರ ಮನೆ ಮತ್ತು ಪಿಎಫ್‌ಐ ಕಚೇರಿಗಳಲ್ಲಿ ಮಧ್ಯರಾತ್ರಿಯಿಂದ ಎನ್‌ಐಎ ಮತ್ತು ಇಡಿ ದಾಳಿ ನಡೆಸುತ್ತಿದೆ.

Thu, 22 Sep 20221:59 IST

ಬಸ್‌ ಪಲ್ಟಿಯಾಗಿ ಮೂವರು ಸಾವು

ಛತ್ತೀಸ್‌ಗಢದ ಜಶ್‌ಪುರದಲ್ಲಿ ಬಸ್ ಪಲ್ಟಿ

3 ಜನ ಸಾವು, 6 ಮಂದಿಗೆ ಗಾಯ

ಪಾತಾಳಗಾಂವ್‌ನಿಂದ ಅಂಬಿಕಾಪುರಕ್ಕೆ ಹೋಗುತ್ತಿದ್ದ ಬಸ್‌

ರಾಂಗ್‌ ಸೈಡ್‌ನಿಂದ ಬರುತ್ತಿದ್ದ ಬೈಕ್‌ ಉಳಿಸಲು ಯತ್ನಿಸಿ ಪಲ್ಟಿ

ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮತ್ತು ಓರ್ವ ಬಸ್‌ ಪ್ರಯಾಣಿಕ ಸಾವು

6 ಮಂದಿಗೆ ಗಾಯ

ಪಾತಾಳಗಾಂವ್ ಎಸ್‌ಡಿಒಪಿ ಮಯಾಂಕ್ ತಿವಾರಿ ಮಾಹಿತಿ

Thu, 22 Sep 20221:59 IST

ಹರ್ಮನ್‌ ಪ್ರೀತ್‌ ಕೌರ್‌ ಭರ್ಜರಿ ಶತಕ

ಟೀಂ ಇಂಡಿಯಾ ನಾಯಕಿ ಹರ್ಮನ್‌ ಪ್ರೀತ್‌ ಕೌರ್‌ ಭರ್ಜರಿ ಶತಕ

ಏಕದಿನ ಕ್ರಿಕೆಟ್‌ನಲ್ಲಿ 5ನೇ ಶತಕ ಸಿಡಿಸಿದ ಮಹಿಳಾ ನಾಯಕಿ

111 ಎಸೆತಗಳಲ್ಲಿ ಅಜೇಯ 143 ರನ್‌ ಗಳಿಸಿ ದಾಖಲೆ

18 ಬೌಂಡರಿ ಹಾಗೂ 4 ಸಿಕ್ಸರ್‌ ಸಿಡಿಸಿದ ಕ್ಯಾಪ್ಟನ್

Thu, 22 Sep 20221:59 IST

ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ಜಯ

ಇಂಗ್ಲೆಂಡ್‌ ವಿರುದ್ಧ ಭಾರತಕ್ಕೆ ಜಯ

ವನಿತೆಯರ ಕ್ರಿಕೆಟ್‌ನಲ್ಲಿ ಹರ್ಮನ್‌ ಪ್ರೀತ್‌ ಕೌರ್‌ ಬಳಗಕ್ಕೆ 88 ರನ್‌ಗಳ ಭರ್ಜರಿ ಜಯ

ಇನ್ನೂ ಒಂದು ಪಂದ್ಯ ಬಾಕಿ ಇರುವಂತೆ 2-0ಯಿಂದ ಸರಣಿ ಗೆದ್ದ ಭಾರತದ ನಾರಿಯರು

1999ರ ಬಳಿಕ ಇಂಗ್ಲೆಂಡ್‌ನಲ್ಲಿ ಭಾರತಕ್ಕೆ ಮೊದಲ ಗೆಲುವು

Thu, 22 Sep 20221:59 IST

ವಕ್ಫ್ ಬೋರ್ಡ್‌ನ ಅವ್ಯವಹಾರ ವರದಿ ಸದನದಲ್ಲಿ ಮಂಡನೆ

ರಾಜ್ಯ ವಕ್ಫ್ ಬೋರ್ಡ್‌ನ ಅವ್ಯವಹಾರ ಕುರಿತ ಅನ್ವರ್ ಮಾಣಿಪ್ಪಾಡಿ ಆಯೋಗದ ವರದಿ ಸದನದಲ್ಲಿ ಮಂಡಿಸಲಾಗುವುದು.

2.5 ಲಕ್ಷ ಕೋಟಿ ರೂಪಾಯಿ ಮೌಲ್ಯದ ಆಸ್ತಿ ಕಬಳಿಕೆ ವರದಿ ಮಂಡಿಸಿ ಚರ್ಚೆಗೆ ಅವಕಾಶ.

ಉಪ ಲೋಕಾಯುಕ್ತರು ನೀಡಿರುವ ವರದಿ ಆಧಾರದ ಮೇಲೆ ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕ್ರಮ.

ಸದನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ

ವಿಧಾನಸಭೆಯಲ್ಲಿ ವಕ್ಫ್ ಆಸ್ತಿ ಒತ್ತುವರಿ ವರದಿಯ ಬಗ್ಗೆ ಚರ್ಚೆ.

ಬಿಜೆಪಿ ಮತ್ತು ಪ್ರತಿಪಕ್ಷಗಳ ನಡುವೆ ಭಾರಿ ಪರ-ವಿರೋಧಗಳ ಚರ್ಚೆ.

Thu, 22 Sep 20221:59 IST

ಮೋದಿ ಕೊಂಡಾಡಿದ ವಿದೇಶಾಂಗ ಸಚಿವ

ಅಮೆರಿಕದೊಂದಿಗೆ ಬಾಂಧವ್ಯ ವೃದ್ಧಿಸುವಲ್ಲಿ ಪ್ರಧಾನಿ ಮೋದಿಯವರ ಪ್ರಾಯೋಗಿಕ ಮನೋಭಾವ ಪ್ರಮುಖ ಪಾತ್ರ ವಹಿಸಿದೆ.

ವಿದೇಶಾಂಗ ಸಚಿವ ಜೈಶಂಕರ್ ವ್ಯಾಖ್ಯಾನ

ಕೊಲಂಬಿಯಾ ವಿಶ್ವವಿದ್ಯಾನಿಲಯದಲ್ಲಿ ನಡೆದ ಸಂವಾದದಲ್ಲಿ ಸಚಿವರ ಹೇಳಿಕೆ.

ಹಂಚಿಕೊಳ್ಳಲು ಲೇಖನಗಳು

  • Share on Twitter
  • Share on FaceBook