ಅಯೋಧ್ಯೆ ರಾಮ ಮಂದಿರದಲ್ಲಿ ಪ್ರಾಣ ಪ್ರತಿಷ್ಠಾಪನೆ; ಜ 22 ರಂದು ಈ ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ
ಜನವರಿ 22 ರಂದು ಅಯೋಧ್ಯೆಯಲ್ಲಿ ನಡೆಯಲಿರುವ 'ಪ್ರಾಣ ಪ್ರತಿಷ್ಠಾ' ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆಯುತ್ತಿದ್ದು, ಹಲವು ರಾಜ್ಯಗಳು ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿವೆ.
ಉತ್ತರ ಪ್ರದೇಶದ ಪವಿತ್ರ ನಗರ ಅಯೋಧ್ಯೆಯ ರಾಮ ಮಂದಿರದಲ್ಲಿ ಜನವರಿ 22 (ಸೋಮವಾರ) ರಂದು ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆಯನ್ನು ಕಣ್ತುಂಬಿಕೊಳ್ಳಲು ಇಡೀ ದೇಶ ಕಾತುರದಿಂದ ಕಾಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿರುವ ಐತಿಹಾಸಿಕ ಕಾರ್ಯಕ್ರಮಕ್ಕೆ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಸಂತರು, ಸೆಲೆಬ್ರಿಟಿಗಳು ಮತ್ತು ರಾಜಕಾರಣಿಗಳು ಸೇರಿದಂತೆ ಸಾವಿರಾರು ಜನರನ್ನು ಸಮಾರಂಭಕ್ಕೆ ಆಹ್ವಾನಿಸಲಾಗಿದೆ.
ಈ ನಡುವೆ ಕೇಂದ್ರ ಸರ್ಕಾರ ದೇಶಾದ್ಯಂತ ಎಲ್ಲಾ ಸರ್ಕಾರಿ ಕಚೇರಿಗಳನ್ನು ಅರ್ಧ ದಿನ ಮುಚ್ಚುವುದಾಗಿ ಗುರುವಾರ (ಜನವರಿ 18) ಘೋಷಣೆ ಮಾಡಿದೆ. ಹಲವಾರು ರಾಜ್ಯ ಸರ್ಕಾರಗಳು ಕೂಡ ಸಾರ್ವಜನಿಕ ರಜಾದಿನ ಅಥವಾ ಅರ್ಧ ದಿನವನ್ನು ಘೋಷಿಸಿವೆ. ಹೀಗಾಗಿ ಜನವರಿ 22ರ ಸೋಮವಾರ ಕೆಲವು ರಾಜ್ಯಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ.
ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿರುವ ರಾಜ್ಯಗಳ ಪಟ್ಟಿ
ಉತ್ತರ ಪ್ರದೇಶ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಿಜೆಪಿ ಸರ್ಕಾರ ಜನವರಿ 22 ರಂದು ರಾಜ್ಯದಾದ್ಯಂತ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸುವಂತೆ ನಿರ್ದೇಶನ ನೀಡಿದೆ. ಹೀಗಾಗಿ ಉತ್ತರ ಪ್ರದೇಶದಲ್ಲಿ ಸೋಮವಾರ ಶಾಲಾ-ಕಾಲೇಜುಗಳಿಗೆ ರಜೆ ಇರಲಿದೆ. ಇಲ್ಲಿ ಮದ್ಯದಂಗಡಿಗಳನ್ನು ಸಹ ಮುಚ್ಚಲಾಗುತ್ತದೆ.
ಛತ್ತೀಸ್‌ಗಢ: ಛತ್ತೀಸ್‌ಗಢದಲ್ಲಿ ಜನವರಿ 22ರ ಸೋಮವಾರ ಮಧ್ಯಾಹ್ನ 2.30ರವರೆಗೆ ಎಲ್ಲಾ ಸರ್ಕಾರಿ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ. ಸಿಎಂ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಗುರುವಾರ ಈ ಘೋಷಣೆ ಮಾಡಿದ್ದಾರೆ.
ಮಧ್ಯಪ್ರದೇಶ: ಜನವರಿ 22 ರಂದು ಮಧ್ಯಪ್ರದೇಶದ ಎಲ್ಲಾ ಶಾಲೆಗಳು ಹಾಗೂ ಸರ್ಕಾರಿ ಕಚೇರಿಗಳನ್ನು ಮಧ್ಯಾಹ್ನ 2:30 ರವರೆಗೆ ಮುಚ್ಚಲಾಗುತ್ತದೆ.
ಹರಿಯಾಣ: ಈ ರಾಜ್ಯದಲ್ಲೂ ಎಲ್ಲಾ ಶಾಲೆಗಳು ಅಂದು ಮುಚ್ಚಾಗುತ್ತದೆ. ರಾಜ್ಯ ಸರ್ಕಾರ ‘ಡ್ರೈ ಡೇ’ ಅಂತ ಘೋಷಣೆ ಮಾಡಿದೆ.
ಒಡಿಶಾ: ಎಲ್ಲಾ ಸರ್ಕಾರಿ ಕಚೇರಿಗಳು, ಕಂದಾಯ ಮತ್ತು ಮ್ಯಾಜಿಸ್ಟ್ರೇಟ್ ನ್ಯಾಯಾಲಯಗಳು ಮಧ್ಯಾಹ್ನ 2:30 ರವರೆಗೆ ಅಂದರೆ ಅರ್ಧ ದಿನ ಮುಚ್ಚಲಾಗುತ್ತದೆ.
ಅಸ್ಸಾಂ: ಇಲ್ಲೂ ಕೂಡ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳನ್ನು ಮಧ್ಯಾಹ್ನ 2:30 ರವರೆ ಮುಚ್ಚಲಾಗುತ್ತದೆ ಎಂದು ಅಸ್ಸಾಂ ಸರ್ಕಾರ ಘೋಷಿಸಿದೆ.
ಉತ್ತರಾಖಂಡ: ಎಲ್ಲಾ ಸರ್ಕಾರಿ ಕಚೇರಿಗಳು ಮಧ್ಯಾಹ್ನ 2:30 ರವರೆಗೆ ಅರ್ಧ ದಿನ ಮುಚ್ಚಲಾಗುತ್ತದೆ. ಶಾಲಾ-ಕಾಲೇಜುಗಳಿಗೆ ಇಡೀ ದಿನ ರಜೆ ಘೋಷಣೆ ಮಾಡಲಾಗಿದೆ.
ಮಹಾರಾಷ್ಟ್ರ: ಇಲ್ಲಿನ ಸರ್ಕಾರ ಜನವರಿ 22 ರಂದು ರಾಜ್ಯದಲ್ಲಿ ಸಾರ್ವಜನಿಕ ರಜಾದಿನವನ್ನು ಘೋಷಿಸಿದೆ. ರಾಜಸ್ಥಾನ
ರಾಜಸ್ಥಾನ: ಸರ್ಕಾರವು ರಾಜ್ಯದ ಸರ್ಕಾರಿ ಕಚೇರಿಗಳಿಗೆ ಅರ್ಧ ದಿನ ರಜೆ ಘೋಷಿಸಿದೆ.
ಗೋವಾ: ಎಲ್ಲಾ ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಇಡೀ ದಿನ ರಜೆ ಘೋಷಣೆ ಮಾಡಲಾಗಿದೆ.
ತ್ರಿಪುರಾ: ಎಲ್ಲಾ ಸರ್ಕಾರಿ ಕಚೇರಿಗಳು, ಶಿಕ್ಷಣ ಸಂಸ್ಥೆಗಳನ್ನು ಸೋಮವಾರ ಮಧ್ಯಾಹ್ನ 2:30 ರವರೆಗೆ ಮುಚ್ಚಲ್ಪಡುತ್ತವೆ ಎಂದು ರಾಜ್ಯ ಸರ್ಕಾರ ಹೊರಡಿಸಿದ ಆದೇಶದಲ್ಲಿ ತಿಳಿದೆ
ಹರಿಯಾಣ: ಸರ್ಕಾರಿ ಕಚೇರಿಗಳು ಮತ್ತು ಶಿಕ್ಷಣ ಸಂಸ್ಥೆಗಳಿಗೆ ಹರಿಯಾಣ ಸರ್ಕಾರ ಅರ್ಧ ದಿನ ರಜೆ ಘೋಷಿಸಿದೆ.
ಚಂಡೀಗಢ: ಚಂಡೀಗಢ ಕೇಂದ್ರಾಡಳಿತ ಪ್ರದೇಶದ ಆಡಳಿತವು ಜನವರಿ 22 ರಂದು ತನ್ನ ಎಲ್ಲಾ ಕಚೇರಿಗಳನ್ನು ಮುಚ್ಚುವುದಾಗಿ ಘೋಷಿಸಿದೆ.
ಪುದುಚೇರಿ: ಮುಖ್ಯಮಂತ್ರಿ ಎನ್ ರಂಗಸಾಮಿ ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ಜನವರಿ 22 ರಂದು ಸಾರ್ವಜನಿಕ ರಜೆ ಘೋಷಿಸಿದ್ದಾರೆ
ಜನವರಿ 22 ರಂದು ಸಾರ್ವಜನಿಕ ಬ್ಯಾಂಕ್‌ಗಳಿಗೆ ರಜೆ ಘೋಷಣೆ
ಅಯೋಧ್ಯೆಯಲ್ಲಿ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜನವರಿ 22ರ ಸೋಮವಾರ ಅರ್ಧ ದಿನ ಎಲ್ಲಾ ಬ್ಯಾಂಕುಗಳನ್ನು ಮುಚ್ಚುವಂತೆ ಹಣಕಾಸು ಸಚಿವಾಲಯ ಆದೇಶ ಹೊರಡಿಸಿದೆ. ಎಲ್ಲಾ ಸಾರ್ವಜನಿಕ ವಲಯದ ಬ್ಯಾಂಕುಗಳು, ವಿಮಾ ಕಂಪನಿಗಳು, ಹಣಕಾಸು ಸಂಸ್ಥೆಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕುಗಳು ಮಧ್ಯಾಹ್ನ 2:30 ರವರೆಗೆ ಮುಚ್ಚಿರುತ್ತವೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.
'ಮನೆ-ಮನದಲ್ಲಿ ಶ್ರೀರಾಮ' ಸರಣಿಗೆ ನೀವೂ ಬರೆಯಿರಿ. ಇಮೇಲ್: ht.kannada@htdigital.in