ಬಿಎಂಟಿಸಿಯ 2500 ನಿರ್ವಾಹಕರ ಹುದ್ದೆಗಳಿಗೆ ಮಾ 10 ರಿಂದ ಅರ್ಜಿ ಸಲ್ಲಿಸಿ; ವೇತನ, ವಿದ್ಯಾರ್ಹತೆ, ಅರ್ಜಿ ತುಂಬುವ ವಿಧಾನ ಇಲ್ಲಿದೆ
BMTC Recruitment 2024: ಬಿಎಂಟಿಸಿಯಲ್ಲಿ 2500 ಕಂಡಕ್ಟರ್‌ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 10 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ವೇತನ, ವಿದ್ಯಾರ್ಹತೆ ಸೇರಿ ಪ್ರಮುಖ ಮಾಹಿತಿ ಇಲ್ಲಿದೆ.
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ-ಬಿಎಂಟಿಸಿಯಲ್ಲಿ 2500 ಕಂಡಕ್ಟರ್‌ಗಳ ಹುದ್ದೆಗಳನ್ನು ಭರ್ತಿ (BMTC Recruitment 2024) ಮಾಡಲು ನಿರ್ಧರಿಸಲಾಗಿದ್ದು, ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಈ ನೇಮಕಾತಿ ಪ್ರಕ್ರಿಯೆಯನ್ನು ನಡೆಸಲಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಮಾರ್ಚ್ 10 ರಿಂದ ನಿರ್ವಾಹಕ ಹುದ್ದೆಗಳಿಗೆ (ಗ್ರೇಡ್ 3) ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡಲು ಆಸಕ್ತಿ ಇರುವವರು ಅರ್ಜಿ ಸಲ್ಲಿಸಬಹುದಾಗಿದ್ದು, ಒಟ್ಟು 2500 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಪರೀಕ್ಷೆಯಲ್ಲಿ ಉತೀರ್ಣರಾಗಿ ಹುದ್ದೆಗೆ ಆಯ್ಕೆಯಾಗುವ ನಿರ್ವಾಹಕರಿಗೆ ಪ್ರತಿ ತಿಂಗಳು 18,660-25,300 ರೂಪಾಯಿವರೆಗೆ ವೇತನನ್ನು ನೀಡಲಾಗುತ್ತದೆ.
ಬಿಎಂಟಿಸಿ ನೇಮಕಾತಿ 2024: 2500 ನಿರ್ವಾಹಕರ ಹುದ್ದೆಗಳಿಗೆ ಸಂಬಂಧಿಸಿದ ವಿವರಗಳು
ವಿದ್ಯಾರ್ಹತೆ:
- ಪಿಯುಸಿಯಲ್ಲಿ (ಕಲೆ, ವಾಣಿಜ್ಯ ಮತ್ತು ವಿಜ್ಞಾನ) ಉತ್ತೀರ್ಣರಾಗಿರಬೇಕು
- 12ನೇ ತರಗತಿ ಐಸಿಎಸ್‌ಸಿ, ಸಿಬಿಎಸ್‌ಸಿಯಲ್ಲಿ ತೇರ್ಗಡೆಯಾಗಿರಬೇಕು
- ತತ್ಸಮಾನ ವಿದ್ಯಾರ್ಹತೆ ಅಂದರೆ, ತಾಂತ್ರಿಕ ಶಿಕ್ಷಣ ಇಲಾಖೆಯಿಂದ 3 ವರ್ಷಗಳ ಡಿಪ್ಲೋಮಾದಲ್ಲಿ ಉತ್ತೀರ್ಣರಾಗಿರಬೇಕು (ಮುಕ್ತ ಶಾಲೆ ಅಥವಾ ಮುಕ್ತ ವಿಶ್ವವಿದ್ಯಾಲಯದಿಂದ ಪಡೆದ ಪಿಯುಸಿ ಅಥವಾ 12ನೇ ತರಗತಿ ಅಥವಾ ಜೆಒಸಿ, ಜೆಎಲ್‌ಸಿ ಕೋರ್ಸ್‌ಗಳನ್ನು ಹೊರತುಪಡಿಸಿ)
- ಮಾನ್ಯತೆ ಹೊಂದಿರುವ ಮೋಟಾರು ವಾಹನ ನಿರ್ವಾಹಕ ಪರವಾನಗಿ ಮತ್ತು ಬ್ಯಾಡ್ಜ್ ಅನ್ನು ಹೊಂದಿರಬೇಕು
ಬಿಎಂಟಿಸಿ ನೇಮಕಾತಿ 2024: 2500 ನಿರ್ವಾಹಕರ ಹುದ್ದೆಗಳಿಗೆ ವಯೋಮಿತಿ
- ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಈ ಕೆಳಕಂಡಂತೆ ಕನಿಷ್ಠ ವಯೋಮಿತಿ ಹೊಂದಿರಬೇಕು ಮತ್ತು ಗರಿಷ್ಠ ವಯೋಮಿತಿಯನ್ನು ಮೀರಿರಬಾರದು.
- ಸಾಮಾನ್ಯ ವರ್ಗಕ್ಕೆ ಕನಿಷ್ಠ 18 ವರ್ಷ ವಯೋಮಿತಿ ಗರಿಷ್ಠ 35 ವರ್ಷಗಳು
- 2ಎ, 2ಬಿ, 3ಎ, 3ಬಿ ವರ್ಗಕ್ಕೆ ಕನಿಷ್ಠ 18 ವರ್ಷ ಗರಿಷ್ಠ 38 ವರ್ಷಗಳು
- ಪರಿಶಿಷ್ಟಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಕನಿಷ್ಠ 18 ವರ್ಷ, ಗರಿಷ್ಠ 40 ವರ್ಷಗಳು
- ಮಾಜಿ ಸೈನಿಕ, ಇಲಾಖಾ ಅಭ್ಯರ್ಥಿ ಕನಿಷ್ಠ ಸ್ಪಷ್ಟಪಡಿಸಿಲ್ಲ, ಗರಿಷ್ಠ 45 ವರ್ಷಗಳು
ಬಿಎಂಟಿಸಿ ನೇಮಕಾತಿ 2024: 2500 ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಶುಲ್ಕ
- ಸಾಮಾನ್ಯ ಅರ್ಹತೆ ಮತ್ತು ಇತರೆ ಪ್ರವರ್ಗಗಳು (ಪ್ರವರ್ಗ-2ಎ, 2ಬಿ, 3ಎ, 3ಬಿ)ಗೆ ಅರ್ಜಿ ಶುಲ್ಕ 750 ರೂಪಾಯಿ (ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ)
- ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1, ಮಾಜಿ ಸೈನಿಕ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕ 500 ರೂಪಾಯಿ (ಪಾವತಿಸಿದ ಶುಲ್ಕವನ್ನು ಹಿಂದಿರುಗಿಸಲಾಗುವುದಿಲ್ಲ) ಮಾರ್ಚ್ 13 ರೊಳಗೆ ಶುಲ್ಕ ಪಾವತಿಸಬೇಕು
ಬಿಎಂಟಿಸಿ ನೇಮಕಾತಿ 2024: 2500 ನಿರ್ವಾಹಕರ ಹುದ್ದೆಗಳ ಆಯ್ಕೆ ಪ್ರಕ್ರಿಯೆ
- ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಬಿಎಂಟಿಸಿ 2500 ನಿರ್ವಾಹಕರನ್ನು ಭರ್ತಿ ಮಾಡಿಕೊಳ್ಳಲು ನಿರ್ಧರಿಸಿದೆ
ಇದನ್ನೂ ಓದಿ: 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ; ಮಾರ್ಚ್ 4 ರಿಂದ ಅರ್ಜಿ ಸಲ್ಲಿಸಿ
ಬಿಎಂಟಿಸಿ ನೇಮಕಾತಿ 2024: 2500 ನಿರ್ವಾಹಕರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ?
ಬಿಎಂಟಿಸಿ ನೇಮಕಾತಿ ಅಧಿಸೂಚನೆ 2024 ಅನ್ನು ಸಂಪೂರ್ಣವಾಗಿ ಪರಿಶೀಲಿಸಿ. ಅಭ್ಯರ್ಥಿ ಅರ್ಹತಾ ಮಾನದಂಡಗಳನ್ನು ಪೂರೈಸುತ್ತಾರೆಯೇ ಎಂಬುದನ್ನು ಖಚಿತ ಪಡಿಸಿಕೊಂಡು ಅರ್ಜಿ ಸಲ್ಲಿಕೆಗೆ ಮುಂದಾಗಿ. ಆನ್‌ಲೈನ್‌ನಲ್ಲಿ ಮಾರ್ಚ್ 10 ರಿಂದ ಅರ್ಜಿಸಲ್ಲಿಸಬಹುದಾಗಿದ್ದು, ಏಪ್ರಿಲ್ 10 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಮಾರ್ಚ್ 13 ಶುಲ್ಕ ಪಾವತಿಗೆ ಕೊನೆಯ ದಿನವಾಗಿದೆ. ಬಿಎಂಟಿಸಿಯ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿ.