ಕನ್ನಡ ಸುದ್ದಿ  /  Lifestyle  /  Employment News Boi Recruitment 2024 Apply For Bank Of India Officer Post Link Other Details Here Rmy

BOI Recruitment 2024: ಏಪ್ರಿಲ್ 10 ರೊಳಗೆ ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಿ; ಲಿಂಕ್ ಇಲ್ಲಿದೆ

ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಸಕ್ತ ಅರ್ಹ ಅಭ್ಯರ್ಥಿಗಳು bankofindia.co.in ಅಧಿಕೃತ ವೆಬ್‌ಸೈಟ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ.

ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ.
ಬ್ಯಾಂಕ್ ಆಫ್ ಇಂಡಿಯಾ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಡೆ ನೀಡಿರುವ ಲಿಂಕ್ ಮೂಲಕ ಅರ್ಜಿ ಸಲ್ಲಿಸಿ.

ಬೆಂಗಳೂರು: ಬ್ಯಾಂಕ್ ಆಫ್ ಇಂಡಿಯಾ ಆಫೀಸರ್ ಹುದ್ದೆಗಳಿಗೆ (Bank of India Officer Recruitment) ಅರ್ಜಿ ಆಹ್ವಾನಿಸಿದೆ. ಆಸಕ್ತರು ಹಾಗೂ ಅರ್ಹ ಅಭ್ಯರ್ಥಿಗಳು ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್ bankofindia.co.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿ ಡ್ರೈವ್ ಸ್ಕೇಲ್ 4 ರವರೆಗೆ ವಿವಿಧ ವಿಭಾಗಗಳಲ್ಲಿ ಅಧಿಕಾರಿಗಳನ್ನು ಭರ್ತಿ ಮಾಡಲಾಗುತ್ತಿದೆ. ಅರ್ಜಿ ಸಲ್ಲಿಕೆಯ ಪ್ರಕ್ರಿಯೆಯು ಮಾರ್ಚ್ 27ರ ಬುಧವಾರದಿಂದ ಪ್ರಾರಂಭವಾಗಿದ್ದು, ಏಪ್ರಿಲ್ 10 ರ ಬುಧವಾರ ಅರ್ಜಿ ಸಲ್ಲಿಕೆಯ ಪ್ರಕ್ರಿಯೆ ಕೊನೆಗೊಳ್ಳುತ್ತದೆ. ಅರ್ಹತೆ, ಆಯ್ಕೆ ಪ್ರಕ್ರಿಯೆ ಮತ್ತು ಇತರ ವಿವರಗಳನ್ನು ಇಲ್ಲಿ ನೀಡಲಾಗಿದೆ.

ಬಿಒಐ ಅಧಿಕಾರಿಗಳ ನೇಮಕಾತಿಯ ಅರ್ಹತಾ ಮಾನದಂಡಗಳ ವಿವರ

ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆ ಮತ್ತು ವಯಸ್ಸಿನ ಮಿತಿಯನ್ನು ಈ ಮೂಲಕ ಪರಿಶೀಲಿಸಬಹುದು.

ಬಿಒಐ ಅಧಿಕಾರಿಗಳ ನೇಮಕಾತಿಯ ಆಯ್ಕೆ ಪ್ರಕ್ರಿಯೆ

ಆನ್‌ಲೈನ್ ಪರೀಕ್ಷೆ ಮತ್ತು ಅಥವಾ ವೈಯಕ್ತಿಕ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆನ್‌ಲೈನ್ ಪರೀಕ್ಷೆಯು ಇಂಗ್ಲಿಷ್ ಭಾಷೆ, ಹುದ್ದೆಗೆ ಸಂಬಂಧಿಸಿದ ವೃತ್ತಿಪರ ಜ್ಞಾನ ಮತ್ತು ಬ್ಯಾಂಕಿಂಗ್ ಉದ್ಯಮಕ್ಕೆ ವಿಶೇಷ ಉಲ್ಲೇಖದೊಂದಿಗೆ ಸಾಮಾನ್ಯ ಜಾಗೃತಿಯ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ. ಇಂಗ್ಲಿಷ್ ಭಾಷೆಯ ಪರೀಕ್ಷೆಯನ್ನು ಹೊರತುಪಡಿಸಿ ಮೇಲಿನ ಪರೀಕ್ಷೆಗಳು ದ್ವಿಭಾಷಾ ಮಾಧ್ಯಮದಲ್ಲಿ ಲಭ್ಯವಿರುತ್ತವೆ. ಅಂದರೆ ಇಂಗ್ಲಿಷ್ ಮತ್ತು ಹಿಂದಿ. ಇಂಗ್ಲಿಷ್ ಭಾಷೆಯ ಪರೀಕ್ಷೆಯು ಅರ್ಹತಾ ಸ್ವರೂಪದ್ದಾಗಿರುತ್ತದೆ. ಅಂದರೆ ಮೆರಿಟ್ ಪಟ್ಟಿಯನ್ನು ತಯಾರಿಸುವಾಗ ಇಂಗ್ಲಿಷ್ ಭಾಷೆಯಲ್ಲಿ ಪಡೆದ ಅಂಕಗಳನ್ನು ಸೇರಿಸಲಾಗುವುದಿಲ್ಲ.

ಬಿಒಐ ಅಧಿಕಾರಿಗಳ ನೇಮಕಾತಿಯ ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಅಭ್ಯರ್ಥಿಗಳಿಗೆ 850 ರೂಪಾಯಿ ಶುಲ್ಕವಿರುತ್ತದೆ. ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 175 ರೂಪಾಯಿ ಶುಲ್ಕವಿದೆ. ಅರ್ಜಿ ಶುಲ್ಕವನ್ನು ಮಾಸ್ಟರ್ / ವೀಸಾ / ರುಪೇ ಕ್ರೆಡಿಟ್ ಕಾರ್ಡ್‌ಗಳು, ಡೆಬಿಟ್ ಕಾರ್ಡ್‌ಗಳು, ಇಂಟರ್ನೆಟ್ ಬ್ಯಾಂಕಿಂಗ್, ಕ್ಯಾಶ್ ಕಾರ್ಡ್‌ಗಳು / ಮೊಬೈಲ್ ವ್ಯಾಲೆಟ್‌ಗಳು, ಕ್ಯೂಆರ್ ಅಥವಾ ಯುಪಿಐ ಬಳಸಿ ಮಾತ್ರ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್‌ಸೈಟ್‌ bankofindia.co.in ಪರಿಶೀಲಿಸಬಹುದು.

30 ಐಐಟಿಎಂ ರಿಸರ್ಚ್ ಅಸೋಸಿಯೇಟ್, ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪುಣೆಯ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟ್ರಾಪಿಕಲ್ ಮೆಟಿಯರಾಲಜಿ (ಐಐಟಿಎಂ) 30 ಐಐಟಿಎಂ ರಿಸರ್ಚ್ ಅಸೋಸಿಯೇಟ್ ಮತ್ತು ರಿಸರ್ಚ್ ಫೆಲೋ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಏಪ್ರಿಲ್ 15 ಕೊನೆಯ ದಿನವಾಗಿದೆ. ಆಸಕ್ತರು ಟ್ರಾಪಿಕಲ್ tropmet.res.in ಅಧಿಕೃತ ವೆಬ್‌ಸೈಟ್‌ನಲ್ಲಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದು. ಐಐಟಿಎಂ ನೇಮಕಾತಿ 2024 ಖಾಲಿ ಹುದ್ದೆಗಳ ವಿವರ: 30 ಹುದ್ದೆಗಳನ್ನು ಭರ್ತಿ ಮಾಡಲು ಈ ನೇಮಕಾತಿ ಡ್ರೈವ್ ನಡೆಸಲಾಗುತ್ತಿದ್ದು, ಇದರಲ್ಲಿ 10 ಹುದ್ದೆಗಳು ಐಐಟಿಎಂ ರಿಸರ್ಚ್ ಅಸೋಸಿಯೇಟ್ ಮತ್ತು 20 ಹುದ್ದೆಗಳು ಐಐಟಿಎಂ ರಿಸರ್ಚ್ ಫೆಲೋ ಹುದ್ದೆಗಳಾಗಿವೆ.