ಕನ್ನಡ ಸುದ್ದಿ  /  Lifestyle  /  Employment News Kpsc Apply For 384 Karnataka Gazetted Probationers From March 4 Fees And Other Details Here Rmy

384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್‌ ಹುದ್ದೆಗಳ ಭರ್ತಿಗೆ ಕೆಪಿಎಸ್‌ಸಿ ಅಧಿಸೂಚನೆ; ಮಾರ್ಚ್ 4 ರಿಂದ ಅರ್ಜಿ ಸಲ್ಲಿಸಿ

KPSC Recruitment 2024: ಕರ್ನಾಟಕ ಲೋಕಸೇವಾ ಆಯೋಗ 384 ಗೆಜೆಟೆಡ್ ಪ್ರೊಬೇಷನರ್‌ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ವಿಧಾನ, ಕೊನೆಯ ದಿನಾಂಕ, ಶುಲ್ಕ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ.

ಕರ್ನಾಟಕ ಲೋಕ ಸೇವಾ ಆಯೋಗವು 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕರ್ನಾಟಕ ಲೋಕ ಸೇವಾ ಆಯೋಗವು 384 ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ-ಕೆಪಿಎಸ್‌ಸಿ 2023-24ನೇ ಸಾಲಿನ 384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಭರ್ತಿಗಾಗಿ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಮಾರ್ಚ್ 4 ರಿಂದ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ ಏಪ್ರಿಲ್ 3 ಕೊನೆಯ ದಿನವಾದಿದೆ.

ಕೆಪಿಎಸ್‌ಸಿ ಪ್ರಭಾರಿ ಕಾರ್ಯದರ್ಶಿ ಡಾ ರಾಕೇಶ್ ಕುಮಾರ್ ಕೆ ಅವರು ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ಕುರಿತು ಇಂದು ಅಧಿಸೂಚನೆ ಹೊರಡಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಕೆಪಿಸಿಎಸ್‌ ಅಧಿಕೃತ ವೆಬ್‌ಸೈಟ್ kpsc.kar.nic.in ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

ಕೆಪಿಎಸ್‌ಸಿ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ: ಹುದ್ದೆಗಳ ವಿವರ

ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು (ಹೈದರಾಬಾದ್ ಕರ್ನಾಟಕ) ಸೇರಿದಂತೆ ಒಟ್ಟು 384 ಹುದ್ದೆಗಳ ಪೈಕಿ ಗ್ರೂಪ್ ಎ 159 ಹಾಗೂ ಗ್ರೂಬ್ ಬಿಗೆ 225 ಹುದ್ದೆಗಳಿವೆ. ಕಲ್ಯಾಣ ಕರ್ನಾಟಕ ವೃಂದದ ಹುದ್ದೆಗಳು 77 ಇವೆ.

ಕೆಪಿಎಸ್‌ಸಿ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ: ವಯೋಮೀತಿ

ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಕನಿಷ್ಠ 21 ವರ್ಷ ಮೇಲ್ಪಟ್ಟವರು ಅರ್ಜಿ ಸಲ್ಲಿಕೆಗೆ ಅರ್ಹರಾಗಿರುತ್ತಾರೆ. ಸಾಮಾನ್ಯ ವರ್ಗದವರಿಗೆ ಗರಿಷ್ಠ ವಯೋಮಿತಿ 38 ವರ್ಷ, ಪ್ರವರ್ಗ 2ಎ, 2ಬಿ, 3ಎ, 3ಬಿಯವರಿಗೆ 41 ವರ್ಷ. ಎಸ್ಸಿ, ಎಸ್ಟಿ ಹಾಗೂ ಪ್ರವರ್ಗ-1 ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 43 ವರ್ಷ.

ಕೆಪಿಎಸ್‌ಸಿ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ: ಪರೀಕ್ಷೆ

384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ 2024ರ ಮೇ 5 ರಂದು ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಸಲು ಕೆಪಿಸಿಎಸ್‌ ಅಧಿಕೃತ ವೆಬ್‌ಸೈಟ್ kpsc.kar.nic.in ಗೆ ಭೇಟಿ ನೀಡಿ ನಿಮ್ಮ ವೈಯಕ್ತಿಕ ವಿವರಗಳೊಂದಿಗೆ ಖಾತೆಯನ್ನು ತೆರೆಯಿರಿ. ಒಂದು ವೇಳೆ ಈಗಾಗಲೇ ಖಾತೆಯನ್ನು ಹೊಂದಿದ್ದರೆ ಲಾಗ್ ಇನ್ ಆಗಿ ನಿಮ್ಮ ಶೈಕ್ಷಣಿಕ ಅರ್ಹತೆಗಳು, ವೈಯಕ್ತಿಕ ವಿವರಗಳು ಹಾಗೂ ಅಗತ್ಯವಿರುವ ಎಲ್ಲಾ ಮಾಹಿತಿಯೊಂದಿಗೆ ಮಾರ್ಚ್ 4 ರಿಂದ ಅರ್ಜಿ ಭರ್ತಿ ಮಾಡಿ.

ಕೆಪಿಎಸ್‌ಸಿ ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳ ನೇಮಕಾತಿ: ಪೂರ್ವಭಾವಿ ಪರೀಕ್ಷೆ

384 ಕರ್ನಾಟಕ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆಯ ವಿವರಗಳನ್ನು ನೋಡುವುದಾದರೆ ಸಾಮಾನ್ ಅಧ್ಯಯನದ ಎರಡು ಪತ್ರಿಕೆಗಳನ್ನು ಒಳಗೊಂಡಿರುತ್ತದೆ. ಇದರಲ್ಲಿ ಪ್ರಸ್ತುತ ಘಟನೆಗಳು, ಇತಿಹಾಸ, ಭೌಗೋಳಿಕತೆ, ಭಾರತೀಯ ರಾಜಕೀಯ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿ, ಪರಿಸರ ವಿಜ್ಞಾನ ಹಾಗೂ ಹವಾಮಾನ ಬದಲಾವಣೆಯ ಸಮಸ್ಯೆ ಹಾಗೂ ಇತರೆ ವಿಷಯಗಳನ್ನು ಒಳಗೊಂಡಿರುತ್ತದೆ. ಮುಖ್ಯ ಪರೀಕ್ಷೆ ಹಾಗೂ ವ್ಯಕ್ತಿತ್ವ ಎಂಬ ಮೂರು ಹಂತಗಳಲ್ಲಿ ನೇಮಕಾತಿ ನಡೆಯಲಿದೆ.

(This copy first appeared in Hindustan Times Kannada website. To read more like this please logon to kannada.hindustantimes.com )