ಫೆ 25ರೊಳಗೆ 1025 ಪಿಎನ್‌ಬಿ ಸ್ಪೆಷಲ್ ಆಫೀಸರ್ ಹುದ್ದಗಳಿಗೆ ಅರ್ಜಿ ಸಲ್ಲಿಸಿ; ಇಲ್ಲಿದೆ ಲಿಂಕ್ -PNB SO Recruitment 2024
ಕನ್ನಡ ಸುದ್ದಿ  /  ಜೀವನಶೈಲಿ  /  ಫೆ 25ರೊಳಗೆ 1025 ಪಿಎನ್‌ಬಿ ಸ್ಪೆಷಲ್ ಆಫೀಸರ್ ಹುದ್ದಗಳಿಗೆ ಅರ್ಜಿ ಸಲ್ಲಿಸಿ; ಇಲ್ಲಿದೆ ಲಿಂಕ್ -Pnb So Recruitment 2024

ಫೆ 25ರೊಳಗೆ 1025 ಪಿಎನ್‌ಬಿ ಸ್ಪೆಷಲ್ ಆಫೀಸರ್ ಹುದ್ದಗಳಿಗೆ ಅರ್ಜಿ ಸಲ್ಲಿಸಿ; ಇಲ್ಲಿದೆ ಲಿಂಕ್ -PNB SO Recruitment 2024

PNB SO Recruitment 2024: ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ 1025 ಸ್ಪೆಷಲ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಾಳೆ (ಫೆಬ್ರವರಿ 25, ಭಾನುವಾರ) ಕೊನೆಯದಿವಾಗಿದೆ. ಇಂದೇ ಅರ್ಜಿ ಸಲ್ಲಿಸಲು ಇಲ್ಲಿದೆ ಲಿಂಕ್.

ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 1025 ಸ್ಪೆಷಲ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ನಾಳೆ (ಫೆಬ್ರವರಿ 25, ಭಾನುವಾರ) ಕೊನೆಯದಿವಾಗಿದೆ.
ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ 1025 ಸ್ಪೆಷಲ್ ಆಫೀಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ನಾಳೆ (ಫೆಬ್ರವರಿ 25, ಭಾನುವಾರ) ಕೊನೆಯದಿವಾಗಿದೆ.

ಉದ್ಯೋಗಾಕಾಂಕ್ಷಿಗಳು ಗಮನಿಸಬೇಕಾದ ಮುಖ್ಯ ಸುದ್ದಿ ಇದಾಗಿದ್ದು, ಪಂಜಾಬ್ ನ್ಯಾಷನಲ್ ಬ್ಯಾಂಕ್‌-ಪಿಎನ್‌ಬಿಯಲ್ಲಿ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸುವ ಕೊನೆಯ ದಿನ ನಾಳೆಗೆ (ಫೆಬ್ರವರಿ 25, ಭಾನುವಾರ) ಮುಕ್ತಾಯವಾಗುತ್ತಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕ್‌ನ ಅಧಿಕೃತ ವೆಬ್‌ಸೈಟ್ pnbindia.in ಗೆ ಭೇಟಿ ನೀಡಿ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಈ ನೇಮಕಾತಿಯ ಪ್ರಕ್ರಿಯೆಯಲ್ಲಿ 1025 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ಆನ್‌ಲೈನ್ ಪರೀಕ್ಷೆಯ ತಾತ್ಕಾಲಿಕ ದಿನಾಂಕವನ್ನು 2024ರ ಮಾರ್ಚ್ ಅಥವಾ ಏಪ್ರಿಲ್‌ನಲ್ಲಿ ಪ್ರಕಟಿಸಲಾಗುತ್ತದೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಈ ಕೆಳಗಿನ ಹಂತಗಳನ್ನು ಅನುಸರಿಸಬಹುದು.

ಪಿಎನ್‌ಬಿ ಎಸ್ಒ ನೇಮಕಾತಿ 2024: ಅರ್ಜಿ ಸಲ್ಲಿಸುವುದು ಹೇಗೆ

  • pnbindia.in ಪಿಎನ್‌ಬಿ ಅಧಿಕೃತ ವೆಬ್‌ಸೈಟ್‌ಗೆ ಭೇಟಿ ನೀಡಿ
  • ಮುಖಪುಟದಲ್ಲಿ ಲಭ್ಯವಿರುವ ನೇಮಕಾತಿ ವಿಭಾಗದ ಮೇಲೆ ಕ್ಲಿಕ್ ಮಾಡಿ
  • ಪುಟದಲ್ಲಿ ಲಭ್ಯವಿರುವ ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳ ಲಿಂಕ್ ಅನ್ನು ಕ್ಲಿಕ್ ಮಾಡಿ.
  • ಹೊಸ ಡ್ರಾಪ್ ಡೌನ್ ಬಾಕ್ಸ್ ತೆರೆಯುತ್ತದೆ, ಅಲ್ಲಿ ಅಭ್ಯರ್ಥಿಗಳು ಅರ್ಜಿ ಆನ್‌ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ
  • ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ ಮತ್ತು ಅರ್ಜಿ ನಮೂನೆಯನ್ನು ಭರ್ತಿ ಮಾಡಿ
  • ಅರ್ಜಿ ಶುಲ್ಕವನ್ನು ಪಾವತಿಸಿ
  • ಸಬ್ಮಿಟ್ ಮೇಲೆ ಕ್ಲಿಕ್ ಮಾಡಿ ಮತ್ತು ಪುಟವನ್ನು ಡೌನ್ಲೋಡ್ ಮಾಡಿ
  • ಹೆಚ್ಚಿನ ಅಗತ್ಯಕ್ಕಾಗಿ ಅದರ ಹಾರ್ಡ್ ಕಾಪಿಯನ್ನು ನಿಮ್ಮ ಬಳಿಯೇ ಇರಿಸಿಕೊಳ್ಳಿ

ಇದನ್ನೂ ಓದಿ: ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 3000 ಅಪ್ರೆಂಟಿಸ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಕಡೆಯ ದಿನಾಂಕ ಸೇರಿ ಪೂರ್ಣ ವಿವರ ಇಲ್ಲಿದೆ

ಪಿಎನ್‌ಬಿ ಎಸ್ಒ ನೇಮಕಾತಿ 2024: ಅರ್ಜಿ ಶುಲ್ಕ

ಎಸ್ಸಿ/ಎಸ್ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 59 ರೂಪಾಯಿ, ಇತರೆ ವರ್ಗದ ಅಭ್ಯರ್ಥಿಗಳಿಗೆ 1,180 ರೂಪಾಯಿ ಅರ್ಜಿ ಶುಲ್ಕವಿರುತ್ತದೆ. ಡೆಬಿಟ್ ಕಾರ್ಡ್‌ (ರುಪೇ / ವೀಸಾ / ಮಾಸ್ಟರ್ ಕಾರ್ಡ್), ಕ್ರೆಡಿಟ್ ಕಾರ್ಡ್‌, ಇಂಟರ್ನೆಟ್ ಬ್ಯಾಂಕಿಂಗ್, ಐಎಂಪಿಎಸ್, ಕ್ಯಾಶ್ ಕಾರ್ಡ್‌ಗಳು / ಮೊಬೈಲ್ ವ್ಯಾಲೆಟ್‌ಗಳು ಅಥವಾ ಯುಪಿಐ ಬಳಸಿ ಪರದೆಯ ಮೇಲೆ ಕೇಳಲಾದ ಮಾಹಿತಿಯನ್ನು ಒದಗಿಸುವ ಮೂಲಕ ಶುಲ್ಕವನ್ನು ಪಾವತಿ ಮಾಡಬಹುದು. ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಪಂಜಾಬ್ ನ್ಯಾಷನಲ್ ಬ್ಯಾಂಕಿನ ಅಧಿಕೃತ ವೆಬ್‌ಸೈಟ್ pnbindia.in ಗೆ ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಪರಿಶೀಲಿಸಬಹುದು. ಪಿಎನ್‌ಬಿಯಲ್ಲಿ 1025 ಎಸ್‌ಒ ಹುದ್ದೆಗಳ ಭರ್ತಿಗೆ ಫೆಬ್ರವರಿ 7 ರಿಂದಲೇ ಅರ್ಜಿ ಸ್ವೀಕರಿಸಲಾಗುತ್ತಿದೆ.

ಸರ್ಕಾರಿ ಬ್ಯಾಂಕ್, ಕಚೇರಿ ಹಾಗೂ ಇತರೆ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಂಬಂಧ ಪಟ್ಟ ಇಲಾಖೆಗಳು ಅರ್ಜಿ ಆಹ್ವಾನಿಸುವ ಮಾಹಿತಿನ್ನು ''ಹಿಂದೂಸ್ತಾನ್ ಟೈಮ್ಸ್ ಕನ್ನಡ' ಸದಾ ನಿಮಗೆ ಮಾಹಿತಿಯನ್ನು ನೀಡುತ್ತಿರುತ್ತದೆ. ಉದ್ಯೋಗಕ್ಕೆ ಸಂಬಂಧಸಿ ಹೆಚ್ಚಿನ ಮಾಹಿತಿ ಹಾಗೂ ಹೊಸ ಅಪ್ಡೇಟ್‌ಗಳಿಗಾಗಿ ಹೆಚ್‌ಟಿ ಕನ್ನಡವನ್ನು ಫಾಲೋ ಮಾಡಿ.

(This copy first appeared in Hindustan Times Kannada website. To read more like this please logon to kannada.hindustantimes.com )

Whats_app_banner