Benefits of Capsicum: ನಾಲಿಗೆಗೆ ರುಚಿ ಮಾತ್ರವಲ್ಲ ಕ್ಯಾಪ್ಸಿಕಂ ಸೇವನೆಯಿಂದ ದೇಹಕ್ಕೆ ಎಷ್ಟೆಲ್ಲಾ ಉಪಯೋಗ ಇದೆ ನೋಡಿ
ಕ್ಯಾಪ್ಸಿಕಂನಲ್ಲಿ ಕಡಿಮೆ ಕೊಬ್ಬಿನಾಂಶವಿದ್ದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕ್ಯಾಪ್ಸಿಕಂ ತಿನ್ನುವುದರಿಂದ ಕೊಬ್ಬನ್ನು ಕರಗಿಸಲು ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ.
ಸಾಮಾನ್ಯವಾಗಿ ಎಲ್ಲರ ಮನೆಯಲ್ಲೂ ಕ್ಯಾಪ್ಸಿಕಂ ಬಳಸುತ್ತೇವೆ. ಇದು ಆಹಾರದ ರುಚಿಯನ್ನು ಹೆಚ್ಚಿಸುತ್ತದೆ, ಕ್ಯಾಪ್ಸಿಕಂ ತಿನ್ನುವುದರಿಂದ ಅನೇಕ ರೀತಿಯ ಪ್ರಯೋಜನಗಳಿವೆ. ಇದರಲ್ಲಿ ವಿಟಮಿನ್ ಹಾಗೂ ಪ್ರೋಟೀನ್ ಅಧಿಕವಾಗಿದೆ. ರೋಗ ನಿರೋಧಕ ಶಕ್ತಿ ಕೂಡಾ ಹೆಚ್ಚಾಗುತ್ತದೆ. ಕ್ಯಾಪ್ಸಿಕಂ ತಿನ್ನುವುದರಿಂದ ಇನ್ನೂ ಏನೆಲ್ಲಾ ಲಾಭಗಳಿವೆ ನೋಡೋಣ.
ಚಯಾಪಚಯ ಕ್ರಿಯೆಗೆ ಒಳ್ಳೆಯದು
ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ ನಿಮ್ಮ ಆಹಾರದಲ್ಲಿ ಹೆಚ್ಚು ಕ್ಯಾಪ್ಸಿಕಂ ಬಳಸಬಹುದು. ಕ್ಯಾಪ್ಸಿಕಂನಲ್ಲಿ ಕಡಿಮೆ ಕೊಬ್ಬಿನಾಂಶವಿದ್ದು ನಿಮ್ಮ ಚಯಾಪಚಯ ಕ್ರಿಯೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕ್ಯಾಪ್ಸಿಕಂ ತಿನ್ನುವುದರಿಂದ ಕೊಬ್ಬನ್ನು ಕರಗಿಸಲು ಮತ್ತು ತೂಕ ಇಳಿಸಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಕೆಂಪು ಕ್ಯಾಪ್ಸಿಕಂನಲ್ಲಿರುವ ಲೈಕೋಪೀನ್ ಎಂಬ ಫೈಟೊನ್ಯೂಟ್ರಿಯೆಂಟ್ ನಿಮ್ಮ ಹೃದಯವನ್ನು ಆರೋಗ್ಯವಾಗಿರಿಸುತ್ತದೆ. ಇದರಲ್ಲಿ ಫೋಲೇಟ್ ಮತ್ತು ವಿಟಮಿನ್ ಬಿ6 ಅಂಶವಿದೆ. ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾಪ್ಸಿಕಂ, ದೇಹವನ್ನು ಸ್ವತಂತ್ರ ರಾಡಿಕಲ್‌ಗಳನ್ನು ರಕ್ಷಿಸುವ ಉತ್ಕರ್ಷಣಾ ನಿರೋಧಕಗಳನ್ನು ಕೂಡಾ ಒಳಗೊಂಡಿದೆ.
ರೋಗ ನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ
ಕ್ಯಾಪ್ಸಿಕಂನಲ್ಲಿರುವ ವಿಟಮಿನ್ ಸಿ, ಸಂಧಿವಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ರೋಗನಿರೋಧಕ ಶಕ್ತಿಯನ್ನು ಸುಧಾರಿಸುತ್ತದೆ. ಇದು ಉರಿಯೂತವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ವಿಟಮಿನ್ ಸಿ ಹೇರಳವಾಗಿದೆ
ಕ್ಯಾಪ್ಸಿಕಂನಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ದೇಹವು ಕಬ್ಬಿಣವನ್ನು ಹೀರಿಕೊಳ್ಳುವಲ್ಲಿ ಇದು ಪ್ರಮುಖ ಪಾತ್ರ ವಹಿಸುತ್ತದೆ. ಇದು ದೈನಂದಿನ ವಿಟಮಿನ್ ಸಿ ಯ 300 ಪ್ರತಿಶತವನ್ನು ಹೊಂದಿರುತ್ತದೆ. ಕಬ್ಬಿಣದ ಕೊರತೆಯಿಂದ ಬಳಲುವವರಿಗೆ ಕ್ಯಾಪ್ಸಿಕಂ ಬಹಳ ಉಪಯೋಗಕಾರಿ. ಇದು ಚರ್ಮಕ್ಕೆ ಕೂಡಾ ಬಹಳ ಉಪಯುಕ್ತವಾಗಿದೆ. ಚರ್ಮದ ಆರೋಗ್ಯವನ್ನು ಸುಧಾರಿಸಲು, ಉದ್ದವಾದ ಹೊಳೆಯುವ ಕೂದಲನ್ನು ಪಡೆಯಲು ನಿಮ್ಮ ಆಹಾರದಲ್ಲಿ ಕ್ಯಾಪ್ಸಿಕಂ ಅನ್ನು ಹೆಚ್ಚಾಗಿ ಬಳಸಿ.
ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ
ಕ್ಯಾಪ್ಸಿಕಂ ಉರಿಯೂತದ ಪೋಷಕಾಂಶಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಒಳಗೊಂಡಿರುವುದರಿಂದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾಪ್ಸಿಕಂ ಸೇವಿಸುವುದರಿಂದ ಮೂತ್ರಕೋಶದ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುತ್ತದೆ. ಕ್ಯಾಪ್ಸಿಕಂನಲ್ಲಿರುವ ಕಿಣ್ವಗಳು ಅನ್ನನಾಳ ಮತ್ತು ಗ್ಯಾಸ್ಟ್ರಿಕ್ ಕ್ಯಾನ್ಸರನ್ನು ತಡೆಯಲು ಸಹಾಯ ಮಾಡುತ್ತದೆ.
ಉತ್ಕರ್ಷಣ ನಿರೋಧಕ ಗುಣಲಕ್ಷಣಗಳು ಹೆಚ್ಚಾಗಿವೆ
ಕ್ಯಾಪ್ಸಿಕಂನಲ್ಲಿ ಉತ್ಕರ್ಷಣಾ ನಿರೋಧಕಗಳು ಸಮೃದ್ಧವಾಗಿದೆ. ಫ್ರೀ ರಾಡಿಕಲ್‌ಗಳಿಂದ ಉಂಟಾಗುವ ಹಾನಿಯಿಂದ ದೇಹವನ್ನು ರಕ್ಷಿಸುತ್ತದೆ. ಫ್ರೀ ರಾಡಿಕಲ್‌ಗಳ ವಿರುದ್ಧ ಹೋರಾಡುವ ಮೂಲಕ, ಕ್ಯಾಪ್ಸಿಕಂ ಕಣ್ಣಿನ ಪೊರೆ ಮತ್ತು ಅಸ್ಥಿಸಂಧಿವಾತದಂತಹ ಕಾಯಿಲೆಗಳನ್ನು ಗುಣಪಡಿಸಲು ಸಹಾಯ ಮಾಡುತ್ತದೆ.
ವಿಭಾಗ