ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸ ಕುಡಿಯುವುದರಿಂದಾಗುವ ಅನುಕೂಲ, ಅನಾನುಕೂಲದ ಬಗ್ಗೆ ಇಲ್ಲಿದೆ ವಿವರವಾದ ಮಾಹಿತಿ
ಕನ್ನಡ ಸುದ್ದಿ  /  ಜೀವನಶೈಲಿ  /  ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸ ಕುಡಿಯುವುದರಿಂದಾಗುವ ಅನುಕೂಲ, ಅನಾನುಕೂಲದ ಬಗ್ಗೆ ಇಲ್ಲಿದೆ ವಿವರವಾದ ಮಾಹಿತಿ

ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸ ಕುಡಿಯುವುದರಿಂದಾಗುವ ಅನುಕೂಲ, ಅನಾನುಕೂಲದ ಬಗ್ಗೆ ಇಲ್ಲಿದೆ ವಿವರವಾದ ಮಾಹಿತಿ

ನೆಲ್ಲಿಕಾಯಿ ರಸವು ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಅಲ್ಲದೆ, ಇದು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಹೃದ್ರೋಗಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಇದರ ಹೆಚ್ಚಿನ ನಾರಿನಾಂಶ ಮತ್ತು ಪಾಲಿಫಿನಾಲ್‌ಗಳಂತಹ ಉತ್ಕರ್ಷಣ ನಿರೋಧಕಗಳು ನಮ್ಮ ದೇಹಕ್ಕೆ ಹಲವು ರೀತಿಯಲ್ಲಿ ಕೊಡುಗೆ ನೀಡುತ್ತದೆ.

ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ನೆಲ್ಲಿಕಾಯಿ ರಸ; ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕಿದೆ ಅದ್ಭುತ ಪ್ರಯೋಜನ
ಹಲವು ಆರೋಗ್ಯ ಸಮಸ್ಯೆಗಳಿಗೆ ರಾಮಬಾಣ ನೆಲ್ಲಿಕಾಯಿ ರಸ; ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ ದೇಹಕ್ಕಿದೆ ಅದ್ಭುತ ಪ್ರಯೋಜನ

ನೆಲ್ಲಿಕಾಯಿ ಮರವು ಭಾರತೀಯ ಸಂಸ್ಕೃತಿಯೊಂದಿಗೆ ಸಂಪೂರ್ಣವಾಗಿ ಬೆರೆಯುತ್ತದೆ. ಹಿಂದೂ ಪುರಾಣಗಳ ಪ್ರಕಾರ, ಒಮ್ಮೆ ಬ್ರಹ್ಮನು ವಿಷ್ಣುವಿನ ಧ್ಯಾನದಲ್ಲಿ ಮಗ್ನನಾಗಿದ್ದಾಗ, ಅವನ ಕಣ್ಣುಗಳಲ್ಲಿ ಕಣ್ಣೀರು ಹರಿಯಲು ಪ್ರಾರಂಭಿಸಿತು. ಈ ಕಣ್ಣೀರು ನೆಲದ ಮೇಲೆ ಬಿದ್ದಾಗ, ನೆಲ್ಲಿಕಾಯಿ ಗಿಡ ಮೊಳಕೆಯೊಡೆಯಿತು ಎಂದು ನಂಬಲಾಗಿದೆ. ಇದಕ್ಕಾಗಿ ಇದನ್ನು ಭಾರತೀಯ ನೆಲ್ಲಿಕಾಯಿ ಎಂದೇ ಕರೆಯಲಾಗುತ್ತದೆ. ಇದನ್ನು ವೈಜ್ಞಾನಿಕ ಭಾಷೆಯಲ್ಲಿ ಎಂಬ್ಲಿಕಾ ಮೈರೋಬಾಲನ್ ಎಂದು ಕರೆಯಲಾಗುತ್ತದೆ.

ನೆಲ್ಲಿಯು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿರುವ ಅದ್ಭುತ ಕಾಯಿ. ಆಯುರ್ವೇದದಲ್ಲಿ ಇದನ್ನು ಔಷಧಿಯಾಗಿ ಬಳಸಲಾಗುತ್ತದೆ. ಸಾಂಪ್ರದಾಯಿಕ ಔಷಧವು ಅತಿಸಾರ, ಕಾಮಾಲೆ ಮತ್ತು ಉರಿಯೂತದಂತಹ ಸಮಸ್ಯೆಗಳನ್ನು ಹೋಗಲಾಡಿಸುವಲ್ಲಿ ಸಹಕಾರಿಯಾಗಿದೆ. ನೆಲ್ಲಿಕಾಯಿಯನ್ನು ಮಿಠಾಯಿಗಳು, ಉಪ್ಪಿನಕಾಯಿ, ಪುಡಿ ಅಥವಾ ರಸದಂತಹ ವಿವಿಧ ರೂಪಗಳಲ್ಲಿ ಸೇವಿಸಬಹುದು.

ಇತ್ತೀಚಿನ ದಿನಗಳಲ್ಲಿ ಹಲವರು ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸವನ್ನು ಸೇವಿಸುತ್ತಿದ್ದಾರೆ. ಇದರಿಂದ ಅನೇಕ ಆರೋಗ್ಯ ಪ್ರಯೋಜನಗಳಿವೆ. ನೆಲ್ಲಿಕಾಯಿಯು ವಿಟಮಿನ್ ಸಿ ಯ ಸಮೃದ್ಧ ಮೂಲವಾಗಿದ್ದು, ಇದು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಅಲ್ಲದೆ ರೋಗನಿರೋಧಕ ಶಕ್ತಿಯು ಹೆಚ್ಚುವುದರಿಂದ ಬಹಳ ಬೇಡಿಕೆಯ ಪಾನೀಯವಾಗಿದೆ. ನೆಲ್ಲಿಕಾಯಿ ಜ್ಯೂಸ್‌ನೊಂದಿಗೆ ದಿನವನ್ನು ಪ್ರಾರಂಭಿಸುವುದರಿಂದ ಜೀರ್ಣಕಾರಿ ಆರೋಗ್ಯವನ್ನು ಉತ್ತೇಜಿಸುತ್ತದೆ.

ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸ ಕುಡಿಯುವುದರಿಂದ ಆಗುವ ಪ್ರಯೋಜನಗಳು

ನಿರ್ವಿಶೀಕರಣಕ್ಕೆ ಸಹಕಾರಿ: ನೆಲ್ಲಿಕಾಯಿ ರಸದೊಂದಿಗೆ ನಿಮ್ಮ ದಿನವನ್ನು ಪ್ರಾರಂಭಿಸುವುದು ದೇಹವನ್ನು ನಿರ್ವಿಷಗೊಳಿಸುವುದಕ್ಕೆ ಕೊಡುಗೆ ನೀಡುತ್ತದೆ. ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ ನೈಸರ್ಗಿಕ ಶುದ್ಧೀಕರಣ ಗುಣಲಕ್ಷಣಗಳು ಹೆಚ್ಚು ಪರಿಣಾಮಕಾರಿಯಾಗಿರುತ್ತದೆ ಎಂದು ನಂಬಲಾಗಿದೆ. ಇದು ದೇಹದ ಜೀರ್ಣಕಾರಿ ಪ್ರಕ್ರಿಯೆಗಳನ್ನು ಸುಲಭಗೊಳಿಸುತ್ತದೆ. ಇದು ಟಾಕ್ಸಿನ್ ಅನ್ನು ಹೆಚ್ಚು ಪರಿಣಾಮಕಾರಿಯಾಗಿ ಹೊರಹಾಕಲು ಅನುವು ಮಾಡಿಕೊಡುತ್ತದೆ. ಇದರಲ್ಲಿನ ಹೆಚ್ಚಿನ ಉತ್ಕರ್ಷಣ ನಿರೋಧಕ ಅಂಶವು ಹಾನಿಕಾರಕ ಸ್ವತಂತ್ರ ರಾಡಿಕಲ್‌ಗಳನ್ನು ತಟಸ್ಥಗೊಳಿಸಲು ಸಹಾಯ ಮಾಡುತ್ತದೆ ಮತ್ತು ನಿರ್ವಿಶೀಕರಣಗೊಳಿಸುವುದಕ್ಕೆ ಸಹಕಾರಿಯಾಗಿದೆ.

ತೂಕವನ್ನು ನಿರ್ವಹಿಸುವಲ್ಲಿ ಸಹಕಾರಿ: ನೆಲ್ಲಿಕಾಯಿ ಜ್ಯೂಸ್ ದೇಹದ ಚಯಾಪಚಯ ಮತ್ತು ಹಸಿವಿನ ಮೇಲೆ ಪ್ರಭಾವ ಬೀರುವುದರಿಂದ ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ದೇಹದ ಚಯಾಪಚಯವನ್ನು ಸುಲಭಗೊಳಿಸುತ್ತದೆ. ದೇಹದಲ್ಲಿನ ಕ್ಯಾಲೊರಿಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ಬರ್ನ್ ಮಾಡಲು ಸಹಾಯ ಮಾಡುತ್ತದೆ. ಅದರಲ್ಲಿನ ಹೆಚ್ಚಿನ ಫೈಬರ್ ಅಂಶವು ಹೊಟ್ಟೆ ತುಂಬಿದಂತಾಗುತ್ತದೆ. ಇದರಿಂದಾಗಿ ಅತಿಯಾಗಿ ತಿನ್ನುವುದನ್ನು ಕಡಿಮೆ ಮಾಡುತ್ತದೆ.

ದೇಹದಿಂದ ಉತ್ತಮ ಪೋಷಕಾಂಶಗಳ ಹೀರಿಕೊಳ್ಳುವಿಕೆ: ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಅನ್ನು ಸೇವಿಸುವ ಅಭ್ಯಾಸವು ಉತ್ತಮ ಪೋಷಕಾಂಶಗಳನ್ನು ಹೀರಿಕೊಳ್ಳಲು ಸಹಾಯ ಮಾಡುತ್ತದೆ. ಇದರಲ್ಲಿ ವಿಟಮಿನ್ ಸಿ ಇರುವುದರಿಂದ ಪ್ರಬಲವಾದ ಉತ್ಕರ್ಷಣ ನಿರೋಧಕವಾಗಿದೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಚರ್ಮದ ಆರೋಗ್ಯದಂತಹ ವಿವಿಧ ಆರೋಗ್ಯ ಪ್ರಯೋಜನಗಳಿಗೂ ಹೆಸರುವಾಸಿಯಾಗಿದೆ.

ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕುಡಿಯುವುದರಿಂದ ಅಡ್ಡಪರಿಣಾಮಗಳು

ಅಸಿಡಿಟಿಗೆ ಕಾರಣವಾಗಬಹುದು: ಜೀರ್ಣಕ್ರಿಯೆಯ ವಿಚಾರದಲ್ಲಿ ಸೂಕ್ಷ್ಮತೆ ಹೊಂದಿರುವ ಕೆಲವು ವ್ಯಕ್ತಿಗಳು ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ರಸವನ್ನು ಸೇವಿಸಿದಾಗ ಆಮ್ಲೀಯತೆ ಅಥವಾ ಅಸ್ವಸ್ಥತೆ ಉಂಟಾಗಬಹುದು. ಆಸಿಡ್ ರಿಫ್ಲಕ್ಸ್ ಅಥವಾ ಜಠರದ ಉರಿತ ಇರುವವರಿಗೆ ಇದು ದೊಡ್ಡ ಸಮಸ್ಯೆಯಾಗಿ ಕಾಡುತ್ತದೆ. ಅಂತಹ ಸಂದರ್ಭಗಳಲ್ಲಿ, ನಿಮ್ಮ ದಿನಚರಿಯಲ್ಲಿ ನೆಲ್ಲಿಕಾಯಿ ಜ್ಯೂಸ್ ಅನ್ನು ಸೇರಿಸುವ ಮೊದಲು ತಜ್ಞ ವೈದ್ಯರನ್ನು ಸಂಪರ್ಕಿಸುವುದು ಉತ್ತಮ. ಅವರು ನೀಡುವ ಸಲಹೆಗಳನ್ನು ಪಾಲಿಸುವುದು ಮುಖ್ಯವಾಗಿರುತ್ತದೆ.

ಹುಳಿ ರುಚಿಯು ಎಲ್ಲರಿಗೂ ಸರಿಹೊಂದುವುದಿಲ್ಲ: ನೆಲ್ಲಿಕಾಯಿ ರಸದಲ್ಲಿ ಹುಳಿ ರುಚಿಯಿರುವುದರಿಂದ ಇದನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಿದಾಗ ಎಲ್ಲರಿಗೂ ಸರಿಹೊಂದುವುದಿಲ್ಲ. ತೀಕ್ಷ್ಣವಾದ ರುಚಿಯನ್ನು ಕಡಿಮೆ ಮಾಡಲು ನೆಲ್ಲಿಕಾಯಿ ರಸಕ್ಕೆ ನೀರನ್ನು ಬೆರೆಸಬಹುದು. ಸಿಹಿಗಾಗಿ ಜೇನುತುಪ್ಪವನ್ನು ಮಿಶ್ರಣ ಮಾಡಿ, ಹುಳಿಯನ್ನು ಸಮತೋಲನಗೊಳಿಸಬಹುದು.

ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಏರಿಳಿತಗೊಳಿಸಬಹುದು: ಮಧುಮೇಹ ಹೊಂದಿರುವವರಿಗೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುವ ಸಾಮರ್ಥ್ಯವನ್ನು ಇದು ಹೊಂದಿದೆ. ಅಂದರೆ ಇದು ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ಪ್ರಭಾವಿಸುತ್ತದೆ. ಮಧುಮೇಹ ಇರುವವರು ತಮ್ಮ ಆಹಾರದಲ್ಲಿ ನೆಲ್ಲಿಕಾಯಿ ರಸವನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮುನ್ನ ತಮ್ಮ ಸಕ್ಕರೆ ಮಟ್ಟವನ್ನು ನಿಕಟವಾಗಿ ಮೇಲ್ವಿಚಾರಣೆ ಮಾಡುವುದು ಮುಖ್ಯ. ಯಾಕೆಂದರೆ, ಖಾಲಿ ಹೊಟ್ಟೆಯಲ್ಲಿ ಸೇವಿಸಿದರೆ, ರಕ್ತದಲ್ಲಿನ ಸಕ್ಕರೆ ಮಟ್ಟ ಏರುಪೇರಾಗುವ ಸಾಧ್ಯತೆಗಳಿರುತ್ತವೆ. ಹೀಗಾಗಿ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಮುನ್ನ ತಜ್ಞ ವೈದ್ಯರನ್ನು ಸಂಪರ್ಕಿಸುವುದು ಉತ್ತಮ.

Whats_app_banner