ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ: ಖಾಲಿ ಹೊಟ್ಟೆಯಲ್ಲಿ ಸೇವಿಸಿ ಪಪ್ಪಾಯಿ ಹಣ್ಣು, ಖಂಡಿತ ಸಿಗುತ್ತೆ ಪರಿಹಾರ-health tips benefits of eating papaya on an empty stomach how papaya relieves constipation naturally prk ,ಜೀವನಶೈಲಿ ಸುದ್ದಿ
ಕನ್ನಡ ಸುದ್ದಿ  /  ಜೀವನಶೈಲಿ  /  ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ: ಖಾಲಿ ಹೊಟ್ಟೆಯಲ್ಲಿ ಸೇವಿಸಿ ಪಪ್ಪಾಯಿ ಹಣ್ಣು, ಖಂಡಿತ ಸಿಗುತ್ತೆ ಪರಿಹಾರ

ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿದ್ದೀರಾ: ಖಾಲಿ ಹೊಟ್ಟೆಯಲ್ಲಿ ಸೇವಿಸಿ ಪಪ್ಪಾಯಿ ಹಣ್ಣು, ಖಂಡಿತ ಸಿಗುತ್ತೆ ಪರಿಹಾರ

ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಂದು ಬೌಲ್ ಪಪ್ಪಾಯಿ ಹಣ್ಣು ಸೇವಿಸುವುದರಿಂದ ಒಂದಲ್ಲ, ಎರಡಲ್ಲ ಹಲವು ಆರೋಗ್ಯ ಪ್ರಯೋಜನಗಳನ್ನು ಪಡೆಯುವಿರಿ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ಸೇವಿಸುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ದೊರಕುತ್ತವೆ ಅನ್ನೋದು ಇಲ್ಲಿದೆ:

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ಸೇವಿಸುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ದೊರಕುತ್ತವೆ ಅನ್ನೋದು ಇಲ್ಲಿದೆ:
ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ಸೇವಿಸುವುದರಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ದೊರಕುತ್ತವೆ ಅನ್ನೋದು ಇಲ್ಲಿದೆ: (Pixabay)

ಪೌಷ್ಟಿಕಾಂಶಗಳ ಆಗರವಾಗಿರುವ ಪಪ್ಪಾಯಿ ಹಣ್ಣಿನಲ್ಲಿ ಜೀವಸತ್ವಗಳು ಮತ್ತು ಖನಿಜಗಳು ಮತ್ತು ಪೊಟ್ಯಾಸಿಯಮ್, ಫೈಬರ್ ಮತ್ತು ಫೋಲೇಟ್‍ನಿಂದ ಸಮೃದ್ಧವಾಗಿದೆ. ಇದಲ್ಲದೆ, ಇದು ಪಪೈನ್ ಕಿಣ್ವವನ್ನು ಹೊಂದಿದ್ದು, ಅನೇಕ ಸಮಸ್ಯೆಗಳಿಂದ ಪರಿಹಾರವನ್ನು ನೀಡುತ್ತದೆ. ಪಪ್ಪಾಯಿಯು ವಿಟಮಿನ್ ಎ, ಸಿ ಮತ್ತು ಇ ಯಲ್ಲಿ ಸಮೃದ್ಧವಾಗಿದೆ. ದೇಹದಲ್ಲಿ ಆಕ್ಸಿಡೇಟಿವ್ ಒತ್ತಡವನ್ನು ಎದುರಿಸಲು ಸಹಾಯ ಮಾಡುತ್ತದೆ. ಪ್ರತಿದಿನ ಖಾಲಿ ಹೊಟ್ಟೆಯಲ್ಲಿ ಒಂದು ಬೌಲ್ ಪಪ್ಪಾಯಿಯನ್ನು ತಿನ್ನುವುದರಿಂದ ಒಂದಲ್ಲ, ಎರಡಲ್ಲ ಹಲವಾರು ಆರೋಗ್ಯ ಪ್ರಯೋಜನಗಳಿವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ತಿನ್ನುವುದರಿಂದ ಏನೇನು ಪ್ರಯೋಜನಗಳಿವೆ ಎಂಬುದು ಇಲ್ಲಿದೆ:

ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿ ಹಣ್ಣು ಸೇವಿಸುವುದರ ಆರೋಗ್ಯ ಪ್ರಯೋಜನಗಳು

ಮಲಬದ್ಧತೆ ತಡೆಯಲು ಪ್ರಯೋಜನಕಾರಿ: ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಹೊಟ್ಟೆಯ ಸಮಸ್ಯೆಗಳನ್ನು ನಿವಾರಿಸುವಲ್ಲಿ ಪರಿಣಾಮಕಾರಿಯಾಗಿದೆ. ಮಲಬದ್ಧತೆಯಿಂದ ಬಳಲುತ್ತಿರುವವರಿಗೆ ಈ ಹಣ್ಣು ಪ್ರಯೋಜನಕಾರಿ. ಪಪ್ಪಾಯಿಯಲ್ಲಿ ಫೈಬರ್‌ ಸಮೃದ್ಧವಾಗಿಕುವುದರಿಂದ, ಕರುಳಿನ ಚಲನೆಯನ್ನು ಸುಲಭಗೊಳಿಸುತ್ತದೆ ಮತ್ತು ಮಲಬದ್ಧತೆ ನಿವಾರಣೆಗೆ ಸಹಕಾರಿಯಾಗಿದೆ. ಖಾಲಿ ಹೊಟ್ಟೆಯಲ್ಲಿ ಪಪ್ಪಾಯಿಯನ್ನು ತಿನ್ನುವುದರಿಂದ ಅಜೀರ್ಣ ಮತ್ತು ಆಮ್ಲೀಯತೆಯು ಕಡಿಮೆಯಾಗುತ್ತದೆ.

ಚರ್ಮವನ್ನು ಕಾಂತಿಯುತವಾಗಿಸುವಲ್ಲಿ ಪ್ರಯೋಜನಕಾರಿ: ಪಪ್ಪಾಯಿಯಲ್ಲಿರುವ ಪೋಷಕಾಂಶಗಳು ಸತ್ತ ಚರ್ಮವನ್ನು (dead skin) ತೆಗೆದುಹಾಕುವಲ್ಲಿ ಪರಿಣಾಮಕಾರಿ. ಇದು ಸತ್ತ ಜೀವಕೋಶಗಳನ್ನು ತೆಗೆದುಹಾಕುತ್ತದೆ ಮತ್ತು ಅವುಗಳನ್ನು ತೇವಗೊಳಿಸುತ್ತದೆ. ರಂಧ್ರಗಳನ್ನು ಸ್ವಚ್ಛಗೊಳಿಸುತ್ತದೆ ಮತ್ತು ಸುಕ್ಕುಗಳನ್ನು ತಡೆಯುವಲ್ಲಿ ಪರಿಣಾಮಕಾರಿ.

ಮಧುಮೇಹಿಗಳಿಗೆ ಪ್ರಯೋಜನಕಾರಿ: ಆರೋಗ್ಯ ತಜ್ಞರ ಪ್ರಕಾರ, ಪಪ್ಪಾಯಿಯ ಸೇವನೆಯು ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿಯಾಗಿದೆ. ಪಪ್ಪಾಯಿಯಲ್ಲಿ ನಾರಿನಂಶ ಹೆಚ್ಚಿದ್ದು, ಸಕ್ಕರೆ ಅಂಶ ಕಡಿಮೆ ಇದೆ. ಖಾಲಿ ಹೊಟ್ಟೆಯಲ್ಲಿ ಈ ಹಣ್ಣನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಮತ್ತು ಸ್ಥಿರವಾಗಿರಲು ಸಹಾಯ ಮಾಡುತ್ತದೆ. ಮಧುಮೇಹಿಗಳು ಈ ಹಣ್ಣನ್ನು ಸೇವಿಸುವುದರಿಂದ ಆರೋಗ್ಯಕ್ಕೆ ಪ್ರಯೋಜನವನ್ನು ಪಡೆಯಬಹುದು.

ಹೃದಯದ ಆರೋಗ್ಯಕ್ಕೆ ಪ್ರಯೋಜನಕಾರಿ: ಪಪ್ಪಾಯಿಯಲ್ಲಿ ಪೊಟ್ಯಾಸಿಯಮ್, ಫೈಬರ್ ಮತ್ತು ವಿಟಮಿನ್‌ಗಳಂತಹ ಪೋಷಕಾಂಶಗಳಿವೆ. ಇದು ಹೃದಯಕ್ಕೆ ಪ್ರಯೋಜನಕಾರಿಯಾಗಿದೆ. ದೇಹದಲ್ಲಿನ ಕೆಟ್ಟ ಕೊಲೆಸ್ಟ್ರಾಲ್‌ನಿಂದ ಹೃದಯದ ಅಪಧಮನಿಗಳು ಮುಚ್ಚಿಹೋಗುತ್ತವೆ ಮತ್ತು ಕಿರಿದಾಗುತ್ತವೆ. ಹೀಗಾಗಿ ಪಪ್ಪಾಯಿಯನ್ನು ತಿನ್ನುವುದರಿಂದ ಕೊಲೆಸ್ಟ್ರಾಲ್ ಮಟ್ಟವನ್ನು ಸಾಮಾನ್ಯಗೊಳಿಸುತ್ತದೆ. ಪಪ್ಪಾಯಿಯು ಹೃದಯದಲ್ಲಿ ರಕ್ತದ ಹರಿವನ್ನು ಸುಧಾರಿಸುತ್ತದೆ.

ಮುಟ್ಟಿನ ಸೆಳೆತಕ್ಕೆ ಪ್ರಯೋಜನಕಾರಿ: ಹೆಣ್ಣುಮಕ್ಕಳಿಗೆ ಮುಟ್ಟಿನ ಸಮಯದಲ್ಲಿ ಸೆಳೆತ, ನೋವು ಕಾಣಿಸಿಕೊಳ್ಳುತ್ತದೆ. ಇದನ್ನು ನಿವಾರಿಸುವಲ್ಲಿ ಪಪ್ಪಾಯಿ ಹಣ್ಣು ಬಹಳ ಪ್ರಯೋಜನಕಾರಿಯಾಗಿದೆ. ಇದು ಉರಿಯೂತವನ್ನು ಕಡಿಮೆ ಮಾಡುವ ಗುಣಗಳನ್ನು ಹೊಂದಿದೆ. ಪಪ್ಪಾಯಿಯಲ್ಲಿರುವ ಕ್ಯಾರೋಟಿನ್ ಋತುಚಕ್ರವನ್ನು ನಿಯಂತ್ರಿಸುತ್ತದೆ. ಈ ಕ್ಯಾರೋಟಿನ್ ಈಸ್ಟ್ರೊಜೆನ್ ಹಾರ್ಮೋನ್ ಉತ್ಪಾದನೆಯನ್ನು ಹೆಚ್ಚಿಸುತ್ತದೆ.

ತೂಕ ಇಳಿಕೆಗೆ ಸಹಕಾರಿ: ತೂಕ ಇಳಿಸಲು ಪಪ್ಪಾಯಿ ಸಹಕಾರಿಯಾಗಿದೆ. ಇದನ್ನು ತಿನ್ನುವುದರಿಂದ ದೇಹಕ್ಕೆ ಶಕ್ತಿ ಸಿಗುತ್ತದೆ ಮತ್ತು ಹೆಚ್ಚುವರಿ ಕೊಬ್ಬು ಕಡಿಮೆಯಾಗುತ್ತದೆ. ಬೆಳಗ್ಗಿನ ಉಪಾಹಾರದಲ್ಲಿ ಪಪ್ಪಾಯಿಯನ್ನು ಚೂರುಗಳಾಗಿ ಕತ್ತರಿಸಿ, ಅದಕ್ಕೆ ಕಪ್ಪು ಉಪ್ಪು ಮತ್ತು ಕರಿಮೆಣಸು ಸೇರಿಸಿ ತಿನ್ನಬಹುದು.

mysore-dasara_Entry_Point