ಮಕ್ಕಳ ಆರೋಗ್ಯದ ಮೇಲೆ ಮ್ಯಾಜಿಕ್ ಮಾಡುತ್ತೆ ಮಿರಾಕಲ್ ಜ್ಯೂಸ್; ಇದನ್ನು ಕುಡಿಯುವುದರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ನೋಡಿ
ನಮ್ಮ ದೇಹವನ್ನು ಡಿಟಾಕ್ಸ್ ಮಾಡುವುದು ಅಥವಾ ನಿರ್ವಿಶಗೊಳಿಸುವುದರಿಂದ ಹಲವಾರು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು. ದೇಹ ನಿರ್ವಿಶಗೊಳಿಸಲು ಕೆಲವೊಂದು ಪಾನೀಯಗಳು ಸಹಾಯ ಮಾಡುತ್ತವೆ. ಅಂತಹ ಪಾನೀಯಗಳಲ್ಲಿ ಮಿರಾಕಲ್ ಜ್ಯೂಸ್ ಕೂಡ ಒಂದು. ಇದನ್ನು ಸೇವಿಸುವುದರಿಂದ ಮಕ್ಕಳ ಆರೋಗ್ಯಕ್ಕೆ ಹಲವು ಪ್ರಯೋಜನಗಳಿವೆ. ಇದನ್ನ ಮಾಡೋದು ಹೇಗೆ, ಇದರ ಪ್ರಯೋಜನಗಳೇನು ತಿಳಿಯಿರಿ.
ನಮ್ಮ ದೇಹವು ವಿಷಾಂಶಗಳಿಂದ ಕೂಡಿರುವುದರಿಂದ ಹಲವು ಆರೋಗ್ಯ ಸಮಸ್ಯೆಗಳು ಎದುರಾಗಬಹುದು. ಆ ಕಾರಣಕ್ಕೆ ದೇಹ ನಿರ್ವಿಶಗೊಳ್ಳುವ ಪಾನೀಯ, ಪದಾರ್ಥಗಳ ಸೇವನೆಗೆ ಹೆಚ್ಚು ಒತ್ತು ನೀಡಬೇಕು. ಕೆಲವೊಂದು ಪಾನೀಯಗಳನ್ನು ನಿರಂತರವಾಗಿ ಸೇವಿಸುವುದರಿಂದ ದೇಹವು ಬೇಗನೆ ನಿರ್ವಿಶಗೊಳ್ಳುತ್ತದೆ. ಮಾತ್ರವಲ್ಲ, ವಿವಿಧ ರೀತಿಯ ಆರೋಗ್ಯ ಸಮಸ್ಯೆಗಳು ದೇಹವನ್ನು ಬಾಧಿಸದಂತೆ ನೋಡಬಹುದು. ಅಂತಹ ಪಾನೀಯಗಳಲ್ಲಿ ಮಿರಾಕಲ್ ಜ್ಯೂಸ್ ಕೂಡ ಒಂದು. ಇದು ಮಕ್ಕಳ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಇದರಿಂದ ಮಕ್ಕಳನ್ನು ಪದೇ ಪದೇ ಕಾಡುವ ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು.
ಈ ಪಾನೀಯವು ದೇಹದಲ್ಲಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ, ಜೀರ್ಣಕ್ರಿಯೆ ಸುಧಾರಿಸಲು ಸಹಾಯ ಮಾಡುತ್ತದೆ. ದೇಹದ ಮೇಲೆ ಪವಾಡದ ರೀತಿ ಕೆಲಸ ಮಾಡುವುದರಿಂದ ಇದನ್ನು ಮಿರಾಕಲ್ ಜ್ಯೂಸ್ ಎಂದು ಕರೆಯುತ್ತಾರೆ. ಹಾಗಾದರೆ ಮಿರಾಕಲ್ ಜ್ಯೂಸ್ ಕುಡಿಯುವುದರಿಂದ ಏನೆಲ್ಲಾ ಪ್ರಯೋಜನಗಳಿವೆ, ಇದನ್ನು ಮಾಡೋದು ಹೇಗೆ ನೋಡಿ. ಇದು ಮಕ್ಕಳಿಗೆ ಬಹಳ ಪ್ರಯೋಜನಕಾರಿ.
ಏನಿದು ಮಿರಾಕಲ್ ಜ್ಯೂಸ್?
ಮಿರಾಕಲ್ ಜ್ಯೂಸ್ ವಿಶೇಷವಾಗಿ ಮಕ್ಕಳಿಗೆ ತುಂಬಾ ಪ್ರಯೋಜನಕಾರಿ ಎಂದು ರಣವೀರ್ ಅವರ ಪಾಡ್‌ಕಾಸ್ಟ್ ಶೋನಲ್ಲಿ ಪೌಷ್ಟಿಕತಜ್ಞ ಸುಮನ್ ಅಗರ್ವಾಲ್ ಹೇಳಿದ್ದಾರೆ. ಈ ಜ್ಯೂಸ್ ಕುಡಿಯುವುದರಿಂದ ನಿಮ್ಮ ದೇಹದಲ್ಲಿ ರಕ್ತದ ಪ್ರಮಾಣವನ್ನು ಹೆಚ್ಚಿಸಬಹುದು ಮತ್ತು ಇದರೊಂದಿಗೆ ದೇಹಕ್ಕೆ ಹಲವಾರು ಪೋಷಕಾಂಶಗಳು ಕೂಡ ಸಿಗುತ್ತದೆ ಎಂದು ಅವರು ಹೇಳಿದ್ದಾರೆ.
ಮಿರಾಕಲ್ ಜ್ಯೂಸ್ ಮಾಡುವುದು ಹೇಗೆ?
ಈ ಪಾನೀಯವನ್ನು ಟೊಮೆಟೊ, ದಾಳಿಂಬೆ, ನೆಲ್ಲಿಕಾಯಿ, ಕ್ಯಾರೆಟ್ ಮತ್ತು ನಾಲ್ಕನೇ ಒಂದು ಬೀಟ್ರೂಟ್‌ನಿಂದ ತಯಾರಿಸಲಾಗುತ್ತದೆ. ಇದಕ್ಕಾಗಿ, ಮೊದಲು ಎಲ್ಲವನ್ನೂ ಚೆನ್ನಾಗಿ ತೊಳೆದು ನಂತರ ದಾಳಿಂಬೆ, ಕ್ಯಾರೆಟ್ ಮತ್ತು ಬೀಟ್ರೂಟ್ ಅನ್ನು ಸಿಪ್ಪೆ ಸುಲಿದು ಚಿಕ್ಕದಾಗಿ ಹೆಚ್ಚಿಕೊಳ್ಳಿ. ನಂತರ ಮೇಲಿ ಹೇಳಿದ ಎಲ್ಲಾ ಸಾಮಗ್ರಿಗಳನ್ನು ಸೇರಿಸಿ ರುಬ್ಬಿಕೊಳ್ಳಿ, ನಂತರ ರಸವನ್ನು ಸೋಸಿಕೊಳ್ಳಿ. ಈ ರಸವನ್ನು ಬೆಳಗಿನ ಹೊತ್ತು ಕುಡಿಯುವ ಅಭ್ಯಾಸ ಮಾಡಬೇಕು. ಇದನ್ನು ಮಕ್ಕಳಿಗೂ ಕೊಡಬಹುದು.
ಮಿರಾಕಲ್ ಜ್ಯೂಸ್‌ನ ಪ್ರಯೋಜನಗಳು
* ಈ ಜ್ಯೂಸ್ ಅನೇಕ ಜೀವಸತ್ವಗಳು, ಖನಿಜಗಳು ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ಮಕ್ಕಳ ಮಾನಸಿಕ ಮತ್ತು ದೈಹಿಕ ಬೆಳವಣಿಗೆಗೆ ಸಹಾಯ ಮಾಡುತ್ತದೆ. ಕಬ್ಬಿಣದಂಶವಿರುವ ಬೀಟ್ರೂಟ್ ಮಕ್ಕಳಲ್ಲಿ ರಕ್ತಹೀನತೆಯನ್ನು ತಡೆಯುತ್ತದೆ.
* ಜ್ಯೂಸ್ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತದೆ. ಇದು ಮಕ್ಕಳ ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ಈ ಕಾರಣದಿಂದಾಗಿ, ಇದು ಸೋಂಕುಗಳು ಮತ್ತು ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ.
* ಈ ಜ್ಯೂಸ್ ವಿಟಮಿನ್ ಎ ಅನ್ನು ಹೊಂದಿರುತ್ತದೆ, ಇದು ದೃಷ್ಟಿ ಸುಧಾರಿಸಲು ಸಹಾಯ ಮಾಡುತ್ತದೆ. ಜ್ಯೂಸ್‌ನಲ್ಲಿರುವ ಆಂಟಿಆಕ್ಸಿಡೆಂಟ್‌ಗಳು ಮಕ್ಕಳ ಮೆದುಳಿನ ಬೆಳವಣಿಗೆಗೆ ಸಹಾಯ ಮಾಡುತ್ತದೆ ಮತ್ತು ಅವರ ಜ್ಞಾಪಕಶಕ್ತಿಯನ್ನು ಹೆಚ್ಚಿಸುತ್ತದೆ.
* ಟೊಮೆಟೊವನ್ನು ಜ್ಯೂಸ್ ಮಾಡಲು ಸಹ ಬಳಸಲಾಗುತ್ತದೆ. ಇದು ಲೈಕೋಪೀನ್ ಎಂಬ ಉತ್ಕರ್ಷಣ ನಿರೋಧಕವನ್ನು ಹೊಂದಿರುತ್ತದೆ, ಇದು ದೇಹದ ಜೀವಕೋಶಗಳಿಗೆ ಹಾನಿ ಮಾಡುವ ಸ್ವತಂತ್ರ ರಾಡಿಕಲ್ಗಳೊಂದಿಗೆ ಹೋರಾಡುತ್ತದೆ.
ಮಕ್ಕಳು ಪದೇ ಪದೇ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರೆ ಮಕ್ಕಳಿಗೆ ಮಿರಾಕಲ್ ಜ್ಯೂಸ್ ಕುಡಿಸುವ ಅಭ್ಯಾಸ ಮಾಡಿ. ಇದರಿಂದ ಕೆಲವೇ ದಿನಗಳಲ್ಲಿ ಮಕ್ಕಳ ಆರೋಗ್ಯ ಸಮಸ್ಯೆಗಳು ನಿವಾರಣೆಯಾಗುತ್ತದೆ. ಈ ಜ್ಯೂಸ್ ರೋಗನಿರೋಧಕ ಶಕ್ತಿ ಹೆಚ್ಚಿಸುವ ಮೂಲಕ ಆರೋಗ್ಯ ಸಮಸ್ಯೆಗಳನ್ನು ನಿವಾರಿಸುತ್ತದೆ.